ಕೊಪ್ಪಳ | ಕಾರ್ಖಾನೆಗಳ ವಿಸ್ತರಣೆ ವಿರುದ್ಧ ಪೇಂಟ್ ಅಭಿಯಾನ

Date:

Advertisements

ನಗರಕ್ಕೆ ಹೊಂದಿಕೊಂಡು ಸ್ಥಾಪನೆಗೆ ಸಿದ್ಧವಾದ ಬಿಎಸ್‌ಪಿಎಲ್ ಹಾಗೂ ಕಿರ್ಲೋಸ್ಕರ್, ಕಲ್ಯಾಣ ಸೇರಿ ಇತರೆ ಕಾರ್ಖಾನೆಗಳ ಆರಂಭ ಹಾಗೂ ವಿಸ್ತರಣೆ ವಿರೋಧಿಸಿ ನಡೆಸುತ್ತಿರುವ ಜನಾಂದೋಲನದ ಭಾಗವಾಗಿ ಹೋರಾಟ ತೀವ್ರಗೊಳಿಸಲು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ವತಿಯಿಂದ “ಪೇಂಟ್ ಅಭಿಯಾನ”ವನ್ನು ನಗರದ ಹಲವೆಡೆ ಆರಂಭಿಸಲಾಗಿದೆ.

ಕೊಪ್ಪಳದ ಬ್ರಿಡ್ಜ್ ಗೋಡೆ ಹಾಗೂ ಬಾಧಿತ ಪ್ರದೇಶಗಳ ಹಳ್ಳಿಗಳಲ್ಲಿ ಕಾರ್ಖಾನೆ ವಿರುದ್ಧ ಮತ್ತು ಅದರಿಂದ ಆಗುತ್ತಿರುವ ಹಾನಿಯ ಬಗ್ಗೆ ಜನಜಾಗೃತಿ ಮೂಡಿಸಲು ಈ ಪೇಂಟ್ ಅಭಿಯಾನ ನಡೆಸುತ್ತಿದ್ದು, ಗೋಡೆ ಬರಹಕ್ಕೆ ಬಣ್ಣಗಳನ್ನು ನಗರದ ಬಣ್ಣದ ವ್ಯಾಪಾರಿಗಳು ಸ್ವಯಂ ಪ್ರೇರಿತರಾಗಿ ಬಣ್ಣ ಒದಗಿಸಿದ್ದಾರೆ.

WhatsApp Image 2025 05 25 at 10.29.30 AM

ಜಿಲ್ಲೆಯ ಸುತ್ತಲೂ ಬೃಹತ್ ಕಾರ್ಖಾನೆಗಳು ಹೆಚ್ಚಾಗಿದ್ದು, ಅದರಿಂದ ಜಿಲ್ಲೆಯ ಪರಿಸರದ ಮೇಲೆ ಮಾರಕ ದುಷ್ಪರಿಣಾಮ ಬೀರುವುದರಿಂದ ʼಬಿಎಸ್‌ಪಿಎಲ್‌ ಕಾರ್ಖಾನೆಗಳು ತೊಲಗಬೇಕು ಇಲ್ಲವೇ ಕೊಪ್ಪಳ ತೊಲಗಬೇಕುʼ ಎಂಬ ಘೋಷ ವಾಕ್ಯದಡಿ ಗೋಡೆ ಬರಹಗಳನ್ನು ಮಾಡಲು ಜಿಲ್ಲ ಬಚಾವೋ ಆಂದೋಲನ ಸಮಿತಿ ನಿರ್ಧರಿಸಿ ನಗರದ ಕುಷ್ಟಗಿ ರಸ್ತೆಯಲ್ಲಿರುವ ಗವಿಸಿದ್ದಪ್ಪ ಚಿನ್ನೂರ್, ಮಾರುತಿ, ಶ್ರೀನಿವಾಸ್ ಪೇಂಟ್ಸ್ ವಿವಿಧ ಬಣ್ಣದ ಡಬ್ಬಿಗಳನ್ನು ಕೊಟ್ಟು ಹೋರಾಟಕ್ಕೆ ಬೆಂಬಲಿಸಿದರು.

Advertisements

ಇದನ್ನೂ ಓದಿ: ಕೊಪ್ಪಳ | ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಅಪಹರಣ ಪ್ರಕರಣ; ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಅಭಿಯಾನದಲ್ಲಿ ಗೋಡೆ ಬರಹ ಬರೆಯಲು ಹಿರಿಯ ಚಿತ್ರ ಕಲಾವಿದ ರಾಜು ತೇರದಾಳ್ ಮತ್ತು ಕೃಷ್ಣ ಸೇರಿ ಇತರರು ಬರಹ ಬರೆಯಲು ಸಹಕಾರ ನೀಡಿದರು. ಪರಿಸರ ಹಿತರಕ್ಷಣಾ ವೇದಿಕೆ ಸದಸ್ಯರೂ ಸಹ ಇದರಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ. ಕೊಪ್ಪಳದಿಂದ ಕಾರ್ಖಾನೆಗಳನ್ನು ಓಡಿಸುವ ನಿಟ್ಟಿನಲ್ಲಿ ಆಂದೋಲನವನ್ನು ತೀವ್ರಗೊಳಿಸಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ.

WhatsApp Image 2025 05 25 at 10.29.33 AM

ಬಂಡಾಯ ಸಾಹಿತಿ ಪ್ರೊ. ಅಲ್ಲಮಪ್ರಭು ಬೆಟ್ಟದೂರ್, ಕೆ. ಬಿ. ಗೋನಾಳ, ಬಸವರಾಜ ಶೀಲವಂತರ್, ಮಹಾಂತೇಶ್ ಕೊತಬಾಳ, ಮಂಜುನಾಥ ಜಿ. ಗೊಂಡಬಾಳ, ಶರಣು ಶೆಟ್ಟರ್, ಎಸ್.ಎ. ಗಫಾರ್, ಜ್ಯೋತಿ ಎಂ. ಗೊಂಡಬಾಳ, ಶರಣು ಗಡ್ಡಿ, ಮುದುಕಪ್ಪ ಹೊಸಮನಿ, ಚನ್ನಬಸಪ್ಪ ಅಪ್ಪಣ್ಣವರ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X