ಕೊಪ್ಪಳ | ಬಲ್ಡೋಟಾ ಕೈಗಾರಿಕೆ ವಿಸ್ತರಣೆಗೆ ಜನರ ವಿರೋಧ; ಕಾರ್ಖಾನೆ ಸಿದ್ಧತೆ ನಿಲ್ಲಿಸುವಂತೆ ಸಿಎಂ ಸೂಚನೆ

Date:

ಬಿಎಸ್‌ಪಿಎಲ್ ಸ್ಟೀಲ್ ಮತ್ತು ಪವರ್ ಲಿಮಿಟೆಡ್‌ ಕಂಪೆನಿ(ಬಲ್ಡೋಟಾ ಕೈಗಾರಿಕೆ)ಯು ಈಗಾಗಲೇ 1.50 ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಏಕೀಕೃತ(ಇಂಟಿಗ್ರೇಟೆಡ್) ಉಕ್ಕಿನ ಕಾರ್ಖಾನೆಯನ್ನು ಕೊಪ್ಪಳ ಜಿಲ್ಲಾ ಕೇಂದ್ರದ ಸಮೀಪದಲ್ಲಿಯೇ ಸ್ಥಾಪನೆ ಮಾಡಲು ಮುಂದಾಗಿದ್ದಕ್ಕೆ ಜನರ ದೊಡ್ಡಮಟ್ಟದ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಖಾನೆಯವರು ಮಾಡುತ್ತಿರುವ ಸಿದ್ಧತಾ ಕಾರ್ಯಗಳನ್ನು ಕೂಡಲೇ ನಿಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ನಲಿನ್ ಅತುಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್ ಅರಸಿದ್ದಿಯವರಿಗೆ ಸೂಚಿಸಿದ್ದಾರೆ.

- Advertisement -

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ಜಿಲ್ಲೆಯ ಸರ್ವಪಕ್ಷಗಳ ಜನಪ್ರತಿನಿಧಿಗಳು ಹಾಗೂ ಕೊಪ್ಪಳ ಪರಿಸರ ಹಿತರಕ್ಷಣಾ ವೇದಿಕೆ ಮುಖಂಡರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಭೇಟಿಯಾದ ನಿಯೋಗ, “ಕಾರ್ಖಾನೆ ವಿಸ್ತರಣೆ ಮಾಡಿದರೆ ಜಿಲ್ಲೆಯಲ್ಲಿ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಾರೆ, ಜಿಲ್ಲಾಕೇಂದ್ರಕ್ಕೆ ವಿಪರೀತ ಧೂಳು ಬರುತ್ತದೆ. ಕೊಪ್ಪಳದ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ವಿಸ್ತರಣೆಗೆ ಅವಕಾಶ ಕೊಡಬಾರದು” ಎಂದು ಮನವರಿಕೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಈ ಕುರಿತು ತ್ವರಿತ ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

“ಕಾರ್ಖಾನೆ ಆರಂಭಿಸಲು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ಕೊಟ್ಟಿಲ್ಲ. ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎನ್ನುವ ಬಗ್ಗೆ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಇದರ ಕುರಿತು ಕೈಗಾರಿಕಾ ಸಚಿವ ಎಂ ಬಿ ಪಾಟೀಲರೊಂದಿಗೆ ಸಭೆ ನಡೆಸುವೆ” ಎಂದು ಹೇಳಿದ್ದು, ಕಾರ್ಖಾನೆ ಆರಂಭಕ್ಕೆ ನಡೆಯುತ್ತಿರುವ ಕೆಲಸ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಪ್ರಯೋಗಾತ್ಮಕ ವಿಜ್ಞಾನ ಕಲಿಕೆ ಹೆಚ್ಚು ಪರಿಣಾಮಕಾರಿ: ಚಂದ್ರಶೇಖರ್ ಕಲ್ಯಾಣಮಠ

ನಿಯೋಗದಲ್ಲಿ ಸಂಸದ ರಾಜಶೇಖರ ಹಿಟ್ನಾಳ, ಶಾಸಕ ಜನಾರ್ಧನ ರೆಡ್ಡಿ, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ದೊಡ್ಡನಗೌಡ ಪಾಟೀಲ, ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಶರಣಗೌಡ ಬಯ್ಯಾಪುರ, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖ‌ರ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್, ಮುಖಂಡರಾದ ವೀರೇಶ ಮಹಾಂತಯ್ಯನಮಠ, ಸಂತೋಷ ದೇಶಪಾಂಡೆ, ಶರಣಪ್ಪ ಸಜ್ಜನ, ಮುನಿರಾಬಾದ್ ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ, ಮಾಜಿ ಶಾಸಕರಾದ ಕೆ ಬಸವರಾಜ ಹಿಟ್ನಾಳ, ಕೆ ಶರಣಪ್ಪ ಕರಿಯಣ್ಣ ಸಂಗಟಿ ಸೇರಿದಂತೆ ಹಲವು ಪಕ್ಷಗಳ ನಾಯಕರು, ಸಂಘಟನೆಗಳ ಪ್ರಮುಖರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...