ಕೊಪ್ಪಳ | ಮಹಿಳಾ ಗ್ರಾಮ ಸಭೆಗಳಿಗೆ ಮದ್ಯ ನಿಷೇಧದ ಅಧಿಕಾರ ನೀಡಲು ಸಂಘಟನೆಗಳ ಮನವಿ

Date:

ಮದ್ಯ ನಿಷೇಧಿಸಬೇಕೆಂದು ಮಹಿಳಾ ಗ್ರಾಮ ಸಭೆಗಳು ಕೈಗೊಳ್ಳುವ ನಿರ್ಧಾರಕ್ಕೆ ಪರಮಾಧಿಕಾರ ನೀಡಬೇಕು. ಸರಕಾರ ಮದ್ಯ ಮಾರಾಟ ನಿಯಂತ್ರಣ ಮಾಡಬೇಕು ಹಾಗೂ ನಮ್ಮ ದೇಶದ ಸಂವಿಧಾನದ ಆರ್ಟಿಕಲ್ 47ರಂತೆ ದೇಶ ಮದ್ಯ ನಿಷೇಧದತ್ತ ಸಾಗಬೇಕು ಎಂದು ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಘಟನೆ ಹಾಗೂ ಜನಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಕೊಪ್ಪಳದ ವಿವಿಧ ಸಂಘಟನೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರ ಮೂಲಕ ಮನವಿ ಸಲ್ಲಿಸಿದರು.

- Advertisement -

ಕರ್ನಾಟಕದ ಹಲವಾರು ಮಹಿಳಾ ಸಂಘಟನೆಗಳ ವೇದಿಕೆ 2015ರಿಂದ ಮದ್ಯ ನಿಷೇಧ ಮಾಡಬೇಕು ಹಾಗೂ ಮಹಿಳಾ ಗ್ರಾಮಸಭೆಗಳ ಠರಾವಿಗೆ ಪರಮಾಧಿಕಾರ ನೀಡಬೇಕು ಎಂದು ಒತ್ತಾಯಿಸುತ್ತಲೇ ಬಂದಿದೆ. ಮದ್ಯ ನಿಷೇಧ ಆಂದೋಲನವನ್ನು ಕಳೆದ ಹತ್ತು ವರ್ಷಗಳಿಂದ ಹಲವಾರು ಪ್ರಗತಿಪರ, ಜನಪರ ಸಂಘಟನೆಗಳು ಸೇರಿದಂತೆ ರೈತ, ದಲಿತ, ಕಾರ್ಮಿಕ ಸಂಘಟನೆಗಳು ಬೆಂಬಲಿಸುತ್ತ ಬಂದಿವೆ. ಸದ್ಯ ಈ ವೇದಿಕೆಯಿಂದ ಸರಕಾರಕ್ಕೆ ಎರಡು ಬೇಡಿಕೆಗಳನ್ನು ಮುಂದಿಟ್ಟಿವೆ. ಮೊದಲನೆಯದ್ದು; ಹರಿಯಾಣ, ಮಹಾರಾಷ್ಟ್ರ ಹಾಗೂ ಇತರ ಹಲವಾರು ರಾಜ್ಯಗಳಲ್ಲಿ ಮಹಿಳಾ ಗ್ರಾಮ ಸಭೆಗಳಿಗೆ ಪರಮಾಧಿಕಾರ ಕೊಡಲಾಗಿದೆ. ಇಲ್ಲಿಯ ಪಂಚಾಯತ್ ರಾಜ್ ಕಾನೂನಿನಂತೆ ರಾಜ್ಯ ಸರ್ಕಾರಗಳು ಯಾವುದೇ ಒಂದು ಮದ್ಯದ ಅಂಗಡಿಗೆ ಪರವಾನಿಗೆ ಕೊಡಲು ಅಥವಾ ರದ್ದು ಮಾಡಲು ಮಹಿಳಾ ಗ್ರಾಮ ಸಭೆಯಲ್ಲಿ ಒಪ್ಪಿಗೆ ಪಡೆಯಬೇಕು. ಅಂದರೆ ಮಹಿಳಾ ಗ್ರಾಮಸಭೆಯ ಠರಾವಿಗೆ ಮಾನ್ಯತೆ ನೀಡಲೇಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕರ್ನಾಟಕದ ಪಂಚಾಯತ್ ರಾಜ್ ಕಾನೂನಿನಲ್ಲಿ ಈ ತರದ ಒಂದು ಅಂಶ 2016ರ ತನಕ ಇತ್ತು. ಆದರೆ ಆ ಸಮಯದಲ್ಲಿ ಇದ್ದ ಸರಕಾರ ಇದನ್ನು ತೆಗೆದು ಹಾಕಿತು. ಎರಡನೇ ಬೇಡಿಕೆ; ಒಂದು ಕಡೆ ಪರವಾನಿಗೆ ಪಡೆದ ಅಂಗಡಿಗಳ ಸಮಸ್ಯೆಯಾದರೆ ಅದಕ್ಕಿಂತ ಹೆಚ್ಚು ಮನೆ ಮನೆಗಳಲ್ಲಿ ಪಾನಶಾಪ್, ಕಿರಾಣಿ ಅಂಗಡಿ, ಗೂಡಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ವಾಗುತ್ತಿದ್ದು, ಸಮಾಜವನ್ನು ಕೆಟ್ಟ ದಾರಿಗೆ ಒಯ್ಯುತ್ತಿದೆ. ಹಳ್ಳಿಗಳಲ್ಲಿ ಚಿಕ್ಕ ವಯೋಮಾನದ ಮಕ್ಕಳು ಮದ್ಯ ಸೇವನೆ ದುಶ್ಚಟಕ್ಕೆ ಒಳಗಾಗುತ್ತಿದ್ದಾರೆ. ಇದೇ ಪದ್ಧತಿ ಮುಂದುವರೆದರೆ ಕರ್ನಾಟಕ ರಾಜ್ಯವೂ ಪಂಜಾಬ್ ರೀತಿಯಲ್ಲಿ ಒಂದು ಹಂತದ ಯುವ ಪೀಳಿಗೆಯನ್ನು ಕಳೆದುಕೊಳ್ಳುವುದು ನಿಶ್ಚಿತ. ಪ್ರತಿ ಹಳ್ಳಿಯಲ್ಲಿ ಮಹಿಳೆಯರ ಜಾಗೃತ ಸಮಿತಿಗಳನ್ನು ರಚಿಸಿ ಈ ಸಮಿತಿಗೆ ಅರೆ ನ್ಯಾಯಿಕ ಅಧಿಕಾರ ಕೊಡಬೇಕು.

