ಕೊಪ್ಪಳ | ಆರೆಸ್ಸೆಸ್‌, ಬಿಜೆಪಿಗರು ಸಂವಿಧಾನ ವಿರೋಧಿ ಚಾಳಿಯನ್ನು ಬಿಡಲಿ: ಕರ್ನಾಟಕ ಮಾದಿಗ ವೇದಿಕೆ

Date:

ಆರೆಸ್ಸೆಸ್‌ ಮತ್ತು ಬಿಜೆಪಿಗರು ಸಂವಿಧಾನ ವಿರೋಧಿ ಚಾಳಿಯನ್ನು ಬಿಡಲಿ. ಸಂಸತ್ತಿನ ಮೇಲ್ಮನೆಯಲ್ಲಿ ಅಮಿತ್‌ ಶಾ ತನ್ನ ನಾಲಿಗೆಯನ್ನು ಹರಿಬಿಟ್ಟಿದ್ದು, ಡಾ ಬಿ ಆರ್ ಅಂಬೇಡ್ಕರ್ ಅವರ ಹೆಸರನ್ನು ಪದೇಪದೆ ಹೇಳುವುದೊಂದು ವ್ಯಸನವಾಗಿಬಿಟ್ಟಿದೆ ಎಂದಿರುವುದು ಖಂಡನೀಯ ಎಂದು ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ, ಜನ ಶಕ್ತಿ ಸಂಘಟನೆಗಳು ಬಲವಾಗಿ ವಿರೋಧಿಸಿದ್ದು, ರಾಷ್ಟ್ರಪತಿಗಳಿಗೆ ವಿವಿಧ ಹಕ್ಕೊತ್ತಾಯಗಳನ್ನು ಸಲ್ಲಿಸಿದರು.

- Advertisement -

ಕೊಪ್ಪಳ ನಗರದಲ್ಲಿ ಅಶೋಕ ಸರ್ಕಲ್‌ನಿಂದ‌ ಬಸವೇಶ್ವರ ಸರ್ಕಲ್‌ವರೆಗೂ ಕಾಲ್ನಡಿಗೆಯಲ್ಲಿ ಪ್ರಗತಿಪರ ಸಂಘಟನೆಗಳು, ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ, ಜನಶಕ್ತಿ ಸಂಘಟನೆ ಹಾಗೂ ವಿವಿಧ ಸಂಘಟನೆಗಳು ನಡೆಸಿದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡನೀಯ. ಅಂಬೇಡ್ಕರ್ ವಿರೋಧಿ ಮಾತುಗಳನ್ನಾಡಿದ ಸಚಿವರನ್ನು ಈವರೆಗೂ ಸಂಪುಟದಲ್ಲೇ ಉಳಿಸಿಕೊಂಡಿರುವುದು ನರೇಂದ್ರ ಮೋದಿಯವರ ಧೋರಣೆಯ ಸೂಚಕವಾಗಿದೆ” ಎಂದು ಕರಿಯಪ್ಪ ಗುಡಿಮನಿ ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನ ವಿರೋಧಿಗಳ ವಿರುದ್ಧ ಆಕ್ರೋಶ 1

“ಬಿಜೆಪಿ ಮತ್ತು ಆರೆಸ್ಸೆಸ್ಸಿಗರು ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಸಂವಿಧಾನವನ್ನು ವಿರೋಧ ಮಾತಾಡುತ್ತಲೇ ಬಂದಿದ್ದಾರೆ. ಆರೆಸ್ಸೆಸ್ ಪ್ರತಿನಿಧಿಸುವ ಬ್ರಾಹ್ಮಣವಾದದಿಂದ ನೋವಿಗೊಳಗಾಗಿಯೇ ಬಾಬಾಸಾಹೇಬರು ‘ಹಿಂದೂವಾಗಿ ಹುಟ್ಟಿ ಹಿಂದೂವಾಗಿ ಸಾಯುವುದಿಲ್ಲ’ವೆಂದು ಘೋಷಿಸಿದ್ದರು. ಬಾಬಾಸಾಹೇಬರ ನೇತೃತ್ವದಲ್ಲಿ ಸಂವಿಧಾನ ರಚನಾ ಸಭೆಯು 1949ರ ನವೆಂಬರ್ 26ರಂದು ಸಂವಿಧಾನವನ್ನು ಬರೆದು ಮುಂದಿಟ್ಟ ನಾಲ್ಕೇ ದಿನಗಳಲ್ಲಿ ಆರೆಸ್ಸೆಸ್ ಸಂಘ ಸಂಚಾಲಕ ಗೋಲ್ವಾಲ್ಕರ್ ಅದನ್ನು ವಿರೋಧಿಸಿ ಲೇಖನ ಬರೆದಿದ್ದರು” ಎಂದು ತಿಳಿಸಿದರು.

