ಕೊಪ್ಪಳ | ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ : ಆರೋಪಿಗಳ ಕಠಿಣ ಶಿಕ್ಷೆಗೆ ಆಗ್ರಹ

Date:

Advertisements

ಬೆಂಗಳೂರಿನ ತಾವರೆಕೆರಿಯಲ್ಲಿ ಅಪ್ರಾಪ್ತ ಬಾಲಕಿಗೆ ಅತ್ಯಾಚಾರಗೈದು ಕೊಲೆ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡದೆ ಕಠಿಣ ಶಿಕ್ಷೆ ವಿಧಿಸಬೇಕು. ಸಂತ್ರಸ್ತ ಕುಟುಂಬಕ್ಕೆ ಸರಕಾರ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಎಸ್‌ಸಿ, ಎಸ್‌ಟಿ ಅಲೆಮಾರಿ ಬುಡಕಟ್ಟು ಮಹಾಸಭಾ ಕೊಪ್ಪಳ ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು.

ಈ ಕುರಿತು ಎಸ್‌‌ಸಿ, ಎಸ್‌ಟಿ ಅಲೆಮಾರಿ ಬುಡಕಟ್ಟು ಸಮುದಾಯ ಜಿಲ್ಲಾ ಸಂಯುಕ್ತ ಜಂಟಿಯಾಗಿ ಪ್ರತಿಭಟಿಸಿ ಜಿಲ್ಲಾಧಕಾರಿಗಳ ಮುಖಾಂತರ ಸಿಎಂ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಸಮುದಾಯದ ಜಿಲ್ಲಾಧ್ಯಕ್ಷ ಸಂಜಯ್‌ ದಾಸ್ ಕೌಜಗೇರಿ ಮಾತನಾಡಿ, ʼಬೆಂಗಳೂರಿನಲ್ಲಿ ಕೊಪ್ಪಳದ ಸಿಳ್ಳಿಕ್ಯಾತ ಅಲೆಮಾರಿ ಸಮುದಾಯದ ಮಗುವನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ. ಹೊಟ್ಟೆಪಾಡಿಗಾಗಿ ವಲಸೆ ಹೋಗಿದ್ದ ಹೆಣ್ಣು ಮಕ್ಕಳಿಗೆ ಬೆಂಗಳೂರಿನಲ್ಲಿ ಸುರಕ್ಷತೆಯೇ ಇಲ್ಲದಂತಾಗಿದೆ. ಇಂತಹ ಬಡ ಕುಟುಂಬಗಳ ಮೇಲೆ ಅನ್ಯಾಯ ಆಗಿರುವುದು ಖಂಡನೀಯವಾಗಿದೆ. ಸರ್ಕಾರ ಈ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಒದಗಿಸಬೇಕುʼ ಎಂದು ಒತ್ತಾಯಿಸಿದರು.

Advertisements

ಮುಖಂಡ ಕೃಷ್ಣವೇಣಿ ಪಿ.ಚನ್ನದಾಸರ ಮಾತನಾಡಿ, ʼಅಲೆಮಾರಿ ಬುಡಕಟ್ಟು ಸಮುದಾಯಗಳು ಒಂದು ಊರಿನಿಂದ ಮತ್ತೊಂದು ಊರಿಗೆ ವಲಸೆ ಹೋಗಿ ಬೇರೆಬೇರೆ ವ್ಯಾಪಾರ ಮಾಡಿಕೊಂಡು ಉಪಜೀವನ ನಡೆಸುತ್ತಾರೆ. ಮೂಲ ಕಸುಬು ನಡೆಸಿದರೆ ಉಪಜೀವನ ನಡೆಸಲು ಸಾಧ್ಯವಾಗದ ಕಾರಣಕ್ಕೆ ಹೊಟ್ಟೆಪಾಡಿಗಾಗಿ ನಗರಗಳಿಗೆ ವಲಸೆ ಹೋಗುವುದು ಅನಿವಾರ್ಯವಾಗಿದೆ. ವಲಸಿಗ ಮಕ್ಕಳ ಮೇಲೆ ಅತ್ಯಾಚಾರ,‌ ಕೊಲೆ ನಡೆಸುವುದು ಕೌರ್ಯ ಮನಸ್ಥಿತಿಯಾಗಿದೆ. ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕುʼ ಎಂದು ಒತ್ತಾಯಿಸಿದರು.

ಶಿವಣ್ಣ ಕಲಕೇರಿ,‌ ಬಸವರಾಜ್ ವಿಭೂತಿ, ಲೋಕೇಶ್ ಭಜಂತ್ರಿ, ಜಯಣ್ಣ ಸಿಂದೋಳ್ಳಿ,‌ ಬಸಣ್ಣ ವಿಭೂತಿ, ರಮೇಶ್ ಚನ್ನದಾಸರ,‌ ಗೌರಿ.ಡಿ.ಗೋನಾಳ,‌ ರಾಮಕೃಷ್ಣ ಹೆಚ್.ಚನ್ನದಾಸರ,‌ ತಿಮ್ಮಣ್ಣ ದಾಸರ, ನಾಗರಾಜ್ ಮಾಲದಾಸರ, ಬಸವರಾಜ್ ಚನ್ನದಾಸರ ಹಿರೇಮನ್ನಾಪೂರ,‌ ವಿರುಪಣ್ಣ ಕಲಕೇರಿ, ಕರಿಯಪ್ಪ ದಾಸರ, ಹನುಮೇಶ್ ಚನ್ನದಾಸರ ಈಳೀಗನೂರು, ಗವಿಸಿದ್ದಪ್ಪ ಹಲಗಿ, ಶಶಿಕಲಾ ಮಠದ, ಹನುಮಂತಪ್ಪ ಜಿ ಸುಂಕಾಪುರ, ಯಂಕಪ್ಪ ಹೆಬ್ಲಿ, ಮಹೇಶ್ ಕೊಂಡಪಲ್ಲಿ. ಗಿಡ್ಡಪ್ಪ,‌ ದುರ್ಗಪ್ಪ, ಆರ್.ಕೃಷ್ಣ ಬುಡಜಂಗಮ, ಬಸವರಾಜ್ ಶೀಲವಂತರ್, ಎಸ್.ಎ.ಗಫಾರ್, ಗಾಳೆಪ್ಪ ಮುಂಗೋಲಿ, ಮಖಬೂಲ್ ರಾಯಚೂರು, ಚನ್ನಬಸಪ್ಪ ಅಪ್ಪಣ್ಣವರ್, ಪರಶುರಾಮ ಕೆರೆಹಳ್ಳಿ,‌ ನಿಂಗಪ್ಪ ಬೆಣಕಲ್,‌ ಮೈಲಪ್ಪ ಮಾದಿನೂರು, ಮಾರುತಿ ದೊಡ್ಡಮನಿ ಮತ್ತಿತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X