ಕೊಪ್ಪಳ | ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳ ವಿದ್ಯುತ್‌ ಕಡಿತ

Date:

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಸಾಣಾಪುರ ಮತ್ತು ಆನೆಗೊಂದಿ ಭಾಗದ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ಅಕ್ರಮವಾಗಿ ಪಡೆಯಲಾಗಿದ್ದ ವಿದ್ಯುತ್ ಸಂಪರ್ಕವನ್ನು ಮಂಗಳವಾರ ಕಡಿತ ಮಾಡಲಾಗಿದ್ದು, ಹೋಟೆಲ್‌ಗಳಿಗೂ ಇದರ ಬಿಸಿ ತಟ್ಟಿದೆ.

- Advertisement -

ಇತ್ತೀಚೆಗೆ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ಯುವಕನ ಕೊಲೆ ನಡೆದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ, ಅಧಿಕಾರಿಗಳು ಸರಣಿ ಸಭೆ ನಡೆಸಿದ್ದು, ಅಕ್ರಮ ರೆಸಾರ್ಟ್ ಮತ್ತು ಹೋಂ ಸ್ಟೇಗಳಿಗೆ ಕಡಿವಾಣ ಹಾಕಲು ತಂಡಗಳನ್ನು ರಚಿಸಿದೆ. ಅಕ್ರಮವಾಗಿ ಹೋಂ ಸ್ಟೇ ಹಾಗೂ ರೆಸಾರ್ಟ್‌ಗಳನ್ನು ನಡೆಸುತ್ತಿದ್ದವರಿಗೆ ಚಾಟಿ ಬೀಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ತಹಶೀಲ್ದಾ‌ರ್, ಅರಣ್ಯ, ಪ್ರವಾಸೋದ್ಯಮ, ಅಬಕಾರಿ, ಪೊಲೀಸ್ ಮತ್ತು ಜೆಸ್ಕಾಂ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ತಂಡ ಆನೆಗೊಂದಿ, ಸಾಣಾಪುರ ಭಾಗದಲ್ಲಿ ಕಾರ್ಯಾಚರಣೆ ನಡೆಸಿತು. ಸಾಣಾಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವ ಭೂಮಿಯಲ್ಲಿ ಗುಡಿಸಲು ಕೊಠಡಿಗಳು ನಿರ್ಮಿಸಿ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದವರು ಸಮಯವಕಾಶ ನೀಡುವಂತೆ ಕೋರಿದರೆ, ಇನ್ನೂ ಕೆಲವರು ತಮ್ಮ ರೆಸಾರ್ಟ್ ಕುರಿತು ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿರುವ ದಾಖಲೆ ತೋರಿಸಿದರು.

“ಅಕ್ರಮವಾಗಿ ನಿರ್ಮಿಸಿಕೊಂಡಿರುವ ರೆಸಾರ್ಟ್‌ಗಳು ಮತ್ತು ಹೋಂ ಸ್ಟೇಗಳನ್ನು ತೆರವು ಮಾಡುವಂತೆ ಹಿಂದೆ ನೋಟಿಸ್ ನೀಡಿದ್ದರೂ ಯಾರೂ ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಆದ್ದರಿಂದ ಈಗ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ’ ಎಂದು ಗಂಗಾವತಿ ತಹಶೀಲ್ದಾ‌ರ್ ಯು ನಾಗರಾಜ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೈಲ್ವೆ ನಿಲ್ದಾಣದ ಬಳಿ ಮಹಿಳೆಯ ಮೃತದೇಹ ಪತ್ತೆ; ಕೊಲೆ ಶಂಕೆ

“ಹಿಂದೆ ಇದೇ ರೀತಿಯ ಕಾರ್ಯಾಚರಣೆ ನಡೆಸಿದ ಕೆಲವೇ ದಿನಗಳಲ್ಲಿ ರೆಸಾರ್ಟ್‌ಗಳು ಹಾಗೂ ಹೋಂಸ್ಟೇಗಳ ಮಾಲೀಕರು ಅಧಿಕಾರಿಗಳ ಗಮನಕ್ಕೆ ತಾರದೇ ಮರಳಿ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದರು. ಈಗಲೂ ಅದೇ ರೀತಿ ಮಾಡಿದರೆ ಪ್ರಕರಣ ದಾಖಲಿಸಲಾಗುವುದು” ಎಂದು ಪೊಲೀಸರು ಎಚ್ಚರಿಕೆ ನೀಡಿದರು.unauthorized resorts

ಈ ನಡುವೆ, “ಜಿಲ್ಲಾಡಳಿತದ ಈ ಕಟ್ಟುನಿಟ್ಟಿನ ಕ್ರಮ ಎಷ್ಟು ದಿವಸ ಜಾರಿಯಲ್ಲಿರುತ್ತದೆ ಎಂಬುದನ್ನು ಕಾದು ನೋಡಬೇಕು” ಎನ್ನುವ ಸ್ಥಳೀಯರ ಗುಸುಗಸು ಮಾತುಗಳೂ ಕೇಳಿಬರುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಡಗಾಂವ್- ಮಂಗಳೂರು ವಂದೇ ಭಾರತ್ ರೈಲು ಬೆಂಗಳೂರಿಗೆ ವಿಸ್ತರಣೆ

ಮಂಗಳೂರು-ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರಿನವರೆಗೆ ವಿಸ್ತರಿಸಲಾಗಿದೆ....

ಉಡುಪಿ | ಸ್ವಯಂ ನಿರೋಧಕ ಕಾಯಿಲೆಗಳ ನಿರ್ವಹಣೆಗೆ ಆಯುರ್ವೇದ–ಆಧುನಿಕ ವಿಜ್ಞಾನ ಸಂಯೋಜನೆ ಅಗತ್ಯ

ಸ್ವಯಂ ನಿರೋಧಕ ಕಾಯಿಲೆಗಳ ನಿರ್ವಹಣೆಯಲ್ಲಿ ಆಯುರ್ವೇದದ ಸಾಂಪ್ರದಾಯಿಕ ಜ್ಞಾನವನ್ನು ಆಧುನಿಕ ವೈಜ್ಞಾನಿಕ...

ಉಡುಪಿ ನೂತನ ಜಿಲ್ಲಾಸ್ಪತ್ರೆ ಸಿದ್ಧ, ಉದ್ಘಾಟನೆಗೆ ಮೀನಮೇಷ, ಹೋರಾಟದ ಎಚ್ಚರಿಕೆ

ಹಲವು ವರ್ಷಗಳ ನಿರೀಕ್ಷೆಯ ಬಳಿಕ ನಿರ್ಮಾಣಗೊಂಡಿರುವ ಉಡುಪಿ ನೂತನ ಜಿಲ್ಲಾ ಆಸ್ಪತ್ರೆ...