ಕೊಪ್ಪಳ | ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣಿಗೆ ಶರಣಾದ ತಾಯಿ.

Date:

ತಾಯಿಯೇ ತನ್ನಿಬ್ಬರು ಮಕ್ಕಳನ್ನು ಕೊಂದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ನಡೆದಿದೆ.

- Advertisement -

ಗ್ರಾಮದ ಲಕ್ಷ್ಮೀ‌ ಹನುಮೇಶ್ ಭಜಂತ್ರಿ(30), ರಮೇಶ(3) ಹಾಗೂ ಸಾನ್ವಿ ಒಂದು‌ ವರ್ಷದ ಹೆಣ್ಣು ಮಗುವನ್ನು ಕೊಂದು ತಾನೂ ನೇಣು ಬಿಗಿದುಕೊಂಡು 3 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...
IMG 20251027 WA0005 1

ಘಟನೆಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲವಾದರೂ, ಕೌಟುಂಬಿಕ ಕಲಹವೇ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಎಂದು ಕೇಳಿ ಬರುತ್ತಿದೆ. ಮೃತ ಲಕ್ಷ್ಮೀಯನ್ನು ಕೊಪ್ಪಳ ತಾಲೂಕಿನ ಕರ್ಕಿಹಳ್ಳಿಗೆ ಮದುವೆ ಮಾಡಿಕೊಡಲಾಗಿದ್ದು, ಮದುವೆಯಾದ ಮೇಲೆ ಗಂಡನೊಂದಿಗೆ ತವರೂರಾದ ಬೆಣಕಲ್‌ಗೆ ಬಂದು ವಾಸವಾಗಿದ್ದರು ಎಂದು ತಿಳಿದು ಬಂದಿದೆ.

ಈ ಸುದ್ಧಿ ಓದಿದ್ದೀರಾ? ಕೊಪ್ಪಳ | ದಲಿತ ಯುವಕನ ಮನೆಗೆ ಬೆಂಕಿ ಹಚ್ಚಿದವರ ವಿರುದ್ಧ ಕ್ರಮಕ್ಕೆ ಎಸ್‌ಎಸ್‌ಎಚ್‌ಎಸ್ ಆಗ್ರಹ

ಈ ಕುರಿತು ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಾರಂಭಿಸಲಾಗಿದೆ. ಗ್ರಾಮದಲ್ಲಿ ಈ ಪ್ರಕರಣದಿಂದ ಶೋಕದ ವಾತಾವರಣ ಆವರಿಸಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...