ಕೊಪ್ಪಳ | ಮನೆಗಳ ಹಕ್ಕುಪತ್ರ ನೀಡುವಂತೆ ಮನವಿ

Date:

ಕೊಪ್ಪಳ ಜಿಲ್ಲೆಯ ಕಾರಾಟಗಿ ತಾಲೂಕಿನ ಬೂದಗುಂಪಾ ಗ್ರಾಮದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸುಮಾರು 400 ಕುಟುಂಬಗಳಿಗೆ ಮನೆಗಳ ಹಕ್ಕಪತ್ರ ಸಿಕ್ಕಿಲ್ಲ. ನಿತ್ಯವೂ ನಮ್ಮ ಜನರು ತಾಲೂಕು ಕಚೇರಿಯಲ್ಲಿ ಅಲೆದಾಡುವಂತಹ ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಕೂಡಲೇ ಅಷ್ಟೂ ಕುಟುಂಬಗಳಿಗೂ ಹಕ್ಕುಪತ್ರ ನೀಡಬೇಕು ಎಂದು ಅಂಬೇಡ್ಕರ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಶಿವಕುಮಾರ ಕಾರಟಗಿ ಹೇಳಿದರು.

- Advertisement -

ಜಿಲ್ಲೆಯ ಕಾರಟಗಿ ತಾಲೂಕು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ, “ಯಾವುದೇ ಸರ್ಕಾರ ಬಂದರೂ ನಮ್ಮ ಸಮುದಾಯದ ಗೋಳು ಕೇಳುವವರೇ ಇಲ್ಲ. ಆದರೆ ಈಗಿನ ಸರ್ಕಾರ ನಮ್ಮ ದಲಿತ ಸಮುದಾಯದ ಪರವಾಗಿದ್ದು, ನಮ್ಮ ದಲಿತ ಸಮುದಾಯದ ಬಹುದೊಡ್ಡ ಸಮಸ್ಯೆ ಎಂದರೆ, ಸದರಿ ಬೂದಗುಂಪಾ ಗ್ರಾಮದಲ್ಲಿ ಜಮೀನು ಸರ್ವೆ ನಂ: 134ರಲ್ಲಿ ಬರುವ 400 ಮನೆಗಳಿಗೆ ಅನೇಕ ವರ್ಷಗಳಿಂದ ಹಕ್ಕುಪತ್ರ ಕೊಟ್ಟಿರುವುದಿಲ್ಲಾ. ಸದರಿ 30-40 ವರ್ಷಗಳಿಂದ ದಲಿತ ಸಮುದಾಯಕ್ಕೆ ಮಾತ್ರ ಹಕ್ಕುಪತ್ರ ಕೊಟ್ಟಿಲ್ಲ. ಈ ರಾಜ್ಯ ಸರ್ಕಾರದ ಅವಧಿಯಲ್ಲಿ ನಮ್ಮ ದಲಿತ ಸಮುದಾಯಕ್ಕೆ ಅನ್ಯಾಯವಾಗದಂತೆ ತಾವು ನಮ್ಮ ಸಮುದಾಯದ ಬಗ್ಗೆ ಕಾಳಜಿ ವಹಿಸಿ, ಮನೆಗಳ ಹಕ್ಕುಪತ್ರ ಒದಗಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಗದಗ | ಗ್ರಾಮ ಮಟ್ಟದಲ್ಲಿ ಉತ್ತಮ ಶಿಕ್ಷಣದ ಜತೆಗೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ: ರಾಜ್ಯಪಾಲರು

ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇವಾ ಸಮಿತಿ ಜಿಲ್ಲಾ ಘಟಕದ ಪದಾಧಿಕಾರಿಗಳು, ಕರ್ನಾಟಕ ಭೀಮ್ ಸೇನೆ ಯುವ ಶಕ್ತಿ ಸಂಘದ ಪದಾಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...