ಕರಿಯಪ್ಪ ಗುಡಿಮನಿ | ಜಾತಿಗಣತಿಯಲ್ಲಿ ʼಮಾದಿಗʼ ಎಂದು ನಮೂದಿಸಿ: ಕರಿಯಪ್ಪ ಗುಡಿಮನಿ

Date:

Advertisements

ರಾಜ್ಯ ಸರ್ಕಾರ ಜಾತಿಗಣತಿ ಸಮೀಕ್ಷೆ ನಡೆಸುತ್ತಿದ್ದು, ಎಲ್ಲರೂ ಕಡ್ಡಾಯವಾಗಿ ಭಾಗಿಯಾಗಬೇಕು. ಮಾದಿಗ ಸಮಾಜದ ಮುಖಂಡರು ಮೇ 17ರವರೆಗೂ ಯಾವುದೇ ಒತ್ತಡ ಕೆಲಸಗಳನ್ನು ಬದಿಗಿಟ್ಟು, ಗಣತಿದಾರರು ತಮ್ಮ ಊರಿಗೆ ಹಾಗೂ ವಾರ್ಡ್‌ಗಳಿಗೆ ಬಂದಾಗ ಕಡ್ಡಾಯವಾಗಿ ಹಾಜರಾಗಿ ಜಾತಿ ಕಲ್ಂನಲ್ಲಿ ಮಾದಿಗ ಧೈರ್ಯದಿಂದ ಮತ್ತು ಯಾವುದೇ ಸಂಕೋಚವಿಲ್ಲದೆ ಬರೆಯಿಸಬೇಕು’ ಎಂದು ಸಾಮಾಜಿಕ ಹೋರಾಟಗಾರ ಕರಿಯಪ್ಪ ಗುಡಿಮನಿ ಮಾದಿಗ ಸಮುದಾಯಕ್ಕೆ ಮನವಿ ಮಾಡಿದರು.

ಈ ಕುರಿತು ಕೊಪ್ಪಳದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, “ನ್ಯಾ. ನಾಗಮೋಹನ್ ದಾಸ್ ಆಯೋಗ ಒಳಮೀಸಲಾತಿ ಜಾರಿಗಾಗಿ ಸಮೀಕ್ಷೆ ನಡೆಸಲು ಗಣತಿದಾರರು, ಪರಿಶಿಷ್ಟ ಜಾತಿಗಳಲ್ಲಿನ ಮೂಲಜಾತಿಗಳ ಸಮೀಕ್ಷೆಗಾಗಿ ಮನೆ-ಮನೆ ಭೇಟಿ ನೀಡುತ್ತಾರೆ. ಆಗ ಮೂಲ ಜಾತಿಗಳ ಮಾಹಿತಿ ಕೇಳಿದಾಗ, ಆದಿ ದ್ರಾವಿಡ, ಆದಿ ಆಂಧ್ರ, ಆದಿ ಕರ್ನಾಟಕ ಎಂದು ಹೇಳಬೇಡಿ ಬದಲಾಗಿ ‘ಮಾದಿಗ’ ಎಂದು ಹೇಳಿ ಬರೆಯಿಸಬೇಕು” ಎಂದಿದ್ದಾರೆ.

“ನಾಗಮೋಹನ್ ದಾಸ್ ಅವರು ನೀಡಿರುವ ವರದಿಯಂತೆ ರಾಜ್ಯ ಸರ್ಕಾರ ಕೂಡ ಒಪ್ಪಿಗೆ ಸೂಚಿಸಿದೆ. ಅದರಂತೆ ಮೇ 5ರಿಂದ ಜಾತಿಗಣತಿ ಆರಂಭವಾಗಿದ್ದು, ಯಾರೂ ಕೂಡ ಈ ಬಗ್ಗೆ ನಿರ್ಲಕ್ಷ್ಯ ಮಾಡದೆ ಮಾದಿಗ ಸಮುದಾಯದ ಎಲ್ಲ ಪ್ರಜ್ಞಾವಂತರು, ಹಿರಿಯರು, ರಾಜಕೀಯ ನಾಯಕರು, ವಿದ್ಯಾರ್ಥಿ ಸಮೂಹ, ಮುಖಂಡರು ದ್ವಂದ್ವ ನೀತಿ ಅನುಸರಿಸದೆ ಎಚ್ಚರಿಕೆಯಿಂದ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಎಲ್ಲರೂ ಒಗ್ಗೂಡಿ ಮಾದಿಗ ಎಂದು ಅಧಿಕಾರಿಗಳಿಗೆ ಮಾಹಿತಿ ನೀಡಬೇಕು” ಎಂದು ವಿನಂತಿಸಿದರು.‌

Advertisements

ಇದನ್ನೂ ಓದಿದ್ದೀರಾ? ಕೊಪ್ಪಳ | ಅಳಿಯದ ಅಸ್ಪೃಶ್ಯತೆ, ದೌರ್ಜನ್ಯ ಪ್ರಕರಣಗಳು; ಕ್ರಮ ಕೈಗೊಳ್ಳಬೇಕಾದವರಾರು?

“ಈ ಸಮೀಕ್ಷೆಯಲ್ಲಿ 101 ಸಮುದಾಯಗಳು ನಿಮ್ಮ ಸಮುದಾಯದ ಮೂಲ ಜಾತಿಯ ಹೆಸರನ್ನು ಬರೆಯಿಸುವುದನ್ನು ಮರೆಯಬೇಡಿ. ಅದರಲ್ಲಿ ಮಾದಿಗ ಸಮುದಾಯ ಕಡ್ಡಾಯವಾಗಿ ಸಮೀಕ್ಷೆಗೆ ಬರುವ ಸಿಬ್ಬಂದಿಗಳೊಂದಿಗೆ ಸಹಕರಿಸಿ, ಬೆಂಬಲಿಸಿ ನಿಮ್ಮ ಮೂಲ ಜಾತಿ ಮಾದಿಗ ಎಂದು ಬರೆಯಿಸಬೇಕು” ಎಂದು ಕರ್ನಾಟಕ ಮಾದಿಗ ರಕ್ಷಣಾ ವೇದಿಕೆಯಿಂದ ಕರೆಕೊಟ್ಟರು.

ಕರಿಯಪ್ಪ ಗುಡಿಮನಿ, ಮುದಗಕಪ್ಪ ಎಂ ಹೊಸಮನಿ, ದುರಗೇಶ ಬರಗೂರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X