ಕೊಪ್ಪಳ | ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಸ್ಥಳೀಯರ ವಿರೋಧ; ಜಿಲ್ಲಾಧಿಕಾರಿಗೆ ಮನವಿ

Date:

ಕೊಪ್ಪಳ ತಾಲೂಕಿನ ಮುದ್ದಾಬಳ್ಳಿ, ಗೊಂಡಬಾಳ ಗ್ರಾಮಗಳ ಸಮೀಪ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಮುಂದಾಗಿರುವ ಯುಕೆಇಎಂ ಕಂಪನಿಯ ನಡೆಗೆ ಸ್ಥಳೀಯ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕಾರ್ಖಾನೆ ನಿರ್ಮಾಣಕ್ಕೆ ಯಾವುದೇ ರೀತಿಯ ಅನುಮತಿ ಕೊಡಬಾರದು ಎಂದು ಜಿಲ್ಲಾಧಿಕಾರಿ ಸುರೇಶ ಹಿಟ್ನಾಳ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಇತ್ತೀಚೆಗೆ ತಾಲೂಕಿನ ಗೊಂಡಬಾಳ ಹಾಗೂ ಮುದ್ದಾಬಳ್ಳಿ ಗ್ರಾಮಗಳ ಮಧ್ಯ ನಿರ್ಮಾಣ ಮಾಡುತ್ತಿರುವ ಯುಕೆಇಎಮ್ ಅಗ್ರೀ ಇನ್ಫಾ ಲಿಮಿಟೆಡ್ ಕಂಪನಿಯು ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಎನ್‌ಒಸಿಗೆ ಅರ್ಜಿ ಸಲ್ಲಿಸಿದ್ದನ್ನು ತಿರಸ್ಕರಿಸಿ ಹಾಗೂ ವಿರೋಧ ವ್ಯಕ್ತಪಡಿಸಿ ಗೊಂಡಬಾಳ ಗ್ರಾಮ ಪಂಚಾಯತಿ ಕಾರ್ಯಾಲಯ ಬಹಿರಂಗ ನೋಟಿಸ್ ಜಾರಿ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಕಾರ್ಖಾನೆ ಏನಾದರೂ ಸ್ಥಾಪನೆಯಾದರೆ ಗೊಂಡಬಾಳ ಹಾಗೂ ಮುದ್ದಾಬಳ್ಳಿ ಗ್ರಾಮ ಕೇವಲ 500 ಮೀಟರ್ ದೂರದಲ್ಲಿವೆ. ಕಾರ್ಖಾನೆಗಳ ಸ್ಥಾಪನೆಯಿಂದ ಸುತ್ತಮುತ್ತಲ ಗ್ರಾಮಗಳ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತದೆ. ಕಾರ್ಖಾನೆಯ ಕಲುಷಿತ ನೀರಿನಿಂದ ಜೀವಜಂತುಗಳು ಹಾಗೂ ಸ್ಥಳೀಯ ಜಲಸಂಪತ್ತುಗಳು ಮಾಲಿನ್ಯಗೊಳ್ಳುತ್ತವೆ. ಈ ಪ್ರದೇಶದಲ್ಲಿ ವಿವಿಧ ಬಗೆಯ ಪಕ್ಷಿ ಪ್ರಭೇದಗಳಿದ್ದು ಅದರಲ್ಲೂ ರಾಷ್ಟ್ರೀಯ ಪಕ್ಷಿ ನವಿಲಿನ ಸಂತತಿ ಹೆಚ್ಚಿದ್ದು, ಅವುಗಳ ಸಂತತಿ ಸರ್ವನಾಶವಾಗಲಿದೆ. ಕಾರ್ಖಾನೆಯ ಉದ್ದೇಶಿತ ಜಾಗದಲ್ಲಿ ಈಗಾಗಲೇ ಸರಕಾರಿ ಮೊರಾರ್ಜಿ ವಸತಿ ಶಾಲೆಯನ್ನ ಪ್ರಾರಂಭಿಸಲು ಸರಕಾರದಿಂದ ಅನುಮೋದನೆ ನೀಡಲಾಗಿದೆ. ಕಾರ್ಖಾನೆ ಹೊಗೆಯು ಶ್ವಾಸಕೋಶದ ರೋಗಗಳು, ಚರ್ಮರೋಗಗಳು, ಟಿ.ಬಿ. ಮತ್ತು ಕ್ಯಾನ್ಸರ್‌ಗೆ ಕಾರಣವಾಗಬಹುದು. ಕಾರ್ಖಾನೆಯಲ್ಲಿ ಫಾಸ್ಪರಿಕ್ ಆಮ್ಲ, ಸುಣ್ಣದ ನೀರು, ಕಾಸ್ಟಿಕ್ ಸೋಡಾ, ಹೈಡ್ರೋಫ್ಲೋರಿಕ್ ಆಮ್ಲ, ಸೋಡಿಯಂ ಹೈಪೊಕ್ಲೋರೈಟ್, ಹೈಡ್ರೋಜನ್ ಹಾಗೂ ಪೆರಾಕ್ಸೈಡ್‌ದಂತಹ ವಸ್ತುಗಳನ್ನು ಬಳಸಲಾಗುತ್ತದೆ. ಇವು ಚರ್ಮ ಮತ್ತು ಕಣ್ಣುಗಳಲ್ಲಿ ತೀವ್ರ ಸುಡುವಿಕೆ, ಉಸಿರಾಟದ ತೊಂದರೆಗಳು ಮತ್ತು ವಿಷವನ್ನು ಉಂಟುಮಾಡುತ್ತವೆ. ಆದ್ದರಿಂದ ಕಾರ್ಖನಗಳು ಕೊಪ್ಪಳ ಜಿಲ್ಲೆ ಯಾವ ಭಾಗದಲ್ಲೂ ಬೇಡ” ಎಂದು ಮನವಿಯಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳ | ವಿವಾಹೇತರ ಸಂಬಂಧ ಆರೋಪ : ಕೊಡಲಿಯಿಂದ ಹೊಡೆದು ವ್ಯಕ್ತಿ ಕೊಲೆ

ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಮಾತನಾಡಿ, “ಉದ್ದೇಶಿತ ಸಕ್ಕರೆ ಕಾರ್ಖಾನೆ ಜಾಗ ಈಗಾಗಲೇ ಎನ್‌ಎ ಆಗಿದೆ. ಗ್ರಾಮಸ್ಥರು ಅಲ್ಲಿ ಕಾರ್ಖಾನೆ ಸ್ಥಾಪನೆ ಬೇಡ ಎನ್ನುತ್ತಿದ್ದಾರೆ. ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರದ ಗಮನಕ್ಕೆ ತರಲಾಗುವುದು” ಎಂದರು.

ಶಾಸಕ ರಾಘವೇಂದ್ರ ಹಿಟ್ನಾಳ ಮಾತನಾಡಿ, “ನಮ್ಮ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಬೇಡವೆಂದು ಸ್ಥಳೀಯರು ಮನವಿ ಮಾಡಿದ್ದಾರೆ. ಇದನ್ನು ಸರ್ಕಾರದ ಗಮನಕ್ಕೆ ತಂದು ಸ್ಥಾಪನೆ ನಿಲ್ಲಿಸಲು ಕ್ರಮ ಕೈಗೊಳ್ಳುವೆ” ಎಂದು ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...