ಕೊಪ್ಪಳ | ಗಾಂಜಾ ಬೆಳೆಯುವುದು ಕಂಡು ಬಂದರೆ ಕಠಿಣ ಕ್ರಮ: ಡಿಸಿ ಸುರೇಶ್‌ ಇಟ್ನಾಳ

Date:

ಕೊಪ್ಪಳ ಜಿಲ್ಲೆಯ ಅರಣ್ಯ ಪ್ರದೇಶ ಹಾಗೂ ಜಮೀನುಗಳಲ್ಲಿ ಗಾಂಜಾ ಬೆಳೆಯುವುದು ಕಂಡು ಬಂದರೆ ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಎಚ್ಚರಿಕೆ ನೀಡಿದರು.

- Advertisement -

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾರ್ಕೋ ಕೋ-ಆರ್ಡಿನೇಷನ್ ಸೆಂಟರ್ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ ಹಾಗೂ ಮಾರಾಟ ನಿಯಂತ್ರಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಮನ್ವತೆಯಿಂದ ಕಾರ್ಯನಿರ್ವಹಿಸಬೇಕು. ಮಾಧಕ ವಸ್ತುಗಳ ಬಳಕೆ ಮಾಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ನಿಷೇಧ ಕುರಿತು ಜಾಗೃತಿ ಮೂಡಿಸಲು ಸಮಿತಿಗಳನ್ನು ರಚಿಸಿ ವರದಿ ನೀಡಬೇಕು” ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಈಗ ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸೀಜನ್ ಆಗಿರುವುದರಿಂದ ಆನೆಗೊಂದಿ ಭಾಗದಲ್ಲಿರುವ ಎಲ್ಲಾ ಹೋಂಸ್ಟೆ, ರೆಸಾರ್ಟ್, ಡಾಭಾಗಳು, ಹೋಟೆಲ್, ಪಾನಬೀಡಾ ಅಂಗಡಿಗಳಲ್ಲಿ ಮಾಧಕ ವಸ್ತುಗಳ ಮಾರಾಟದ ಬಗ್ಗೆ ಪರಿಶೀಲನೆ ನಡೆಸುವುದರ ಜೊತೆಗೆ ಜಿಲ್ಲೆಯ ಯಾವುದೇ ಭಾಗದಲ್ಲಿ ಮಾದಕ ವಸ್ತುಗಳ ಮಾರಾಟ ನಡೆಯದಂತೆ ನೋಡಿಕೊಳ್ಳಬೇಕು. ಅಬಕಾರಿ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ ಮಾಡಬೇಕು. ಈ ಕೆಲಸ ವಿಶೇಷವಾಗಿ ವೀಕೆಂಡನಲ್ಲಿ ಮಾಡಬೇಕು” ಎಂದು ಹೇಳಿದರು.

ಇದನ್ನೂ ಓದಿ: ಕೊಪ್ಪಳ | ಅಪ್ರಾಪ್ತ ಸಹೋದರಿ ಮೇಲೆ ಅಣ್ಣನಿಂದ ಅತ್ಯಾಚಾರ; ಬಂಧನ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಮಾತನಾಡಿ, “ಜಿಲ್ಲೆಯ ಯಾವುದೇ ಭಾಗದಲ್ಲಿ ಮಾಧಕ ವಸ್ತುಗಳ ಮಾರಾಟ ಕಂಡು ಬಂದಲ್ಲಿ ಅಂತವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಈಗಾಗಲೇ ನಮ್ಮ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ವಿಶೇಷವಾಗಿ ಶನಿವಾರ ಮತ್ತು ಭಾನುವಾರ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುವಂತೆ ನಿರ್ದೆಶನ ನೀಡಿದ್ದೆನೆ. ಕೂಕನಪಳ್ಳಿ ಸಂತೆಯ ದಿನ ಜನರು ರಸ್ತೆಯ ಮೇಲೆ ಕುಳಿತು ‘ಮದ್ಯ ಮಾರಾಟ ಮಾಡುತ್ತಾರೆ’ ಎನ್ನುವ ದೂರುಗಳಿಗೆ ತಕ್ಷಣ ಅದನ್ನು ನಿಲ್ಲಿಸಬೇಕು” ಎಂದು ಅಬಕಾರಿ ಅಧಿಕಾರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕ ಮಂಜುನಾಥ ಗುಂಡೂರ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಹೇಮಂತ್, ಸಹಾಯಕ ಔಷಧ ನಿಯಂತ್ರಣಾಧಿಕಾರಿಗಳು, ಅಬಕಾರಿ ಹಾಗೂ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...