ಕೊಪ್ಪಳ | ರಾಷ್ಟ್ರೀಯ ಮಟ್ಟದ ಹ್ಯಾಂಡ್‌ಬಾಲ್‌ನಲ್ಲಿ ಗಂಗಾವತಿಯ ಜಾಗೃತಿಗೆ ಬೆಳ್ಳಿ ಪದಕ

Date:

ಮಂಡ್ಯ ಜಿಲ್ಲೆಯಲ್ಲಿ ಹ್ಯಾಂಡ್ ಬಾಲ್ ಅಸೋಸಿಯೇಷನ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಹ್ಯಾಂಡ್‌ಬಾಲ್ ಅಸೋಸಿಯೇಷನ್ ನೇತೃತ್ವದಲ್ಲಿ ನಡೆದ 2025-26ನೇ ಸಾಲಿನ 39ನೇ ರಾಷ್ಟ್ರೀಯ ಸಬ್-ಜೂನಿಯರ್ ಬಾಲಕಿಯರ ಹ್ಯಾಂಡ್‌ಬಾಲ್ ಪಂದ್ಯಾವಳಿಯಲ್ಲಿ ಗಂಗಾವತಿಯ ಜಾಗೃತಿಗೆ ಬೆಳ್ಳಿ ಪದಕ ಪಡೆದು ಕೊಪ್ಪಳ ಜಿಲ್ಲೆಗೆ ಹೆಸರು ತಂದಿದ್ದಾಳೆ.

- Advertisement -

ಎವ್‌ಬಿ‌ಎಐ ಹಾಗೂ ಕೆಎಸ್‌ಎಚ್‌ಬಿ‌ಎ ಕ್ರೀಡಾಕೂಟದಲ್ಲಿ ದೇಶದ 27 ರಾಜ್ಯಗಳ ತಂಡಗಳು ಭಾಗವಹಿಸಿವೆ. ಕರ್ನಾಟಕವನ್ನು ಪ್ರತಿನಿಧಿಸಿದ ಗಂಗಾವತಿಯ ಸ್ವಾತಿ ಹಾಗೂ ರಾಮು ಅವರ ಪುತ್ರಿ ಜಾಗೃತಿ ಶ್ರೇಷ್ಠ ಪ್ರದರ್ಶನ ನೀಡಿ ತಂಡದೊಂದಿಗೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಜಾಗೃತಿಗೆ ಬೇತಲ್ ಶಿಕ್ಷಣ ಸಂಸ್ಥೆಯ ಯಮನೂರ ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಹ್ಯಾಂಡ್ ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಮುಖ್ಯ ತರಬೇತುದಾರರಾಗಿ ಮಾರ್ಗದರ್ಶನ ನೀಡಿದ್ದಾರೆ. ರಾಜ್ಯ ಹಾಗೂ ಕೊಪ್ಪಳ ಜಿಲ್ಲೆಯ ಕೀರ್ತಿ ತಂದ ಮಗಳ ಯಶಸ್ಸು ಕಂಡು ತಾಯಿ-ತಂದೆ, ಶಾಲೆಯ ಶಿಕ್ಷಕರು ಹಾಗೂ ಸಹಪಾಠಿಗಳು ಹರ್ಷಿತರಾಗಿ ಜಾಗೃತಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.

ಇದನ್ನೂ ಓದಿ: ಕೊಪ್ಪಳ | ಆಟೋ ಪಲ್ಟಿ : 65 ವರ್ಷದ ಮಹಿಳೆ ಸಾವು

ಈ ಸಾಧನೆಗಾಗಿ ಕೊಪ್ಪಳ ಜಿಲ್ಲಾ ಹ್ಯಾಂಡ್‌ಬಾಲ್ ಅಸೋಸಿಯೇಷನ್‌ನ ಅಧ್ಯಕ್ಷ ಕೆ ದುರ್ಗೇಶ್ ಹೊಸಕೇರಿ ಹಾಗೂ ಸದಸ್ಯರು ಜಾಗೃತಿಗೆ ಅಭಿನಂದನೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...