ಕೊಪ್ಪಳ | ಈದ್ಗಾ ಪ್ರಾರ್ಥನಾ ಮಂದಿರದ ಗೋಡೆಯ ಮೇಲೆ ಅಶ್ಲೀಲ ಚಿತ್ರ ಬಿಡಿಸಿದ ಕಿಡಿಗೇಡಿಗಳು

Date:

Advertisements

ಖಬರಸ್ಥಾನದಲ್ಲಿ ಶವ ಹೂಳಲು ಅವಕಾಶ ಮಾಡಿ ಕೊಡದೆ, ಮುಸ್ಲಿಂ ಯುವಕರ ಮೇಲೆ ಹಲ್ಲೆ ಮಾಡಿರುವ ಘಟನೆ ಮಾಸುವ ಮುನ್ನವೇ ಕಿಡಿಗೇಡಿಗಳು ಈದ್ಗಾ ಪ್ರಾರ್ಥನಾ ಮಂದಿರದ ಗೋಡೆಯ ಮೇಲೆ ಅಶ್ಲೀಲ ಚಿತ್ರ ಬಿಡಿಸುವ ಮೂಲಕ ಮತ್ತೊಮ್ಮೆ ಕೋಮುಸಾಮರಸ್ಯ ಕದಡಲು ಸಂಚು ನಡೆಸಿದ್ದಾರೆಂಬ ಆರೋಪಗಳು ಕೇಳಿಬರುತ್ತಿವೆ.

ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ಕಳೆದ ಫೆಬ್ರವರಿ ತಿಂಗಳು ಮುಸ್ಲಿಂ ಯುವಕರ ಮೇಲೆ ಹಲ್ಲೆ ನಡೆದಿತ್ತು. ಕನಕಗಿರಿ ಪಟ್ಟಣ ಎಲ್ಲ ಸಮುದಾಯಗಳು ಒಂದಾಗಿ ಕೋಮುಸಾಮರಸ್ಯ, ಸಹಬಾಳ್ವೆಯಿಂದ ಜೀವನ ನಡೆಸುತ್ತಿವೆ. ಅದರೆ, ಎರಡು ಕೋಮುಗಳ ಮಧ್ಯೆ ಕಂದಕ ಸೃಷ್ಟಿಸಿ ಪಟ್ಟಣದ ಸಹಬಾಳ್ವೆ, ಸಾಮರಸ್ಯಕ್ಕೆ ಬೆಂಕಿಹಚ್ಚಿದ ಕೆಲಸ ಮತ್ತೆ ನಡೆಯುತ್ತಿರುವುದು ಕೇಳಿಬರುತ್ತಿದೆ.

ಮುಸಲ್ಮಾನ ಬಾಂಧವರ ರಂಝಾನ್‌ ಹಬ್ಬ ಆರಂಭವಾಗಿರುವ ಬೆನ್ನಲ್ಲೇ ಕಿಡಿಗೇಡಿಗಳು ಈದ್ಗಾ ಪ್ರಾರ್ಥನಾ ಕಟ್ಟಡದ ಮೇಲೆ ಅಶ್ಲೀಲ ಚಿತ್ರ ಬಿಡಿಸಿ ಕೋಮುಸಾಮರಸ್ಯ ಕದಡಲು ಮುಂದಾಗಿದ್ದು, ತಿಳಿದುಬಂದಿದೆ.

Advertisements

ಗೋಡೆ ಮೇಲೆ ಅಶ್ಲೀಲ ಚಿತ್ರ ನೋಡಿದ ಇಸ್ಲಾಂ ಕಮಿಟಿಯ ಸದಸ್ಯ ರಿಯಾಜ್ ಈ ದಿ‌ನ.ಕಾಮ್ನೊಂದಿಗೆ ಮಾತನಾಡಿ, “ಯಾರೋ ಕಿಡಿಗೇಡಿಗಳು ಮಾರ್ಚ್ 2ರಂದು ನಮ್ಮ ಈದ್ಗಾ ಪ್ರಾರ್ಥನಾ ಕಟ್ಟಡದ ಗೋಡೆ ಮೇಲೆ ಅಸಹ್ಯವಾದ ಚಿತ್ರ ಬಿಡಿಸಿದ್ದಾರೆ. ವಿಷಯ ತಿಳಿದು ಪೋಲೀಸರು ಬಂದು ಚಿತ್ರ ಅಳಿಸಲು ಸೂಚಿಸಿ, ಅದನ್ನು ಅಳಿಸಿ ಹಾಕಿದ್ದಾರೆ” ಎಂದು ಕರೆಯ ಮೂಲಕ ವಿಷಯ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮಹಿಳಾ ದಿನಾಚರಣೆ; ಮಾರ್ಚ್ 6ರಂದು ಮಹಿಳಾ ಸಾಂಸ್ಕೃತಿಕ ಹಬ್ಬ-2025

“ಘಟನೆ ವಿರುದ್ಧ ಪಿರ್ಯಾದಿ ಕೊಡಲು ಇಸ್ಲಾಮ್ ಕಮಿಟಿ ಸದಸ್ಯರು ಹೋದಾಗ ಸಿಬ್ಬಂದಿ, ‘ಅಧಿಕಾರಿಗಳು ಜಾತ್ರೆಗೆ ಬಂದೋಬಸ್ತ್‌ಗೆ ಹೋಗಿದ್ದಾರೆ’ ಎಂದು ಸಬೂಬು ಹೇಳಿದ್ದಾರೆ. ಎರಡನೇ ದಿನ ಮಾರ್ಚ್ 3ರಂದು ಪಿರ್ಯಾದಿ ತೆಗೆದುಕೊಂಡಿದ್ದಾರೆ” ಎಂದು ಅಲ್ತಾಫ್‌ ಈ ದಿನ.ಕಾಮ್‌ಗೆ ಹೇಳಿದರು.

ಪೋಲೀಸರು ಆರೋಪಿಗಳನ್ನು ಪತ್ತೆಹಚ್ಚಿ ನಾವು ಸೂಕ್ತಕ್ರಮ ಕೈಗೊಳ್ಳುತ್ತೇವೆಂದು ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X