ಕೊಪ್ಪಳ | ಪ್ರತಿ ವಿದ್ಯಾರ್ಥಿಗೆ ಮಾಸಿಕ ನಿರ್ವಹಣಾ ಹಣ ಹೆಚ್ಚಿಸುವಂತೆ ಸಚಿವರಿಗೆ ಮನವಿ

Date:

Advertisements

ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಅಡಿಯಲ್ಲಿ ಬರುವ ಹಾಸ್ಟೆಲ್‌ಗಳ ವಿದ್ಯಾರ್ಥಿಗಳ ಮಾಸಿಕ ನಿರ್ವಹಣಾ ಹಣವನ್ನು ಪ್ರತಿ ವಿದ್ಯಾರ್ಥಿನಿಗೆ ₹5,000ಕ್ಕೆ ಹೆಚ್ಚಿಸುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆಯಿಂದ ಕನ್ನಡ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿಯವರಿಗೆ ಮನವಿ ಸಲ್ಲಿಸಿದರು.

“ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಬಿಸಿಎಂ ಹಾಸ್ಟೆಲ್‌ಗಳ ಮಾಸಿಕ ನಿರ್ವಹಣಾ ಹಣವನ್ನು ಪ್ರಸ್ತುತದಲ್ಲಿ ಪ್ರತಿ ವಿದ್ಯಾರ್ಥಿನಿಗೆ ಕೇವಲ ₹1,750(ದಿನಕ್ಕೆ ₹56) ಮಾತ್ರ ಹಣ ಜಮವಾಗುತ್ತಿದೆ. ಇದರಿಂದ ಮಕ್ಕಳಿಗೆ ಆಹಾರವನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ. ನಿರ್ವಹಣಾ ಹಣವನ್ನು ಹೆಚ್ಚಿಸಬೇಕು” ಎಂದು ಆಗ್ರಹಿಸಿದರು.

“ಕೊರೊನಾ ನಂತರದಲ್ಲಿ ಎಲ್ಲ ಆಹಾರ, ದಿನಸಿ ಪದಾರ್ಥಗಳ ಬೆಲೆ ಏರಿಕೆಯಾಗಿದೆ. ತರಕಾರಿಗಳ ದರ ನಿತ್ಯವೂ ಹೆಚ್ಚಳವಾಗುತ್ತಿರುತ್ತದೆ. ಮಕ್ಕಳಿಗೆ ಪೌಷ್ಠಿಕ ಗುಣಮಟ್ಟದ ಆಹಾರ ಸೇವಿ‌ಸುವ ಸಲುವಾಗಿ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಪ್ರತಿ ವಿದ್ಯಾರ್ಥಿನಿಗೆ ಮಾಸಿಕ ₹5,000ಕ್ಕೆ ಹೆಚ್ಚಿಸಬೇಕು” ಎಂದು ಮನವಿ ಮಾಡಿದರು.

Advertisements

“ಮಕ್ಕಳಿಗೆ ಒಂದು ದಿನಕ್ಕೆ ₹166ರಂತೆ ಹಣ ಬರುತ್ತದೆ. ಇದರಿಂದ ಮಕ್ಕಳಿಗೆ ಅನುಕೂಲವಾಗಬಹುದು. ವಿದ್ಯಾಭ್ಯಾಸದಲ್ಲಿ ಮುಂದುವರೆಯಲು ಮಕ್ಕಳಿಗೆ ಯಾವುದೇ ಅಡೆತಡೆ ಸಂಭವಿಸುವುದಿಲ್ಲ” ಎಂದು ಹೇಳಿದರು.

“ಎಲ್ಲ ಹಾಸ್ಟೆಲ್‌ಗಳಲ್ಲಿಯೂ ಗುಣಮಟ್ಟ ಆಹಾರ ನೀಡುವುದರಲ್ಲಿ ವಿಫಲರಾಗಿದ್ದಾರೆ. ಕಳಪೆ ಊಟದಿಂದಾಗಿ ವಿದ್ಯಾರ್ಥಿಗಳು ಮೇಲ್ವಿಚಾರಕರೊಡನೆ ಕಿತ್ತಾಡುವಂತಹ ಪರಿಸ್ಥಿತಿಯೂ ನಿರ್ಮಾಣವಾಗಿದೆ. ಹಾಸ್ಟೆಲ್‌ಗಳಲ್ಲೂ ಪ್ರವೇಶಾತಿ ಹೆಚ್ಚುತ್ತಿರುವುದರಿಂದ ಹೆಚ್ಚಿನ ಹಾಸ್ಟೆಲ್‌ಗಳನ್ನು ಪ್ರಾರಂಭಿಸಬೇಕು. ಅಂಕಗಳ ಶ್ರೇಣಿಕೃತ ಆಧಾರದಲ್ಲಿ ಕೊಡುವಂತಹ ಪ್ರವೇಶಾತಿ ಪದ್ಧತಿಯನ್ನು ಕೂಡಲೇ ನಿಲ್ಲಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ದಲಿತರ ಏಳಿಗೆಗೆ ಸರ್ಕಾರ ಮೀಸಲಿಟ್ಟ ಅನುದಾನ ಸಮರ್ಪಕ ಬಳಕೆಯಾಗುತ್ತಿಲ್ಲ: ರಮೇಶ್ ವೀರಾಪೂರು

“ಸದ್ಯ ಡಿಜಿಟಲ್ ಮುಂದುವರೆಯುವುದರಿಂದ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ನಲ್ಲಿ ವೈಫೈ ಸೌಲಭ್ಯ ಒದಗಿಸಬೇಕು. ಕ್ರೀಡಾ ಸಾಮಾಗ್ರಿಗಳನ್ನು ಕಾಲಕಾಲಕ್ಕೆ ಪೂರೈಕೆ ಮಾಡಬೇಕು. ಎಲ್ಲ ಹಾಸ್ಟೆಲ್‌ಗಳಲ್ಲಿಯೂ ಪ್ರತಿ ವಾರಕ್ಕೆರಡು ದಿನದಂತೆ ಸ್ಪರ್ಧಾತ್ಮಕ ತರಗತಿಗಳನ್ನು ಏರ್ಪಡಿಸಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ ರಾಜ್ಯ ಮುಖಂಡ ದುರುಗೇಶ್ ಬರಗೂರು, ಯಮುನಮ್ಮ, ಶರಣಬಸವ, ಯಮನೂರು, ರಾಜಣ್ಣ, ಲಕ್ಷ್ಮಿ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X