ಕೊಪ್ಪಳ | ಸ್ಮಶಾನವಿಲ್ಲದೆ ಶಾಲಾ ಆವರಣದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ: ಗ್ರಾಮಸ್ಥರ ಮನವೊಲಿಸಿದ ಅಧಿಕಾರಿಗಳು

Date:

ಕೊಪ್ಪಳ ಜಿಲ್ಲಾಡಳಿತ ಕಚೇರಿಯ ಸಮೀಪದಲ್ಲಿರುವ ಮಂಗಳಾಪುರದಲ್ಲಿ ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲದ ಕಾರಣ ಗ್ರಾಮದ ಶಾಲೆಯ ಆವರಣದಲ್ಲಿಯೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲು ತಯಾರಿ ನಡೆಸಿದ ಗ್ರಾಮಸ್ಥರು ತಾಲೂಕು ಆಡಳಿತದ ವಿರುದ್ಧ ಆಕ್ರೋಶ ಹೊರಹಾಕಿದರು.

- Advertisement -

ಗ್ರಾಮದಲ್ಲಿ ಸತ್ತವರ ಅಂತ್ಯಕ್ರಿಯೆಗೆ ಜಾಗವಿಲ್ಲದೆ ಪರದಾಡುವಂತಾಯಿತು. ಸವಂತ್ರಮ್ಮ ಮೆಳ್ಳಿಕೇರಿ(80) ಎಂಬುವವರು ಮೃತಪಟ್ಟಿದ್ದು, ಅವರ ಅಂತ್ಯಕ್ರಿಯೆ ನಡೆಸಲು ಸ್ಮಶಾನವಿಲ್ಲದ್ದರಿಂದ ಗ್ರಾಮ ಪಂಚಾಯಿತಿ ಹಾಗೂ ತಹಶೀಲ್ದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಗ್ರಾಮಕ್ಕೆ ಸ್ಮಶಾನ ಜಾಗ ಸೌಲಭ್ಯ ಕಲ್ಪಸಿಕೊಡುವಂತೆ ಗ್ರಾಮ ಪಂಚಾಯಿತಿ, ತಾಲೂಕು ತಹಶೀಲ್ದಾರರಿಗೆ ಹಲವು ಬಾರಿ ಮನವಿ ಮಾಡಿದ್ದರೂ ಬೇಡಿಕೆ ಈಡೇರಲಿಲ್ಲ. ಮೃತ ಸಾವಂತ್ರಮ್ಮನಿಗೆ ಸ್ವಂತ ಜಮೀನೂ ಇಲ್ಲ. ಹಾಗಾಗಿ ಶಾಲಾ ಜಾಗದಲ್ಲಿಯೇ ಅಂತ್ಯಕ್ರಿಯೆ ಮಾಡಲು‌ ಸಿದ್ದತೆ ನಡೆಸಿದ್ದೇವೆ” ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ನಾಲತವಾಡ ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರದ ವೈದ್ಯರಿಗೆ ಸನ್ಮಾನ ಸಮಾರಂಭ

ವಿಷಯ ತಿಳಿದ ತಹಶೀಲ್ದಾರ್ ವಿಠಲ್ ಚೌಗುಲಾ ಹಾಗೂ ಪೊಲೀಸರು ಗ್ರಾಮಕ್ಕೆ ಧಾವಿಸಿದ್ದು, ಗ್ರಾಮಸ್ಥರ ಮನವೊಲಿಸಲು ಯತ್ನಿಸಿದರು. ಭೇಟಿ ಕೊಟ್ಟ ಅಧಿಕಾರಿಗಳನ್ನು ಗ್ರಾಮಸ್ಥರು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡರು. ನಂತರ ಪೊಲೀಸರು ಹಾಗೂ ತಹಶೀಲ್ದಾರರ ಮನವೊಲಿಕೆಯಿಂದ ಹಳ್ಳಕ್ಕೆ ತೆರಳುವ ರಸ್ತೆ ಬದಿ ಶವ ಅಂತ್ಯಕ್ರಿಯೆ ನೆರವೇರಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...