ತಾಯಿಯೊಬ್ಬಳು ತನ್ನ 5 ವರ್ಷದ ಮಗಳೊಂದಿಗೆ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಯನಗರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಮಂಗಲ ಎಂದು ಗುರುತಿಸಲಾಗಿದ್ದು, ಗಂಡನ ನಿರಂತರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮೃತ ಮಹಿಳೆಯ ಪತಿ ರಾಘವೇಂದ್ರ ಖಾಸಗಿ ಶಾಲೆಯಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಾರೆ ಎಂದು ಹೇಳಲಾಗಿದೆ.
ಮಹಿಳೆಯು ತನ್ನ 5 ವರ್ಷದ ಮಗಳೊಂದಿಗೆ ಬೆಂಕಿ ಹಂಚಿಕೊಂಡಿದ್ದು, ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾಳೆ, ಗಾಯಾಳು ಮಗುವನ್ನು ಬಳ್ಳಾರಿಯ ಬೀಮ್ಸ್ ಆಸ್ಪತ್ರೆಗೆ ಕೊಂಡೊಯೊಯ್ಯುವಾಗ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.
ಈ ವರದಿ ಓದಿದ್ದೀರಾ? ಯಾದಗಿರಿ | ಅಂಬೇಡ್ಕರ್ ಅವರ ಹೃದಯ ವೈಶಾಲ್ಯತೆ ನಮಗೆ ದಾರಿದೀಪ : ಶ್ಯಾಮ ಕಾಳೆ
ಘಟನೆಯ ವೇಳೆ ಸ್ಥಳೀಯರು ಧಾವಿಸಿದ್ದಾರೆ. ಅಗ್ನಿಶಾಮಕ ದಳ ಬೆಂಕಿ ಶಮನಗೊಳಿಸಲು ಮುಂದಾಗಿದೆ. ಈ ಕುರಿತು ಪೋಲೀಸ್‌ರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆತ್ತಿದ್ದಾರೆ ಎಂದು ತಿಳಿದು ಬಂದಿದೆ.