ಕೊಪ್ಪಳ | ಕಾರಾಗೃಹ ಬಂಧಿಗಳಿಗೆ ಮಾನಸಿಕ, ದೈಹಿಕ ಆರೋಗ್ಯ ಬಹುಮುಖ್ಯ: ರಾಮ್ ಎಲ್ ಅರಸಿದ್ದಿ

Date:

Advertisements

ಮಾನಸಿಕ ಒತ್ತಡದಿಂದ ಜರ್ಜರಿತರಾಗಿ ತಪ್ಪು ಮಾಡಿ ಅಪರಾಧಿಗಳಾಗುವ ಕಾರಾಗೃಹ ಸೇರುವವರಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಬಹಳ ಮುಖ್ಯವಾಗಿದ್ದು, ಅದು ಕ್ರೀಡೆಗಳಿಂದ ಮಾತ್ರ ಸಿಗಲು ಸಾಧ್ಯ ಎಂದು ಕೊಪ್ಪಳ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಮ್‌ ಎಲ್‌ ಅರಸಿದ್ದಿ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ), ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಖಿ ಒನ್ ಸ್ಟಾಪ್ ಸೆಂಟರ್, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಕೊಪ್ಪಳ ಇವರ ಸಹಯೋಗದಲ್ಲಿ ಜಿಲ್ಲಾ ಕಾರಾಗೃಹ ಬಂಧಿಗಳಿಗಾಗಿ ಹಮ್ಮಿಕೊಂಡಿದ್ದ ‘ಸ್ವಾಸ್ಥ್ಯ ಸಂಕಲ್ಪ’ ಎಂಬ ಕ್ರೀಡೋತ್ಸವದಲ್ಲಿ ಅವರು ಮಾತನಾಡಿದರು.

“ಮನಸ್ಸಿನ ಆಲೋಚನೆಗಳು ಸರಿ ಇಲ್ಲದಿರುವಾಗ ವ್ಯಕ್ತಿ ಅಪರಾಧಿಕ ಚಟುವಟಿಕೆಗಳ ಕಡೆ ಗಮನ ನೀಡುತ್ತಾನೆ. ಬಂಧಿಗಳು ತಿಳಿವಳಿಕೆಯಿಲ್ಲದೆ ಮಾಡಿದ ತಪ್ಪುಗಳನ್ನು ಮರೆತು ಮಾನಸಿಕವಾಗಿ ಸದೃಢರಾಗುವಲ್ಲಿ ಕ್ರೀಡೆಯು ಬಹಳ ಮುಖ್ಯ ಪಾತ್ರವಹಿಸುತ್ತದೆ. ಉಳಿದಂತೆ ಸಖಿ ಒನ್ ಸ್ಟಾಪ್ ಸೆಂಟರ್ ‌ನ ಅಧಿಕಾರಿ ಯಮುನಾ ಬೆಸ್ತರ ಅವರಿಗೆ ನಮ್ಮ ಸಂಪೂರ್ಣ ಬೆಂಬಲ ಇರುತ್ತದೆ. ತಪ್ಪುಗಳು ಆಗುವುದು ಸಹಜ ಆದರೆ, ಸಿಟ್ಟಿನ ಕೈಗೆ ಬುದ್ದಿ ಕೊಡದೇ ಅಪರಾಧದಂತ ತಪ್ಪುಗಳನ್ನು ಮಾಡಬೇಡಿ” ಎಂದು ಕೈದಿಗಳಿಗೆ ಕಿವಿಮಾತು ಹೇಳಿದರು.

WhatsApp Image 2025 09 23 at 10.28.42 AM

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಚಂದ್ರಶೇಖರ್ ಮಾತನಾಡಿ, “‘ಸಖಿ ಒನ್ ಸ್ಟಾಪ್ ಸೆಂಟರ್’ ಸಂಸ್ಥೆಯ ಮೂಲಕ ಕಾರಾಗೃಹದಲ್ಲಿ ಬಂಧಿತರಾದವರಿಗೆ ಕ್ರೀಡೆಗಳನ್ನು ಆಡಿಸುವುದರ ಮೂಲಕ ಅವರ ಮಾನಸಿಕ ಆರೋಗ್ಯವನ್ನು ಸುಧಾರಿಸಿಕೊಳ್ಳಲು ಸಹಾಯ ಮಾಡಲಾಗುತ್ತದೆ. ಯಾರೂ ತಪ್ಪು ಮಾಡಬೇಕೆಂದು ಮಾಡುವುದಿಲ್ಲ‌. ಸಮಯ ಹಾಗೂ ಸಂದರ್ಭ ಅವರನ್ನು ಆವೇಶಕ್ಕೆ ದೂಡುತ್ತವೆ. ಆಗ ಅವರು ಆರೋಪಿ ಸ್ಥಾನದಲ್ಲಿ ನಿಲ್ಲುತ್ತಾರೆ. ನಿರಂತರವಾಗಿ ಪ್ರೇರಣೆ ಮತ್ತು ಮನಪರಿವರ್ತನೆಗೆ ಸಹಾಯ ಮಾಡುವ ನಿಟ್ಟಿನಲ್ಲಿ ಇಂತಹ ಕ್ರೀಡಾ ಕಾರ್ಯಕ್ರಮಗಳು ನಡೆಯುತ್ತಿರಬೇಕು ಆಗುತ್ತಿರಬೇಕು” ಎಂದು ಹೇಳಿದರು.

ಇದನ್ನೂ ಓದಿ: ಕೊಪ್ಪಳ | ಎಂಎಸ್‌ಪಿಎಲ್ ಕಾರ್ಖಾನೆ ವಿಸ್ತರಣೆ: 27 ಹೊಗೆ ಕೊಳವೆ ಬರುವುದಾಗಿ ಅಲ್ಲಮಪ್ರಭು ಬೆಟ್ಟದೂರು ಕಳವಳ

ಕಾರ್ಯಕ್ರಮದಲ್ಲಿ ಕೊಪ್ಪಳದ ಸರಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಕ ಬಸವರಾಜ್, ಜಿಲ್ಲಾ ಕಾರಾಗೃಹದ ಅಧೀಕ್ಷಕ ಅಂಬರೀಶ್ ಎಸ್ ಪೂಜಾರ್, ಬಳ್ಳಾರಿಯ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಗಾಯತ್ರಿ, ನಗರ ಪೊಲೀಸ್ ಠಾಣೆೈ ಪೊಲೀಸ್ ಇನ್ಸ್ಪೆಕ್ಟರ್ ಜೈಪ್ರಕಾಶ್, ಬಿ ಸಿ ಟ್ರಸ್ಟ್‌ನ ಜಿಲ್ಲಾ ನಿರ್ದೇಶಕ ಪ್ರಕಾಶ್ ರಾವ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಶ್ರೀದೇವಿ, ಮಹಿಳಾ ಸಬಲೀಕರಣ ಘಟಕದ ಫಾತಿಮಾ, ಸಖಿ ಒನ್ ಸ್ಟಾಪ್ ಸೆಂಟರ್ ಘಟಕ ಆಡಳಿತಾಧಿಕಾರಿ ಯಮುನಾ, ಹುಲಿಗೆಮ್ಮ, ಕು ನಿರ್ಮಲಾ, ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಕಾರಾಗೃಹ ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X