ಕೊಪ್ಪಳ | ಅನುದಾನ ಬರಲಿದೆ‌, ಗುಂಡಿ ಬಿದ್ದಿರುವ ರಸ್ತೆ ದುರಸ್ತಿ ಮಾಡಿಸುವೆ: ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್

Date:

ಅನುದಾನ ಬಂದ ಕೂಡಲೇ ನೀವು ಹೇಳಿದ ಕೆಲಸ ಮಾಡುತ್ತೇನೆ. ರಸ್ತೆ ದುರಸ್ತಿ ಹಾಗೂ ಮಕ್ಕಳ ಉದ್ಯಾನವನದಂಥ ನಿರ್ಮಾಣ ಕಾಮಗಾರಿಗಳನ್ನು ಮಾಡಿಸುವೆ. ನಿಮ್ಮ ವಿಶ್ವಾಸಕ್ಕೆ ಧಕ್ಕೆ ತರಲಾರೆ. ಕಲ್ಯಾಣನಗರದ ಅಭಿವೃದ್ಧಿ ಕೆಲಸ ಮಾಡುವೆ ಎಂದು ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಭರವಸೆ ನೀಡಿದರು.

- Advertisement -

ಕೊಪ್ಪಳದ ಕಲ್ಯಾಣ ನಗರದಲ್ಲಿ ದೀಪಾವಳಿ ಹಬ್ಬದಂದು ಮಾರುತಿ ಗುಡಿ ಸಮೀಪ ಎತ್ತರದ ದೀಪಸ್ತಂಭ(ಹೈಮ್ಯಾಕ್ಸ್)ವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

“ಕಲ್ಯಾಣನಗರ ನನ್ನನ್ನು ಬಹಳ ಗೌರವಯುತವಾಗಿ ನಡೆಸಿಕೊಂಡಿದೆ. ಈ ನಗರದವರು ತುಂಬಾ ಸೌಜನ್ಯದಿಂದ ಕೆಲಸದ ಬೇಡಿಕೆ ಇಟ್ಟು ಈಡೇರಿಸಿಕೊಳ್ಳುತ್ತಿದ್ದೀರಿ. ನಗರದ ಹಲವು ಅಭಿವೃದ್ಧಿ ಕೆಲಸಗಳು ಅಗಬೇಕು. ಅದನ್ನು ನಾನು ಅಧ್ಯಕ್ಷನಾಗಿರಲಿ, ಇಲ್ಲದಿರಲಿ ಕೆಲಸ ಮಾಡುತ್ತೇನೆ” ಎಂದು ವಿಶ್ವಾಸ ಮೂಡಿಸಿದರು.

ಕಲ್ಯಾಣ ನಗರದ ಹಿರಿಯ ಮುಖಂಡ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, “ಕಲ್ಯಾಣ ನಗರದಲ್ಲಿ ರಸ್ತೆಗಳನ್ನು ಸರಿಪಡಬೇಕು. ಒಳ ಚರಂಡಿಗಳ ವ್ಯವಸ್ತೆಯಾಗಬೇಕು, ಕಲ್ಯಾಣ ನಗರದ ಉದ್ಯಾನದಲ್ಲಿ ಮಕ್ಕಳಿಗೆ ಆಟದ ಸಾಮಗ್ರಿಗಳನ್ನು ಹಾಕಿಸಬೇಕು. ಸಮುದಾಯ ಭವನ ಕಟ್ಟಿಸಬೇಕು. ಬೀದಿ ದೀಪಗಳನ್ನು ಹಾಕಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಪ್ರೀತಿ ವಂಚಿತ ಮಕ್ಕಳೊಂದಿಗೆ ಸರಳ ದೀಪಾವಳಿ

“ಎಂಎಸ್‌ಪಿಎಲ್ ಕಾರ್ಖಾನೆ ಮತ್ತು ಇತರ ಕಾರ್ಖಾನೆಗಳು ಪರಿಸರ ನಾಶ ಮಾಡುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 1ರ ರಾಜ್ಯೋತ್ಸವ ದಿನದಂದು ಅಶೋಕ ವೃತ್ತದಲ್ಲಿ ನಡೆಯುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ನಗರದ ಪ್ರಮುಖರು, ನಾಗರಿಕರೆಲ್ಲರೂ ಭಾಗವಹಿಸುತ್ತೇವೆ” ಎಂದು ಬೆಂಬಲ ವ್ಯಕ್ತಪಡಿಸಿದರು.

ದೀಪಸ್ತಂಭ ಉದ್ಘಾಟನೆ ಬಳಿಕ ಕಲ್ಯಾಣ ನಗರದ ಆಂಜನೇಯ ಸಮಿತಿಯಿಂದ ಅಧ್ಯಕ್ಷ ಹನುಮಂತಪ್ಪ ಗೊಂದಿಯವರನ್ನು ಸನ್ಮಾನಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ...

ಇಂಡಿ | ಸ್ಥಳೀಯ ಚುನಾವಣೆ: ಕಾಂಗ್ರೆಸ್ ಬಲಗೊಳಿಸಲು ಯಶವಂತರಾಯಗೌಡ ಪಾಟೀಲ ಕರೆ

ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ...

ಬಸವನ ಬಾಗೇವಾಡಿ ಸಮೀಪ 3.5 ತೀವ್ರತೆಯ ಭೂಕಂಪ ದಾಖಲು!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...