ಕೊಪ್ಪಳ | ಪಹಲ್ಗಾಮ್‌ ಭಯೋತ್ಪಾದಕ ದಾಳಿ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Date:

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸದಸ್ಯರು ಪ್ರತಿಭಟನೆ ನಡೆಸಿದರು.

- Advertisement -

ಕೊಪ್ಪಳ ನಗರದ ಸರ್ಕಾರಿ ಬಾಲಕರ ಕಾಲೇಜ್ ನಿಂದ ಅಶೋಕ್ ಸರ್ಕಲ್ ವರೆಗೆ ಕ್ಯಾಂಡಲ್ ಮಾರ್ಚ್ ಹಮ್ಮಿಕೊಳ್ಳಲಾಗಿತ್ತು.
ನಿನ್ನೆ ನಡೆದ ಪಹಲ್ಗಾಮ್ ಭಯೋತ್ಪಾದಕರ ದಾಳಿಯಿಂದ ಸುಮಾರು 28 ಜನ ಮೃತಪಟ್ಟಿರುತ್ತಾರೆ. ಆ ಪೈಕಿ ಕರ್ನಾಟಕ 3 ರಿಂದ 4 ಮಂದಿ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ದೇಶದ ಒಳಾಂಗಣ ಭದ್ರತೆ ಕುರಿತು ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿದ ಪ್ರತಿಭಟನಾಕಾರರು, ದಾಳಿಯ ಬೆನ್ನಲ್ಲೇ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಜಿಲ್ಲಾ ಅಧ್ಯಕ್ಷ ಸೈ ಸಲೀಮ್ ಖಾದ್ರಿ ಮಾತನಾಡಿ, “ದೇಶವಿರೋಧಿ ಚಟುವಟಿಕೆ ಮಾಡುವವರನ್ನು ದೇಶದ ಜನತೆ ಸಹಿಸುವುದಿಲ್ಲ. ಅಮಾಯಕರ ರಕ್ತಪಾತ ಮಾಡುವ ಭಯೋತ್ಪಾದಕರ ವಿರುದ್ಧ ನಾವು ಎಲ್ಲರೂ ಒಂದಾಗಬೇಕು. ದೇಶದ ಶಾಂತಿಯನ್ನು ಕದಡುವ, ಕಿಡಿಗೇಡಿತನ ಹಾಗೂ ಅಶಾಂತಿ ಹರಡುವ ಭಯೋತ್ಪಾದಕರ ವಿರುದ್ಧ ಕೇಂದ್ರ ಸರಕಾರ ತೀವ್ರವಾಗಿ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

“ಧರ್ಮ, ಜಾತಿ, ಭಾಷೆ ಎನ್ನುವ ಎಲ್ಲ ಭೇದಗಳನ್ನು ಮರೆತು, ದೇಶದ ಏಕತೆ ಮತ್ತು ಸಹೋದರತೆಯನ್ನು ಕಾಪಾಡಬೇಕು. ಹಿಂಸೆಯನ್ನು ಪ್ರಚೋದಿಸುವ ಮತ್ತು ದೇಶದ ವಿರುದ್ಧ ವಿಷ ಹರಡುವವರ ವಿರುದ್ಧ ದೇಶದ ಪ್ರತಿಯೊಬ್ಬನೂ ಏಕಮತದಿಂದ ನಿಲ್ಲಬೇಕು” ಆಗ್ರಹಿಸಿದರು.

ಇದನ್ನೂ ಓದಿ: ಕೊಪ್ಪಳ | ಕೊಪ್ಪಳ-ಬೆಂಗಳೂರು ನಡುವೆ ನಾನ್ ಎಸಿ ಸ್ಲೀಪರ್ ಬಸ್; ಸೇವೆಗೆ ಹಸಿರು ನಿಶಾನೆ

ರಾಜೀವ್ ಉರ್ ರಹೇಮಾನ್, ನಿಜಾಮುದ್ದೀನ್ ಮೊಳೆಕೋಪ್ಪ, ಮೊಹಮ್ಮದ್ ಸಾಧಿಕ್, ಅರ್ಶದ್ ಶೈಖ್, ಫಾರೂಕ್ ಅತ್ತಾರ್, ರಿಜ್ವಾನ್ ಪೀರ್ಜಾದೆ, ಹಾಗೂ ಎಲ್ಲಾ ಕಾರ್ಯಕರ್ತರು ಮತ್ತು ಬೆಂಬಲಿಗರು ಕ್ಯಾಂಡಲ್ ಮಾರ್ಚ್‌ನಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...