ಕೊಪ್ಪಳ | ವಸತಿ ನಿಲಯಗಳ ಹೊರಗುತ್ತಿಗೆ ಸಿಬ್ಬಂದಿ ಬೇಡಿಕೆ ಈಡೇರಿಸುವಂತೆ ಸಾಮೂಹಿಕ ಪ್ರತಿಭಟನೆ

Date:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ನಿಲಯಗಳ ಹೊರಗುತ್ತಿಗೆ ಸಿಬ್ಬಂದಿಗಳು 10ರಿಂದ 15 ವರ್ಷಗಳಿಂದಲೂ ಕಡಿಮೆ ಸಂಬಳದಲ್ಲಿ ಕೆಲಸ ಮಾಡುತ್ತಿದ್ದು, ಸರ್ಕಾರ ಕಾರ್ಮಿಕ ಇಲಾಖೆಯಡಿ ಕನಿಷ್ಠ ವೇತನ ಪರಿಷ್ಕರಣೆ ಮಾಡಿದರೂ ಇದನ್ನು ಜಾರಿ ಮಾಡದೇ ಮೀನಾ ಮೇಷ ಮಾಡುತ್ತಿದ್ದಾರೆ. ಇಂತಹ ನಡೆಯನ್ನು ಬಿಟ್ಟು ತಕ್ಷಣ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘ ಕೊಪ್ಪಳ ಜಿಲ್ಲಾ ಸಮಿತಿಯು ಸಾಮೂಹಿಕ ಪ್ರತಿಭಟನೆ ನಡೆಸಿತು.

- Advertisement -

“ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಇಲಾಖೆಯ ಹಾಸ್ಟೆಲ್ ಸಿಬ್ಬಂದಿಗಳಿಗೆ 2 ತಿಂಗಳ ವೇತನ ನೀಡಿರುವುದೇ ಹೊರತು ಪಿಎಫ್ ಇಎಸ್ಐ ಜಮಾ ಆಗಿಲ್ಲ. ದೂರು ನೀಡಿದರೂ ಇಲಾಖೆ ಆಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಖಾಸಗಿ ಏಜೆನ್ಸಿಗಳನ್ನು ರದ್ದು ಮಾಡಿ ಬೀದರ್ ಮಾದರಿ ಸೊಸೈಟಿ ರಚಿಸಿ. ಇಲ್ಲವೇ ಸರ್ಕಾರ ನೇರವಾಗಿ ಇಲಾಖೆಯಿಂದ ವೇತನ ನೀಡಬೇಕು” ಎಂದು‌ ಪ್ರತಿಭಟನಾಕಾರರು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“8ರಿಂದ 10ವರ್ಷ ಕೆಲಸ ಮಾಡಿದ ಅನೇಕ ಸಿಬ್ಬಂದಿಗಳನ್ನು ಕೆಲಸದಿಂದ ತೆಗೆದು ಹಾಕಿ ಶಾಸಕರು, ಸಂಸದರು ನಿರ್ದೇಶಿಸಿದಂತೆ ಅಧಿಕಾರಿಗಳು ಸಿಬ್ಬಂದಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇದನ್ನು ಕೂಡಲೇ ನಿಲ್ಲಿಸಿ ಹಳೆ ಸಿಬ್ಬಂದಿಗಳಿಗೆ ಕೆಲಸ ಕೊಡಬೇಕು. ರಾಜ್ಯ ಸರ್ಕಾರ ಹಾಗೂ ಕಾರ್ಮಿಕ ಇಲಾಖೆ ಪರಿಷ್ಕರಣೆ ಕರಡು ಅಧಿಸೂಚನೆ ಹೊರಡಿಸಿರುವ ಕನಿಷ್ಠ ವೇತನವನ್ನು ತಕ್ಷಣ ಜಾರಿ ಮಾಡಬೇಕು. ಕನಿಷ್ಠ ವೇತನ ತಿಂಗಳಿಗೆ ₹36,000 ಕೊಡಬೇಕು. ಕ್ರೇಸ್ ಟೆಂಡರ್ ನೋಟಿಫಿಕೇಷನ್ ರದ್ದು ಮಾಡಿ. ಬೀದರ್ ಮಾದರಿ ಸೊಸೈಟಿ ರಚಿಸಿ, ಹೊರಗುತ್ತಿಗೆ ನೌಕರರ ಹಿತ ಕಾಪಾಡಬೇಕು. ಇಲ್ಲವೇ ಸಹಕಾರ ಸಂಘಕ್ಕೆ ಅನುಮತಿ ನೀಡಿ ಮುಂದುವರೆಸಿ ಅಥವಾ ಕೊಪ್ಪಳ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೊಸೈಟಿ ರಚಿಸಿ ವೇತನ ನೀಡಬೇಕು”‌ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಭಾರೀ ಮಳೆ ಹಿನ್ನೆಲೆ ಆರೆಂಜ್ ಅಲರ್ಟ್ ಘೋಷಣೆ: ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ನಿವೃತ್ತಿವರೆಗೆ ಎಲ್ಲಾ ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಸೇವಾ ಭದ್ರತೆ ಕೊಟ್ಟು ಕಾಯಂ ಮಾಡಬೇಕು. ಬಾಕಿ ಇರುವ ವೇತನ ತಕ್ಷಣ ಕೊಡಬೇಕು. ಕಾರ್ಮಿಕ ಇಲಾಖೆಯ ಕಾನೂನು ಪ್ರಕಾರ ವಾರದ ರಜೆ ನೀಡಬೇಕು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಿಬ್ಬಂದಿಗಳಿಗೆ 2 ತಿಂಗಳ ಬಾಕಿ ವೇತನ ಕೂಡಲೇ ಬಿಡುಗಡೆ ಮಾಡಬೇಕು. ಸ್ವಿಸ್ ಏಜೆನ್ಸಿಯವರು ಯಾವುದೇ ಸಿಬ್ಬಂದಿಗೂ ಸರಿಯಾಗಿ ಸ್ಪಂದನೆ ಮಾಡುತ್ತಿಲ್ಲ. ಪಿಎಫ್ ಇಎಸ್ಐ ಕಟ್ಟಿಲ್ಲ. ಐಡಿ ಕಾರ್ಡ್‌ ಯಾವುದೇ ಮೂಲಭೂತ ಸೌಲಭ್ಯ ನೀಡದೇ ಇರುವುದರಿಂದ ಕೂಡಲೇ ಸ್ವಿಸ್ ಏಜೆನ್ಸಿಯನ್ನು ಕಪ್ಪು ಪಟ್ಟಿಗೆ ಸೇರಿಸಬೇಕು” ಎಂದು ಒತ್ತಾಯಿಸಿದರು.

ಗ್ಯಾನೇಶ ಕಡಗದ, ಮಹ್ಮದ್ ರಫೀಕ್, ಫಕೀರಪ್ಪ, ಹುಸೇನಪ್ಪ, ಬಸವರಾಜ, ನಿರುಪಾದಿ, ನೂರ್‌ಪಾಷ, ಮಂಜು ಜೋಶಿ, ಕನಕರಾಯ ಡಗ್ಗಿ, ತೊಂಡೆಪ್ಪ, ಬಾಳೇಶ, ಮಾರುತಿ, ಖಾಸಿಂ ಸಾಬ ಸರ್ದಾರ್, ಸುಂಕಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...