ಕೊಪ್ಪಳ | ಜನವಸತಿ ಪ್ರದೇಶದಲ್ಲಿ ಕಾರ್ಖಾನೆ ಸ್ಥಾಪಿಸುವುದು ನಿಯಮ ಉಲ್ಲಂಘನೆ: ಎಸ್‌ ಎ ಗಫಾರ್

Date:

Advertisements

ಕೊಪ್ಪಳ ತಾಲೂಕಿನ ಗಿಣಿಗೇರಿ ಭಾಗದಲ್ಲಿ ಅನೇಕ ಕಾರ್ಖಾನೆಗಳು ನಿಯಮ ಉಲ್ಲಂಘಿಸಿ ಜನವಸತಿ ಪ್ರದೇಶಗಳಲ್ಲಿ ಸ್ಥಾಪನೆಯಾಗಿವೆ ಎಂದು ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್‌ ಎ ಗಫಾರ್ ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯಿಂದ ಗ್ರಾಮೀಣ ಹಾಗೂ ನಗರದ ಬೀದಿಗಳಲ್ಲಿ ಎಂಎಸ್‌ಪಿಎಲ್ ಕಾರ್ಖಾನೆ ವಿಸ್ತರಣೆ ಹಾಗೂ ಅಣುಸ್ಥಾವರ ಸ್ಥಾಪನೆ ವಿರುದ್ಧ ಜನಜಾಗೃತಿ ಬೀದಿ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಕಾರ್ಖಾನೆಗಳು ಜನವಸತಿ ಪ್ರದೇಶಗಳಿಂದ ಸಾಕಷ್ಟು ದೂರ ಇರಬೇಕೆಂಬ ನಿಯಮವಿದೆ. ಕಾರ್ಖಾನೆಗಳಿಂದ ಜನರಿಗೆ ಯಾವುದೇ ರೀತಿಯ ಕೆಟ್ಟ ದುಷ್ಪರಿಣಾಮಗಳು ಆಗಬಾರಎಂಬ ಕಾಯ್ದೆ ಇದ್ದರೂ ಕೂಡಾ ಕಾಯ್ದೆ, ನಿಯಮ ಎಲ್ಲವನ್ನೂ ಉಲ್ಲಂಘನೆ ಮಾಡಿದ್ದಾರೆ” ಎಂದು ಆರೋಪಿಸಿದರು.

Advertisements

“ಚುನಾಯಿತ ಪ್ರತಿನಿಧಿಗಳು ಅದರ ಲಾಭ ಉಡಾಯಿಸಿ ಕಾರ್ಖಾನೆಗಳನ್ನು ಸ್ಥಾಪನೆ ಮಾಡಿದ್ದರಿಂದ ಸುಮಾರು 30ಕ್ಕೂ ಹೆಚ್ಚು ಹಳ್ಳಿಗಳು ಮತ್ತು ನಗರದ ಜನರಿಗೆ ಆರೋಗ್ಯದ ಸಮಸ್ಯೆಯಾಗುತ್ತಿದೆ. ಆ ಹಳ್ಳಿಗಳ ಮನೆಗಳಲ್ಲಿ ಕಾರ್ಖಾನೆಗಳ ಬೂದಿ ಬೀಳುತ್ತಿದೆ. ಇದರಿಂದ ಉಸಿರಾಟಕ್ಕೆ ತೊಂದರೆಯಾಗುತ್ತಿದೆ. ಪ್ರಬಲವಾಗಿ ಬೆಳೆದಿರುವ ಕಾರ್ಖಾನೆಗಳಿಂದ ಸ್ಥಳೀಯ ಜನರಿಗೆ ಯಾವುದೇ ಲಾಭವಾಗುತ್ತಿಲ್ಲ” ಎಂದು ದೂರಿದರು.

“ಈ ಭಾಗದ ಜನರಿಗೆ ಉದ್ಯೋಗ ಕೊಡುತ್ತೇವೆಂದು ಬಂದು ಕಾರ್ಖಾನೆಗಳನ್ನು ಸ್ಥಾಪಿಸಿ, ಸ್ಥಳೀಯರಿಗೆ ಸಣ್ಣಪುಟ್ಟ ಹುದ್ದೆಗಳನ್ನು ನೀಡಿ, ಬೇರೆ ರಾಜ್ಯದವರಿಗೆ ಉನ್ನತ ಹುದ್ದೆಗಳಿಗೆ ಅವಕಾಶ ಕೊಡುತ್ತಿದ್ದಾರೆ. ಹೊಲ ಕೊಟ್ಟವರು ಯಾವುದೇ ಲಾಭವಿಲ್ಲದೆ ಬೀದಿಪಾಲಾಗಿದ್ದಾರೆ. ಎಂಎಸ್‌ಪಿಎಲ್ ಕಾರ್ಖಾನೆ ಹಳ್ಳಿಗಳಲ್ಲಷ್ಟೇ ಅಲ್ಲದೆ ಜಿಲ್ಲಾಧಿಕಾರಿ ಕಚೇರಿವರೆಗೂ ವಿಸ್ತರಣೆಯಾಗುತ್ತ ಬಂದಿದೆ” ಎಂದರು.

