ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆಯಡಿ ಕೆರೆ ಹೂಳು ಎತ್ತುವ ಕೆಲಸ ಮಾಡುವಾಗ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕನಕಗಿರಿ ತಾಲೂಕಿನ ನಾಗಲಾಪುರ ಕೆರೆಯಲ್ಲಿ ಕೆಲಸ ಮಾಡುವ ವೇಳೆ ಪ್ರಕಾಶ್ ವಿರೂಪಣ್ಣ (23) ಎಂಬ ಕಾರ್ಮಿಕ ಮೃತಪಟ್ಟಿದ್ದಾರೆ.
ಕೆಲಸ ಮಾಡುತ್ತಿದ್ದ ವೇಳೆ ಪ್ರಕಾಶ್ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಅವರನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯ ಮೃತಪಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಕಲುಷಿತ ನೀರು ಸೇವಿಸಿ ಮಕ್ಕಳು ಸೇರಿ 18 ಮಂದಿ ಅಸ್ವಸ್ಥ; ಡಿಸಿ ಭೇಟಿ ಪರಿಶೀಲನೆ
ಬೆಳಿಗ್ಗೆ 8.30ಕ್ಕೆ ಕೆಲಸಕ್ಕೆ ಬಂದಿದ್ದ ಪ್ರಕಾಶ 8.45ರ ವೇಳೆಗೆ ಅಸ್ವಸ್ಥನಾದ ಎಂದು ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ತಿಳಿಸಿದ್ದಾರೆ.
ಘಟನೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕನಕಗಿರಿಯ ಶಿವರಾಜ ತಂಗಡಗಿ ಪ್ರತಿಕ್ರಿಯಿಸಿದ್ದು, “ನರೇಗಾ ಕಾರ್ಮಿಕನ ಸಾವಿನ ಕುರಿತು ಮಾಹಿತಿ ಲಭ್ಯವಾಗಿದೆ. ಸಾವಿಗೆ ಸ್ಪಷ್ಟ ಕಾರಣ ಏನೆಂಬುದು ಗೊತ್ತಾಗಿಲ್ಲ. ಅವರ ಮನೆಗೆ ಭೇಟಿ ನೀಡುವೆ” ಎಂದು ತಿಳಿಸಿದರು.