ಕೊಪ್ಪಳ | ಗಾಳಿ-ಮಳೆಗೆ ನೆಲಕಚ್ಚಿದ ಭತ್ತ; ಪರಿಹಾರಕ್ಕೆ ರೈತರ ಆಗ್ರಹ

Date:

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಉಳೆನೂರು ಗ್ರಾಮದಲ್ಲಿ ಅತಿಯಾದ ಮಳೆ ಗಾಳಿಯಿಂದ‌ ಭತ್ತದ ಪೈರು ನೆಲಕ್ಕುರುಳಿದ್ದು, ಬಂದ ಬೆಳೆ‌ ನೆಲದ ಪಾಲಾಗಿರುವುದರಿಂದ‌ ರೈತರು ಸಂಕಷ್ಟಕೊಳಗಾಗಿದ್ದಾರೆ. ಸರ್ಕಾರ ನಷ್ಟವಾದ ಬೆಳೆಗೆ ಶೀಘ್ರ ಪರಿಹಾರ ಘೋಷಿಸಬೇಕು ಎಂದು ಎಐಕೆಕೆಎಮ್‌ಎಸ್ ನೃತೃತ್ವದಲ್ಲಿ ಗ್ರಾಮದ‌ ರೈತರು ಆಗ್ರಹಿಸಿದರು.

- Advertisement -

ಎಐಕೆಕೆಎಮ್‌ಎಸ್ ಸಮಿತಿಯ‌ ಸದಸ್ಯರು ಹಾಗೂ ರೈತರು ಮಾತನಾಡಿ, “ಕಾರಟಗಿ ತಾಲೂಕಿನ ಉಳೇನೂರು ಗ್ರಾಮ ಸೇರಿದಂತೆ ಕೊಪ್ಪಳ ಜಿಲ್ಲೆ ಹಾಗೂ ರಾಜ್ಯಾದ್ಯಂತ ಇತ್ತೀಚೆಗೆ ನಿರಂತರವಾಗಿ ಸುರಿದ ಮಳೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಬೆಳೆ ನಷ್ಟಕ್ಕೀಡಾಗಿದೆ. ಪ್ರತಿ ಎಕರೆಗೆ 8 ರಿಂದ 10 ಕ್ವಿಂಟಲ್ ಭತ್ತ ನಾಶವಾಗಿದೆ. ಹಿಂದಿನ ವರ್ಷವೂ ಇದೇ ರೀತಿಯಾದ ಅಕಾಲಿಕ ಮಳೆಗೆ ಸಾಕಷ್ಟು ಭತ್ತ ನಾಶವಾಗಿತ್ತು. ಅಂದು ನಾಶವಾಗಿದ್ದ ಭತ್ತಕ್ಕೆ ಸರ್ಕಾರ ನಷ್ಟ ಪರಿಹಾರ ನೀಡುವುದಾಗಿ ನೀಡಿದ್ದ ಭರವಸೆ, ಬೆರಳೆಣಿಕೆಯ ರೈತರಿಗೆ ತಲುಪಿ, ಸಾವಿರಾರು ಜನರಿಗೆ ಅದು ತಲುಪಲೇ ಇಲ್ಲ. ಇದರಿಂದ ರೈತರು ಸಾಕಷ್ಟು ನಷ್ಟಕ್ಕೀಡಾದರು. ಈ ವರ್ಷ ಸಹ ಆ ರೀತಿ ಆಗದೆ, ಬೆಳೆ ನಾಶದಿಂದ‌ ಸಂಕಷ್ಟಕ್ಕೊಳಗಾದ ಎಲ್ಲಾ ರೈತರಿಗೆ ನಷ್ಟ ಪರಿಹಾರ ಕೂಡಲೇ ಘೋಷಿಸಬೇಕು ಹಾಗೂ ಅದು ಎಲ್ಲರಿಗೂ ತಲುಪುವಂತೆ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನೂ ಓದಿ: ಕೊಪ್ಪಳ | ಕುಡಿಯುವ ನೀರಿಗಾಗಿ ಪರದಾಟ; ಸಮಸ್ಯೆಯ ಶೀಘ್ರ ಪರಿಹಾರಕ್ಕೆ ಆಗ್ರಹ

“ಒಂದು ಎಕರೆ ಭತ್ತಕ್ಕೆ 20,000 ನಷ್ಟ ಪರಿಹಾರ ನೀಡಬೇಕು. ಒಂದು ಕ್ವಿಂಟಲ್ ಭತ್ತಕ್ಕೆ 3500 ಬೆಂಬಲ ಬೆಲೆ ನೀಡಬೇಕು. ಭತ್ತ ಕಟಾವು ಮಾಡುವ ಮಿಷನ್ ಗೆ ಒಂದು ಗಂಟೆಗೆ ಎರಡು ಸಾವಿರಕ್ಕಿಂತ ಹೆಚ್ಚಿಗೆ ಇರಬಾರದು. ಭತ್ತದ ಖರೀದಿ ಕೇಂದ್ರವನ್ನು ನವಂಬರ್ ತಿಂಗಳಲ್ಲಿ ಪ್ರಾರಂಭ ಮಾಡಬೇಕು” ಎಂದು ಹಕ್ಕೊತ್ತಾಯ ಮಂಡಿಸಿದರು.

ಈ ವೇಳೆ ಉಳೆನೂರಿನ ರೈತರಾದ ಯಮನೂರ, ಗಂಗಪ್ಪ, ವೀರೇಶ್ ಇಟಗಿ, ಕುಮಾರಪ್ಪ, ಎಮ್ ವೆಂಕಟಪ್ಪ ಉಳೇನೂರಿನ ಎಐಕೆಕೆಎಮ್‌ಎಸ್ ರೈತ ಸಂಘಟನೆಯ ಸದಸ್ಯರಾದ ಬಸವರಾಜಪ್ಪ, ಅಂಜಿನಪ್ಪ ಅಳ್ಳಳ್ಳಿ, ಮುಕ್ಕಣ್ಣ ಪಾಳ್ಯ ಹಾಗೂ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...