“ನಮ್ಮ ಜಿಲ್ಲೆಯಲ್ಲಿ ಅಣುಸ್ಥಾವರ ಸ್ಥಾಪಿಸಬಾರದು. ಮುಂದಿನ ಪೀಳಿಗೆಗೆ ಯಾವುದೇ ತೊಂದರೆಯಾಗಬಾರದು ಅಂದರೆ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಲು ಮುಂದಾಗಬೇಕು. ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳ ಕುರಿತು ಫೆಬ್ರವರಿ 22ರಂದು ಸಾಹಿತ್ಯ ಭವನದಲ್ಲಿ ಕಾರ್ಯಕ್ರಮವಿದೆ. ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ನಿರಂತರವಾಗಿ ಈ ಹೋರಾಟ ನಡೆಯುತ್ತದೆ” ಎಂದು ತಿಳಿಸಿದರು.

ಜನರು ಈಗಲಾದರೂ ಜಾಗೃತರಾಗಿ ಹೋರಾಡಿ ಕಂಪನಿಗಳನ್ನು ಜಿಲ್ಲೆಯಿಂದ ಹೊರಗೆ ಹಾಕದಿದ್ದರೆ, ಕೊಪ್ಪಳ ನಗರ ಮತ್ತು ಗ್ರಾಮೀಣ ಜನರು ಕಾರ್ಖಾನೆ ಧೂಳಿನಿಂದ ಭಾದಿತರಾಗಬೇಕಾಗುತ್ತದೆ. ಈಗಲಾದರೂ ಎಚ್ಚೆತ್ತುಕೊಂಡು ಹೋರಾಟ ಮಾಡದಿದ್ದರೆ ಮುಂದಿನ ಪೀಳಿಗೆಯ ಭವಿಷ್ಯ ಮಂಕಾಗುತ್ತದೆ. ಆದ್ದರಿಂದ ತೀವ್ರ ಹೋರಾಟಕ್ಕೆ ಕೊಪ್ಪಳ ನಗರದ ಹಾಗೂ ಧೂಳು ಬಾಧಿತ ಗ್ರಾಮೀಣ ಜನರು ಮುಂದಾಗಬೇಕು” ಎಂದು ಕರೆ ನೀಡಿದರು.‌

ಈ ಸುದ್ದಿ ಓದಿದ್ದೀರಾ? ತುಮಕೂರು | ಸ್ಲಂ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನಲ್ಲಿ ಹಣ ಮೀಸಲಿಡಲು ಸ್ಲಂ ಜನಾಂದೋಲನ ಒತ್ತಾಯ

ಕೊಪ್ಪಳ ನಗರ, ಹಾಲವರ್ತಿ, ಬೆಳವಿನ ಹಾಳ, ಬೇವಿನ ಹಳ್ಳಿ, ಹುಲಿಗಿ, ಹೊಸ ಕನಕಪುರ, ಹಳೆಯ ಕನಕಪುರದಲ್ಲಿ ಆಂದೋಲನ ಜರುಗಿತು. ಇಂದು ಕಾಸನಕಂಡಿ, ಚಿಕ್ಕ ಬಗನಾಳ, ಕುಣಿಕೇರಿ, ಕುಣಿಕೇರಿ ಲಾಚನಕೇರಿ ಮುಂತಾದ ಗ್ರಾಮಗಳಲ್ಲಿ 2ನೇ ದಿನದ ಕಾರ್ಯಕ್ರಮ ಜರುಗಿತು.

ಕರ್ನಾಟಕ ರೈತ ಸಂಘದ ರಾಜ್ಯ ಆಧ್ಯಕ್ಷ ಡಿ ಎಚ್ ಪೂಜಾರ, ಎಐಟಿಯುಸಿ ಜಿಲ್ಲಾ ಅಧ್ಯಕ್ಷ ಬಸವರಾಜ್ ಶೀಲವಂತರ್, ಎಐಯುಟಿಯುಸಿ ಮುಖಂಡ ಎಶರಣು ಗಡ್ಡಿ, ಕೆಆರ್‌ಎಸ್‌ನ ಜಿಲ್ಲಾ ಕಾರ್ಯದರ್ಶಿ ಬಸವರಾಜ ಪೂಜಾರ ನರೆಗಲ್, ಕರ್ನಾಟಕ ಮಾದಿಗ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಮುದಕಪ್ಪ ಹೊಸಮನಿ ನರೆಗಲ್, ರಾಘು ಚಾಕರಿ,‌ ಸುಂಕೇಶ, ಕರ್ನಾಟಕ ವಿದ್ಯಾರ್ಥಿ ಸಂಘ(ಕೆವಿಎಸ್) ದುರುಗೇಶ ಬರಗೂರ, ಯಮನೂರ,‌ ಮಾರುತಿ, ವಿದ್ಯಾರ್ಥಿನಿ ಯಮುನಾ ಸೇರಿದಂತೆ ಬಹುತೇಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X