ಕೊಪ್ಪಳ | ಅಂಜನಾದ್ರಿ ಬೆಟ್ಟದಲ್ಲಿ ಎರಡನೇ ಬಾರಿ ಕಳ್ಳತನ; ಸಾಲು‌ ಅಂಗಡಿ-ಮುಂಗಟ್ಟುಗಳನ್ನು ದೋಚಿದ ಖದೀಮರು

Date:

Advertisements

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಆಂಜನಾದ್ರಿಯಲ್ಲಿ ಒಂದೇ ವಾರದಲ್ಲಿ ಎರಡು ಬಾರಿ ಸರಣಿಗಳ್ಳತನ ನಡೆದಿದ್ದು, ಕಳ್ಳರು ಸಾಲು ಅಂಗಡಿಗಳ ಬೀಗಗಳನ್ನು ಒಡೆದು ಅದರಲ್ಲಿರುವ ಬೀಡಿ, ಸಿಗರೇಟು, ಗುಟ್ಕಾ, ನಗದನ್ನು ದೋಚಿಕೊಂಡು ಹೋಗಿದ್ದಾರೆ.

ಅಂಜನಾದ್ರಿ ಬೆಟ್ಟಕ್ಕೆ ಬರುವಂತ ಪ್ರವಾಸಿಗರಿಗೆ ಹಾಗೂ ಭಕ್ತರಿಗೆ ದೇವರ ಫೋಟೋ, ಮಕ್ಕಳ ಆಟಿಕೆ ವಸ್ತುಗಳು ಹಾಗೂ ವಿಗ್ರಹಗಳನ್ನು ಬೇರೆಬೇರೆ ಬೆಲೆಬಾಳುವ ಸಾಮಾನುಗಳನ್ನು ಮಾರಾಟ ಮಾಡಲಾಗುತ್ತದೆ. ನೂರಕ್ಕೂ ಹೆಚ್ವು ಸಣ್ಣ ಹಾಗೂ ದೊಡ್ಡ ಪ್ರಮಾಣದ ಅಂಗಡಿಗಳಿವೆ.

“ಇದು ವಾರದಲ್ಲಿ ಎರಡನೇ ಸಲ ಕಳ್ಳತನದ ಘಟನೆ ನಡೆಯುತ್ತಿದ್ದು, ಸರಣಿಗಳ್ಳತನದಲ್ಲಿ‌ 20ಕ್ಕೂ ಹೆಚ್ಚು ಅಂಗಡಿಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕದೀಮರು ದರೋಡೆ ಮಾಡಿದ್ದಾರೆ. ವಿದ್ಯುತ್ ದೀಪಗಳ ವ್ಯವಸ್ಥೆ ಇಲ್ಲದ ಕಾರಣ ಕಳ್ಳರು ಕಳವು ಮಾಡಲು ಸುಲಭವಾಗಿದೆ. ಬೀಗಗಳನ್ನು ಮುರಿದು ದೋಚಲು ಸುಲಭವಾಗಿದೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

Advertisements

ಇದನ್ನೂ ಓದಿದ್ದೀರಾ? ವಿಜಯಪುರ | ಅಕ್ರಮವಾಗಿ ಆಧಾರ್ ಕಾರ್ಡ್ ತಿದ್ದುಪಡಿ; ಭೀಮಣ್ಣ ಕೋಟಾರಗಸ್ತಿ ವಿರುದ್ಧ ಕ್ರಮಕ್ಕೆ ಆಗ್ರಹ

ಸ್ಥಳೀಯರು ಅಂಜನಾದ್ರಿ ಬೆಟ್ಟಕೆ ಸಂಪರ್ಕಿಸುವ ಮುಖ್ಯ ರಸ್ತೆಗಳಿಗೆ ವಿದ್ಯತ್ ದೀಪ ಹಾಗೂ ಸಿಸಿ ಕ್ಯಾಮೆರಾ ಅಳವಡಿಸಲು ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಸಂಬಂಧಿಸಿದ ಇಲಾಖೆ ಇದಕ್ಕಕೆ ಸ್ಪಂಧಿಸಿಲ್ಲವೆಂಬ ಆರೋಪ ಕೇಳಿ ಬರುತ್ತಿದೆ.

ದೇವಸ್ಥಾನದ ಕಮಿಟಿ ಕೂಡಲೇ ರಸ್ತೆಗಳಲ್ಲಿ ಸಾಲಾಗಿ ವಿದ್ಯುತ್ ದೀಪ ಅಳವಡಿಸಿಬೇಕು ಹಾಗೂ ಪೋಲೀಸರು 24 ಗಂಟೆಗಳ ಕಾಲ ಬೆಟ್ಟದ ಬಳಿ ಗಸ್ತು ಹೆಚ್ಚಿಸಬೇಕೆಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.
.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X