ಕೊಪ್ಪಳ | ಪ್ರೀತಿ ವಿಚಾರಕ್ಕೆ ಯುವಕನ ಕೊಲೆ: ಓರ್ವ ಆರೋಪಿ ಶರಣಾಗತಿ

Date:

ಪ್ರೀತಿ ವಿಚಾರಕ್ಕೆ ಯುವಕನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ.

- Advertisement -

ಪ್ರೀತಿ ವಿಚಾರಕ್ಕೆ ನಾಲ್ವರು ಯುವಕರು ನಗರದ ನಿವಾಸಿಯಾದ ಗವಿಸಿದ್ಫಪ್ಪ ನಾಯ್ಕ್ ಎಂಬುವನನ್ನು ನಿರ್ಮಿತಿ ಕೇಂದ್ರ ನಗರದಲ್ಲಿನ ಬಹದ್ದೂರ್ ಬಂಡಿ ಗ್ರಾಮಕ್ಕೆ ಹೋಗುವ ರಸ್ತೆ ಬದಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನಾಲ್ವರು ಯುವಕರು ಈ ಕೃತ್ಯ ಮಾಡಿದ್ದು, ಒಬ್ಬನು ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಉಳಿದವರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ನಗರದ ಗೌರಿ ಅಂಗಳದ ಓಣಿಯ ಅಪ್ರಾಪ್ತ ಮುಸ್ಲಿಂ ಬಾಕಿಯನ್ನು ಕಳೆದ 2-3 ವರ್ಷಗಳಿಂದ‌ ಗವಿಸಿದ್ದಪ್ಪ ನಾಯಕ್ ಪ್ರಿತಿಸುತ್ತಿದ್ದು, ಅದೇ ಬಾಲಕಿಯನ್ನು ಸಾದಿಕ್ ಕೂಡ ಪ್ರೀತಿಸುತ್ತಿದ್ದ ಆರೋಪಿ ಜೊತೆಗಿನ ಪ್ರೀತಿ ಸಂಬಂಧ ಮುರಿದು‌ ಬಿದ್ದಿದ್ದೇ ಇಬ್ಬರ ವೈಮನಸ್ಸಿಗೆ ಕಾರಣವಾಗಿದೆ ಎಂದು ತಿಳಿದು ಬಂದಿದೆ. ಗವಿಸಿದ್ದಪ್ಪ ಪ್ರೀತಿಸುತ್ತಿದ್ದ ಬಾಲಕಿಯ ಜೊತೆ ಮನೆ ಬಿಟ್ಟು ಓಡಿ ಹೋಗಿದ್ದೂ ಇದೆ. ಈ ಕುರಿತು ಹಲವು ಬಾರಿ ಪಂಚಾಯತಿ ಮಾಡಲಾಗಿತ್ತು. ಅಷ್ಟಾದರೂ ಕೊಲೆಯಾದ ಗವಿಸಿದ್ದಪ್ಪ ನಾಯಕ್ ಹಾಗೂ ಬಾಲಕಿಯ ಮಧ್ಯ ಪ್ರೀತಿ ಮುಂದುವರೆದಿತ್ತು ಎಂದು ಹೇಳಲಾಗುತ್ತದೆ. ಹೀಗಾಗಿ ಗವಿಸಿದ್ದಪ್ಪನನ್ನು ಸಾದಿಕ್ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

ಗವಿಸಿದ್ದಪ್ಪ ನಿನ್ನೆ ಗಣಪತಿ ಪಟ್ಟಿ ಕೇಳಲು ಓಣಿಯಲ್ಲಿ ಸುತ್ತುತ್ತಿದ್ದ. ರಾತ್ರಿ 7-30 ಕ್ಕೆ ಅನಾಮಧೇಯ ಪೋನ್ ಕರೆಯೊಂದು ಬಂದಿದ್ದು, ಸ್ನೇಹಿತರಿಗೆ ‘ನೀವು ಪಟ್ಟಿ ಎತ್ತಿ ನಾನು ಇಲ್ಲೆ ಸ್ವಲ್ಪ ಹೋಗಿ ಬರ್ತೀನಿ’ ಎಂದು ಹೇಳಿ ಹೋದ ಎಂದು ಗೆಳೆಯರು ಹೇಳುತ್ತಾರೆ. ನಂತರ ಕೊಲೆ ಸುದ್ಧಿ ಬೆಳಕಿಗೆ ಬಂದಿದೆ.

WhatsApp Image 2025 08 04 at 2.31.02 PM
ಆರೋಪಿ ಸಾದಿಕ್

ಯುವಕನ ಕುತ್ತಿಗೆ ಬಾಗಕ್ಕೆ ಮಚ್ವಿನಿಂದ ಹೊಡೆದು ಕೊಲ್ಲಲಾಗಿದೆ. ನಗರದಲ್ಲಿ ಇಷ್ಟೊಂದು ಬರ್ಬರವಾಗಿ ಹತ್ಯಯಾದ ಘಟನೆ ಹಿಂದೆ ಎಂದೂ ನಡೆದಿಲ್ಲ ಎಂದು ಹೇಳುತ್ತಾರೆ. ಇನ್ನು ಕೊಲೆಯಾದ ಯುವಕ ಕೊಪ್ಪಳ ತಾಲೂಕಿನ ಓಜನಹಳ್ಳಿ ಗ್ರಾಮ ಪಂಚಾಯತ್​ ಸದಸ್ಯ ಯಮನೂರಪ್ಪ ನಾಯಕ್​​ ಸಹೋದರನ ಮಗ.

ಎಸ್​ಪಿ ಡಾ. ರಾಮ್ ಅರಸಿದ್ದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಬಳಿಕ ಬಳ್ಳಾರಿ ಐಜಿಪಿ ವರ್ತಿಕಾ ಕಟಿಯಾರ್ ಸಹ ಕೊಪ್ಪಳಕ್ಕೆ ಭೇಟಿ ನೀಡಿ ಸಿಟಿ ರೌಂಡ್ಸ್ ಹಾಕಿದರು. ಸದ್ಯ ಸಾದಿಕ್​ ಪೊಲೀಸರಿಗೆ ಶರಣಾಗಿದ್ದಾನೆ. ಆದರೆ ಆತನಿಗೆ ಸಹಾಯ ಮಾಡಿದ 3 ಮಂದಿ ಪರಾರಿಯಾಗಿದ್ದಾರೆ. ಕೊಲೆ ಮಾಡಿ ಶರಣಾದ ಸಾದಿಕ್​ ಪ್ರೀತಿ ವಿಚಾರವಾಗಿ ಕೊಲೆ ಮಾಡಿದ್ದೇನೆಂದು ಒಪ್ಪಿಕೊಂಡಿದ್ದಾನೆ. ಘಟನಾ ಸ್ಥಳದಲ್ಲಿ ಎರಡು ಮಚ್ಚುಗಳು ಪತ್ತೆಯಾಗಿವೆ‌ ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧರ್ಮಸ್ಥಳ ಪ್ರಕರಣ: ಇಂದು ಅನಾಮಿಕ ವ್ಯಕ್ತಿ ಗುರುತಿಸಿದ 11ನೇ ಸ್ಥಳ ಶೋಧ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ದಿ, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಸ್ಥಳಕ್ಕೆ ಆಗಮಿಸಿ ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ, ಹೆಚ್ಚಿನ ಮಾಹಿತಿಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...