ಕೊಪ್ಪಳ | ಕಿನ್ನಾಳ ಗ್ರಾಮದಲ್ಲಿ ಏ.28ರಂದು ಕಂದಾಯ ಅದಾಲತ್: ನ್ಯಾ. ಮಹಾಂತೇಶ್ ಎಸ್ ದರಗದ

Date:

Advertisements

ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಏಪ್ರಿಲ್ 28ರಂದು ಕಂದಾಯ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಗ್ರಾಮದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನ್ಯಾ. ಮಹಾಂತೇಶ್ ಎಸ್ ದರಗದ ಹೇಳಿದರು.

ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಕಿನ್ನಾಳ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಕಂದಾಯ ಅದಾಲತ್ ಕುರಿತು ಮಾಹಿತಿ ನೀಡಲು ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

“ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಕಿನ್ನಾಳ ಗ್ರಾಮವನ್ನು ದತ್ತು ಪಡೆದ ನಂತರ ಈ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಏಪ್ರಿಲ್ 28ರಂದು ಬೆಳಿಗ್ಗೆ 10 ಗಂಟೆಗೆ ಕಿನ್ನಾಳ ಗ್ರಾಮ ಪಂಚಾಯಿತಿಯಲ್ಲಿ ಕಂದಾಯ ಅದಾಲತ್ ಹಮ್ಮಿಕೊಳ್ಳಲಾಗಿದೆ. ಈ ಅದಾಲತ್‌ನಲ್ಲಿ ‘ಸಂಧ್ಯಾ ಸುರಕ್ಷಾ, ವಿಧವಾ ವೇತನ, ವೃದ್ದಾಪ್ಯವೇತನ, ಅಂಗವಿಕಲರ ವೇತನ, 371(ಜೆ) ಪ್ರಮಾಣ ಪತ್ರ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಉದ್ಯೋಗ ಖಾತ್ರಿ ಕಾರ್ಡ್‌ಗಳ ವಿತರಣೆ, ಜನನ ಮರಣ ಪ್ರಮಾಣ ಪತ್ರ, ಇ-ಸ್ವತ್ತಿನ ದಾಖಲಾತಿ ಹಾಗೂ ನಿರಾಪೇಕ್ಷಣ ಪ್ರಮಾಣ ಪತ್ರ ಸೇರಿದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದ ಇತರೆ ವಿಷಯಗಳ ಕುರಿತು ಈ ಕಂದಾಯ ಅದಾಲತ್‌ನಲ್ಲಿ ಸಾರ್ವಜನಿಕರು ಮಾಹಿತಿ ಪಡೆಯಬಹುದಾಗಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಹಾಸನ | ಡಾ. ಬಿ ಆರ್ ಅಂಬೇಡ್ಕರ್‌ರವರು ಕಾರ್ಮಿಕ, ಮಹಿಳಾ ವಿಮೋಚಕರೆಂದರೆ ತಪ್ಪಿಲ್ಲ: ಡಾ. ಶಿವಕುಮಾರ್

“ಕಂದಾಯ ಅದಾಲತ್‌ನಲ್ಲಿ ಕೊಪ್ಪಳ ತಹಶೀಲ್ದಾರರು, ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿಗಳು, ಎಡಿಎಲ್‌ಆರ್, ಆರ್‌ಐ, ವಿಎ ಸೇರಿದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಕಿನ್ನಾಳ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮಕ್ಕೆ ಭಾಗವಹಿಸಿ ಕಂದಾಯ ಅದಾಲತ್‌ನ ಸದುಪಯೋಗ ಪಡೆದುಕೊಳ್ಳಬೇಕು” ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ರಥಮ ದರ್ಜೆ ಸಹಾಯಕ ಹನೀಫ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೆಶಕ ಡಾ. ಸುರೇಶ ಜಿ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿಗಳು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X