ಪೌಷ್ಠಿಕ ಆಹಾರ ಸೇವನೆ ಹಾಗೂ ಇತರೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ಎಲ್ಲರೂ ಸದೃಢರಾಗಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ದರಗದರವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತಾಶ್ರದಲ್ಲಿ ಕೊಪ್ಪಳ ನಗರದ ದೇವರಾಜ ಅರಸ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಪೌಷ್ಟಿಕ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ಪೌಷ್ಟಿಕ ಆಹಾರ ಹಾಗೂ ಉತ್ತಮ ಜೀವನ ಶೈಲಿಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಮುಖ್ಯವಾಗಿ ಎಲ್ಲಾ ಗರ್ಭಿಣಿ, ಬಾಣಂತಿಯರು ಆರೋಗ್ಯಕರ ಮಗುವಿಗೆ ಜನ್ಮ ನೀಡುವಲ್ಲಿ ಪೌಷ್ಠಿಕ ಆಹಾರ ಮತ್ತು ಆರೋಗ್ಯಕರ ಜೀವನಶೈಲಿ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಹೇಳಿದರು.
ಇದನ್ನೂ ಓದಿ: ಕೊಪ್ಪಳ | ಧರ್ಮ ಮೀರಿ ಭಾವೈಕ್ಯತೆ ಸಾರಿದ ಇರಕಲ್ಲಗಡ ಗಣೆಶೋತ್ಸವ
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪರಶುರಾಮ ಶೆಟ್ಟೆಪ್ಪನವರ, ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೋಹಿಣಿ ಕೋಟಗಾರ, ಗರ್ಭಿಣಿ, ಬಾಣಂತಿಯರು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವಲಯದ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಇತರರು ಇದ್ದರು.