ಇದನ್ನೂ ಓದಿ: ಕೊಪ್ಪಳ | ಬಸಪ್ಪ, ಚಂದ್ರಶೇಖರ, ದೇವೇಂದ್ರಕುಮಾರ್‌ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಕಳೆದ ಹತ್ತು ವರ್ಷಗಳಲ್ಲಿ ವೇದಿಕೆ ಹಲವಾರು ಹಳ್ಳಿಗಳಿಂದ ಹೆಸರು ಸಮೇತ ಆಕ್ರಮ ಮದ್ಯ ಮಾರಾಟಗಾರರ ಪಟ್ಟಿಯನ್ನು ಪೊಲೀಸ್ ಹಾಗೂ ಅಬಕಾರಿ ಇಲಾಖೆಗೆ ಕೊಟ್ಟು ಬಂದಿದ್ದಾರೆ; ಆದರೆ, ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಬದಲಿಗೆ ವರ್ಷದಿಂದ ವರ್ಷಕ್ಕೆ ಆಕ್ರಮ ಮಧ್ಯೆ ಮಾರಾಟ ಹೆಚ್ಚುತ್ತಿದೆ. ಈ ನಮ್ಮ ಎರಡು ಬೇಡಿಕೆಗಳ ಮೇಲೆ ಸರ್ಕಾರ ತಕ್ಷಣ ವೇದಿಕೆ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳದಿದ್ದರೆ ಕರ್ನಾಟಕದ ಎಲ್ಲಾ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು 25 ನವಂಬರ್ 2025ರಂದು ಬೆಂಗಳೂರಲ್ಲಿ ಅನಿರ್ಧಿಷ್ಟಾವಧಿ ಸತ್ಯಾಗ್ರಹ ಮಾಡುವ ಪರಿಸ್ಥಿತಿ ಬರುತ್ತದೆ ಎಂದು ಆಗ್ರಹಿಸಿದರು.

ಈ ವೇಳೆ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಮುಖಂಡ ಮಹಾಂತೇಶ್ ಹೊಸಮನಿ, ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆಯ ಕುಷ್ಟಗಿ ಹಾಗೂ ಕೊಪ್ಪಳ ಮುಖ್ಯಸ್ಥ ಸುಂಕಪ್ಪ ಮಿಸಿ, ದೇವದಾಸಿ ವಿಮೋಚನಾ ವೇದಿಕೆಯ ಖಜಾಂಚಿ ಶಶಿಕಲಾ ಡಿ ಮಠದ್, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಮಹಿಳಾ ನಾಯಕಿ ಮಂಜುಳಾ ಎಂ ಕಂದಾರಿ, ಕೊಳಚೆ ನಿರ್ಮೂಲನಾ ವೇದಿಕೆಯ ಸಂಚಾಲಕ ಗೌಸ್ ನೀಲಿ, ಬಹುಜನ ಚಳವಳಿಯ ಮುಖಂಡ ಸಂಜೀವ್ ಮೂರ್ತಿ ಗುಳದಳ್ಳಿ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ...

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...