ಸಂವಿಧಾನ ವಿರೋಧಿಗಳ ವಿರುದ್ಧ ಆಕ್ರೋಶ 2

“ಅಲ್ಲಿಂದ ಇಲ್ಲಿಯವರೆಗೆ ಗೋಲ್ವಾಲ್ಕರ್ ಹೇಳಿಕೆಯನ್ನು ಆರೆಸ್ಸೆಸ್ ಹಿಂತೆಗೆದುಕೊಂಡಿಲ್ಲ. ಇಂತಹ ಆರೆಸ್ಸಸ್‌ ಸಿದ್ಧಾಂತಗಳನ್ನು ಧಿಕ್ಕರಿಸುವುದಾಗಿ ಬಿಜೆಪಿ ಎಂದೂ ಹೇಳಿಲ್ಲ. ಹಾಗಾಗಿಯೇ ಬಿಜೆಪಿ, ಅದರ ನಾಯಕರ ಬಗ್ಗೆ ಎಲ್ಲ ಸಂವಿಧಾನ ಪ್ರೇಮಿಗಳಿಗೆ ಯಾವುತ್ತೂ ಅನುಮಾನವಿದೆ. ಅದನ್ನು ಇದೀಗ ಅಮಿತ್‌ ಶಾ ಹೇಳಿಕೆ ಬಲಪಡಿಸಿದೆ. ಅಂಬೇಡ್ಕರ್‌ ಅವರನ್ನು ಅವಹೇಳನ ಮಾಡಿದ್ದರ ಹಿಂದೆ ಇರುವುದು, ಮಾನವಿತೆಯ-ಪ್ರಜಾತಂತ್ರ-ನ್ಯಾಯದ ಕುರಿತ ಅವರ ಅಸಹನೆ. ಈ ಅಸಹನೆಯನ್ನು ವ್ಯಕ್ತಪಡಿಸಿದ ಸಚಿವರ ವಿರುದ್ಧ ಪ್ರಧಾನಿಗಳು ಕ್ರಮ ತೆಗೆದುಕೊಳ್ಳುತ್ತಾರೆಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ, ಈವರೆಗೆ ಅಂತಹ ಕ್ರಮವಾಗಿಲ್ಲ. ಬುದ್ಧವಿಹಾರಗಳ ಮೇಲೆ ದೌರ್ಜನ್ಯ ಮಾಡುವುದನ್ನು ನಿಲ್ಲಿಸಿ ಕಿಡಿಗೇಡಿಗಳ ಮೇಲೆ ಕಠಿಣ ಕ್ರಮ ಕಡ್ಡಾಯವಾಗಿ ಕ್ರಮ ಕೈಗೊಳ್ಳಬೇಕು” ಎಂದು ಸಾಹಿತಿ, ಪ್ರಗತಿಪರ ಹೋರಾಟಗಾರ ಅಲ್ಲಮಪ್ರಭು ಬೆಟ್ಟದೂರು ಒತ್ತಾಯಿಸಿದರು.

ಸಂವಿಧಾನ ವಿರೋಧಿಗಳ ವಿರುದ್ಧ ಆಕ್ರೋಶ 3

“ಪ್ರಧಾನಿ ನರೇಂದ್ರ ಮೋದಿಯವರು ಗೃಹಸಚಿವ ಅಮಿತ್ ಶಾ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ವಜಾ ಮಾಡಬೇಕು. ಸಂವಿಧಾನ ವಿರೋಧಿ ಹೇಳಿಕೆಯನ್ನು ನೀಡಿರುವ ಗೋಲ್ವಾಲ್ಕರ್ ಅವರ ಲೇಖನವನ್ನು ಆರೆಸ್ಸೆಸ್ ಮುಖಪತ್ರಿಕೆ ‘ಆರ್ಗನೈಸರ್’ನಿಂದ ಹಿಂಪಡೆದಿದ್ದೇವೆಂದು ಆರೆಸ್ಸೆಸ್ ಘೋಷಿಸಬೇಕು. ಇಲ್ಲವಾದರೆ, ಬಿಜೆಪಿಯು ಆರೆಸ್ಸಸ್ಸನ್ನು ಧಿಕ್ಕರಿಸಿ ಹೇಳಿಕೆ ನೀಡಬೇಕು. ಬುದ್ಧ ವಿಹಾರಗಳ ಮೇಲೆ ದೌರ್ಜನ್ಯ ಮಾಡುವುದನ್ನು ನಿಲ್ಲಿಸಿ ಕಿಡಿಗೇಡಿಗಳ ಮೇಲೆ ಕಡ್ಡಾಯವಾಗಿ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ʼಭೀಮಾ ಕೋರೆಗಾಂವ್ ವಿಜಯʼ ಸ್ಮರಣೆ ನಮ್ಮೆಲ್ಲರ ಕರ್ತವ್ಯ: ಸತೀಶ್ ಅರವಿಂದ್

ಅಲ್ಲಮಪ್ರಭು ಬೆಟ್ಟದೂರ, ಕರಿಯಪ್ಪ ಗುಡಿಮನಿ, ಶರಣು ಸಂಡೂರ ಕೆವಿಎಸ್, ಬಸವರಾಜ್ ಶೀಲವಂತರ, ಮುದಕಪ್ಪ ಹೊಸಮನಿ, ಪ್ರಗತಿ ಸಿಂಧನೂರು, ಶೋಭಾ ರಾಂಪೂರ, ಲಕ್ಷ್ಮೀ, ಯಮುನಾ ಚಳ್ಳೂರು ಸಂಜಯದಾಸ ಕೌಜಗೇರ್, ಉಮ್ಮೇಶ, ದುರ್ಗೇಶ್ ಬರಗೂರ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...