ಕೊಪ್ಪಳ | ಸಾಲ ವಾಪಸ್‌ ಕೇಳಿದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; AIMSS ಖಂಡನೆ

Date:

ಕೊಪ್ಪಳ ಜಿಲ್ಲೆಯ ಯಲಬುರ್ಗ ವ್ಯಾಪ್ತಿಯ ಮದ್ಲೂರು ಗ್ರಾಮದಲ್ಲಿ ನಡೆದ ಕೊಟ್ಟ ಸಾಲ ವಾಪಸ್‌ ಕೇಳಿದ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಘಟನೆಯನ್ನು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (AIMSS) ತೀವ್ರವಾಗಿ ಖಂಡಿಸಿದೆ.

- Advertisement -

“ಮಹಿಳೆಯೊಬ್ಬರಿಗೆ ಆರು ತಿಂಗಳ ಹಿಂದೆ ಪರಿಚಿತನಾಗಿದ್ದ ವ್ಯಕ್ತಿ ಸಾಲ ಹಿಂದಿರುಗಿಸುವ ನೆಪದಲ್ಲಿ ಕರೆಸಿಕೊಂಡು ಆತನ ಮೂವರು ಸ್ನೇಹಿತರೊಂದಿಗೆ ಸೇರಿ ಬಲವಂತವಾಗಿ ಮದ್ಯ ಕುಡಿಸಿ ಅವಳ ಮೇಲೆ ಅತ್ಯಾಚಾರ ಎಸಗಿದ್ದಾರೆ. ಜಿಲ್ಲೆಯಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲವೆಂಬುದು ಈ ಘಟನೆಯಿಂದ ತಿಳಿಯುತ್ತದೆ. ಮಹಿಳೆ ಎಲ್ಲಿ ಹೋದರೂ ಇಂತಹ ದುರುಳರು ಇದ್ದೇ ಇರುತ್ತಾರೆ” ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಇತ್ತೀಚೆಗೆ ಕೊಪ್ಪಳ ನಗರದ ಪಕ್ಕದ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅಣ್ಣನೇ ನಿರಂತರ ಅತ್ಯಾಚಾರ ಎಸಗಿ ಚಿಕ್ಕ ವಯಸ್ಸಿನಲ್ಲಿ ತಾಯಿಯಾಗಲು ಕಾರಣನಾದ ಘಟನೆ ಇನ್ನೂ ಮಾಸಿಲ್ಲ. ಅಷ್ಟರಲ್ಲೇ ಕೊಟ್ಟ ಹಣ ಕೇಳಲು ಬಂದವಳ ಮೇಲೆ ಪ್ರಾಣಿಗಳಂತೆ ಎರಗಿರುವುದು ಮನುಷ್ಯ ಸಮಾಜ ತಲೆತಗ್ಗಿಸುವಂತಾಗಿದೆ. ಆದರೆ ಇದು ಇಷ್ಟಕ್ಕೆ ಸೀಮಿತಗೊಳ್ಳದೆ ಶೀಘ್ರ ತನಿಖೆ ನಡೆಸಿ ಆರೋಪಿಗಳಿಗೆ ಉಗ್ರ ಶಿಕ್ಷೆ ವಿಧಿಸಬೇಕು. ಸಂತ್ರಸ್ತ ಮಹಿಳೆಗೆ ನ್ಯಾಯ ಒದಗಿಸಬೇಕು” ಎಂದು ಸಂಘಟನೆಯ ಮುಖ್ಯಸ್ಥರು ಆಗ್ರಹಿಸಿದರು.

ಇದನ್ನೂ ಓದಿ: ಕೊಪ್ಪಳ | ಮಠಾಧೀಶರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು: ತೋಂಟದಾರ್ಯ ಶ್ರೀ

“ಮಹಿಳೆಯರ ಮೇಲೆ ದಿನನಿತ್ಯ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯಗಳ ವಿರುದ್ಧ ಯಾವುದೇ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಸರ್ಕಾರಗಳು ಇಚ್ಛಾಶಕ್ತಿ ಹೊಂದಿಲ್ಲದೆ ಇರುವುದು ಇಂತಹ ಘಟನೆಗಳು ಹೆಚ್ಚಾಗಲು ಕಾರಣವಾಗಿದೆ. ಸಮಾಜದಲ್ಲಿ ಮೌಲ್ಯಗಳ ಕುಸಿತದಿಂದಾಗುತ್ತಿರುವ ಸಾಂಸ್ಕೃತಿಕ ಅವನತಿಯ ಗುರುತುಗಳೇ ಇಂತಹ ಪ್ರಕರಣಗಳು. ಜೊತೆಗೆ ಇಂದಿನ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಅಶ್ಲೀಲ ಸಿನಿಮಾ-ಸಾಹಿತ್ಯ, ಪೋರ್ನ್ ವೆಬ್ಸೈಟ್‌ಗಳು, ಮದ್ಯ, ಮಾದಕ ವಸ್ತುಗಳು ವಿದ್ಯಾರ್ಥಿ-ಯುವಕರನ್ನು ವಿಕೃತ ಕೃತ್ಯಗಳಲ್ಲಿ ತೊಡಗುವಂತೆ ಪ್ರೇರೆಪಿಸುತ್ತಿವೆ. ಸಮಾಜದ ನೈತಿಕ ಬೆನ್ನೆಲುಬು ಮುರಿಯುವ ಇಂತಹ ಹುನ್ನಾರದ ಹಿಂದಿರುವ ಸರ್ಕಾರಗಳು ಮತ್ತು ವ್ಯವಸ್ಥೆಯ ವಿರುದ್ಧ ಪ್ರಜ್ಞಾವಂತ ಜನತೆ ಒಗ್ಗಟ್ಟಾಗಿ ಹೋರಾಟ ಕಟ್ಟುವುದು ಘಳಿಗೆಯ ಅವಶ್ಯಕತೆಯಾಗಿದೆ. ಈ ನಿಟ್ಟಿನಲ್ಲಿ ಜನತೆ ಮುಂದೆ ಬರಬೇಕು” ಎಂದು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...