ಕೊಪ್ಪಳ | ಪಿಯು ಫಲಿತಾಂಶ ಗಣನೀಯ ಕುಸಿತ; ತರಗತಿ ಮುಂದುವರೆಸಲು ಶಿಕ್ಷಣ ಇಲಾಖೆ ಆದೇಶ

Date:

ಕೊಪ್ಪಳ ಜಿಲ್ಲೆಯ ಈ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಕಳೆದ ವರ್ಷಕ್ಕಿಂತಲೂ ಗಣನೀಯವಾಗಿ ಕುಸಿತ ಕಂಡಿದ್ದು, ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಮರುಪಾಠ ಆರಂಭಿಸಲು ಸರ್ಕಾರಿ ಹಾಗೂ ಎಲ್ಲಾ ಅನುದಾನಿತ ಕಾಲೇಜುಗಳ ಪ್ರಾಚಾರ್ಯರು ಹಾಗೂ ಉಪನ್ಯಾಸಕರಿಗೆ ಶಿಕ್ಷಣ ಇಲಾಖೆ ಸೂಚಿಸಿದೆ. ಈ ಹಿನ್ನೆಲೆ ರಜೆ ರದ್ದುಗೊಳಿಸಲಾಗಿದೆ.

- Advertisement -

3 ವರ್ಷಗಳಿಂದ ವಿದ್ಯಾರ್ಥಿಗಳ ತೇರ್ಗಡೆಯ ಫಲಿತಾಂಶ ಏರಿಕೆಯಲ್ಲಿತ್ತು. ಆದರೆ, ಈ ವರ್ಷದ ಪರೀಕ್ಷೆಯಲ್ಲಿ ಕೊಪ್ಪಳ 23ನೇ ಸ್ಥಾನ ಪಡೆದು ಶೇ.7.98ರಷ್ಟು ಕುಸಿತ ಕಂಡಿದೆ. ಕಲಾವಿಭಾಗದಲ್ಲಿ ಅತಿ ಹೆಚ್ಚು ಅನುತ್ತೀರ್ಣವಾಗಿದ್ದು, ಶಿಕ್ಷಣ ಇಲಾಖೆ ಕಳವಳ ವ್ಯಕ್ತಪಡಿಸಿದೆ. ಹಾಗಾಗಿ ಮರುಪಾಠ ಮಾಡಲು ಆದೇಶಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮುಂಬರುವ ಪರೀಕ್ಷೆ-1ಕ್ಕೆ ವಿದ್ಯಾರ್ಥಿಗಳನ್ನು ತಯಾರಿಗೊಳಿಸಲು ತರಗತಿಗಳನ್ನು ಆರಂಭಿಸಬೇಕು. ವಿದ್ಯಾರ್ಥಿಗಳಲ್ಲಿ ಮನೋಸ್ಥೈರ್ಯ ತುಂಬಿ ಓದಲು ಪ್ರೇರೇಪಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯು ಎಲ್ಲ ಡಿಡಿಪಿಐಗಳಿಗೆ ಸೂಚಿಸಿರುವುದರಿಂದ ತರಗತಿಗಳನ್ನು ಆರಂಭಿಸಲಾಗಿದೆ.

ಗ್ರಾಮೀಣ ವ್ಯಾಪ್ತಿಯ ಕಾಲೇಜುಗಳಲ್ಲಿ ಓದುತ್ತಿರುವ ಒಟ್ಟು 4,296 ವಿದ್ಯಾರ್ಥಿಗಳಲ್ಲಿ 2,629 ಮಕ್ಕಳಷ್ಟೇ ಉತ್ತೀರ್ಣರಾಗಿದ್ದಾರೆ. ಫಲಿತಾಂಶದ ಪ್ರಮಾಣ ಶೇ 61.2ರಷ್ಟಿದೆ. ನಗರ ಪ್ರದೇಶಗಳ ವ್ಯಾಪ್ತಿಯ ಕಾಲೇಜುಗಳಲ್ಲಿ ಪರೀಕ್ಷೆ ಬರೆದ ಒಟ್ಟು 10,025 ವಿದ್ಯಾರ್ಥಿಗಳಲ್ಲಿ 7,002 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.69.78ರಷ್ಟಿದೆ. ಉಳಿದ ಮಕ್ಕಳನ್ನು ಕಾಲೇಜಿಗೆ ಕರೆಯಿಸಿ ಪಾಠ ಮಾಡುವ ಜವಾಬ್ದಾರಿಯೂ ಉಪನ್ಯಾಸಕರ ಮೇಲಿದೆ.

ಇದನ್ನೂ ಓದಿ: ಕೊಪ್ಪಳ | ʼಸದೃಢ ಭಾರತ ನಿರ್ಮಾಣಕ್ಕಾಗಿ ವ್ಯಕ್ತಿತ್ವ ವಿಕಸನ ಅಗತ್ಯʼ

“ಈ ವರ್ಷದ ವಾರ್ಷಿಕ ಪರೀಕ್ಷೆಯ ಫಲಿತಾಂಶ ಕುಸಿದಿದ್ದರಿಂದ ಪುನಃ ತರಗತಿಗಳನ್ನು ಆರಂಭಿಸುವಂತೆ ಇಲಾಖೆ ಸೂಚಿಸಿದೆ. ತರಗತಿಗಳನ್ನೂ ಆರಂಭಿಸಲಾಗಿದೆ ಹಾಗೂ ಮುಂದಿನ ವರ್ಷದಿಂದ ಕೊಪ್ಪಳ‌ ಜಿಲ್ಲೆಗೆ ಹೆಚ್ಚು ಫಲಿತಾಂಶ ಬರುವಂತೆ ಕ್ರಮವಹಿಸಲಾಗುವುದು” ಎಂದು ಕೊಪ್ಪಳ ಜಿಲ್ಲಾ ಶಿಕ್ಷಣ ಇಲಾಖೆಯ ಡಿಡಿಪಿಐ ಜಗದೀಶ ಹೇಳಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...