ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆ, ಗಂಗಾವತಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಮಲ್ಲಾಪುರ ಗ್ರಾಮದ ಆಂಜಿನಪ್ಪ ಬಂಡಿ ಎಂಬಾತ 2022ರ ಸೆಪ್ಟೆಂಬರ್ 8ರಂದು ಸಂಜೆ 4:30ರ ಸುಮಾರಿಗೆ ಹಾಲು ತರಲು ಹೋಗಿದ್ದ ಬಾಲಕಿಗೆ ತಮಗೂ ತರುವಂತೆ ನೆಪ ಹೇಳಿ ಮನೆಯಲ್ಲಿ ಲೈಂಗಿಕ ಕಿರುಕುಳ ಕೊಟ್ಟಿದ್ದಾನೆ. ಬಾಧಿತ ಮಗು ಚೀರಾಡಿದ ಶಬ್ದ ಕೇಳಿ ಓಣಿಯ ಅಕ್ಕಪಕ್ಕ ಜನರು ಛೀಮಾರಿ ಹಾಕಿದ್ದಾರೆ ಎಂದು ಆರೋಪಿಸಿ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಈ ಹಿನ್ನೆಲೆ ಪಿ.ಐ ಮಂಜುನಾಥ ಎಸ್. ದೂರು ಸ್ವೀಕರಿಸಿ ಪ್ರಕರಣದ ತನಿಖೆ ನಡೆಸಿ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆಯನ್ನು ನಡೆಸಿದ ನ್ಯಾಯಾಲಯ ಆರೋಪಿ ಮಲ್ಲಾಪುರದ ಆಂಜಿನಪ್ಪ ಬಂಡಿ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆ 4 ವರ್ಷ ಜೈಲು ಶಿಕ್ಷೆ ಹಾಗೂ ರೂ. 60,000 ಗಳ ದಂಡ ವಿಧಿಸಿ ಗಂಗಾವತಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯಕ ತೀರ್ಪು ಹೊರಡಿಸಿರುತ್ತಾರೆ.
ಇದನ್ನೂ ಓದಿ: ಕೊಪ್ಪಳ | ಕತ್ತು ಹಿಸುಕಿ ಪತ್ನಿಯನ್ನು ಕೊಂದ ಪತಿ
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಗೌರಮ್ಮ ದೇಸಾಯಿ ವಾದ ಮಂಡಿಸಿದ್ದರು.