ಕೊಪ್ಪಳ | ಬಿಎಸ್‌ಪಿಎಲ್ ಕಾರ್ಖಾನೆ ಆರಂಭಕ್ಕೆ ತೀವ್ರ ವಿರೋಧ; ಕೇಂದ್ರಕ್ಕೆ ಪ್ರಸ್ತಾವನೆ ಬಂದಿಲ್ಲವೆಂದ ಎಚ್‌ಡಿಕೆ

Date:

ಬಿಎಸ್‌ಪಿಎಲ್ ಕಾರ್ಖಾನೆ ಆರಂಭಕ್ಕೆ ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಈ ಕಾರ್ಖಾನೆಯ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಬಂದಿಲ್ಲವೆಂದು ಹೇಳಿದ್ದಾರೆ.

- Advertisement -

ಕೊಪ್ಪಳದ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕಾರ್ಖಾನೆಯಿಂದ ಇಲ್ಲಿನ ಪರಿಸರಕ್ಕೆ ಹಾನಿಯಾಗುತ್ತಿದೆಯೆಂದು ಗವಿಸಿದ್ದೇಶ್ವರ ಸ್ವಾಮೀಜಿ ಮತ್ತು ಜನರು ಹೋರಾಟ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಹೋರಾಟಕ್ಕೆ ನನ್ನ ಬೆಂಬಲವೂ ಇದೆ. ಆದರೆ ಇದು ರಾಜ್ಯ ಸರ್ಕಾರ ಹಾಗೂ ಕಾರ್ಖಾನೆ ನಡುವೆ ನಡೆದ ಒಪ್ಪಂದ. ನನ್ನ ಬಳಿ ಪ್ರಸ್ತಾಪ ಬಂದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸ್ವಾಮೀಜಿ ನೇತೃತ್ವದಲ್ಲಿ ಕಾರ್ಖಾನೆಗೆ ವಿರೋಧ ವ್ಯಕ್ತವಾಗಿದೆ. ಸಾರ್ವಜನಿಕರು ಮತ್ತು ಸ್ವಾಮೀಜಿ ಜತೆ ಸರ್ಕಾರ ಕುಳಿತು ಮಾತುಕತೆ ನಡೆಸಬೇಕು. ಪರಿಸರಕ್ಕೆ ಯಾವುದೇ ರೀತಿಯ ಹಾನಿಯಾಗದಂತೆ ಯೋಜನೆ ಅನುಷ್ಠಾನಗೊಳಿಸುವ ಕುರಿತು ಸರ್ಕಾರ ಗಮನ ಹರಿಸಬೇಕಿದೆ” ಎಂದು ತಿಳಿಸಿದರು.

“ರಾಜ್ಯ ಸರ್ಕಾರ ಜನರ ಪರವಾಗಿರಬೇಕು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಹಣದ ಕೊರತೆ ಇಲ್ಲ. ಆದರೆ, ದುರ್ಬಳಕೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಹತ್ತು ಹಲವಾರು ಯೋಜನೆಗಳು ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿವೆ. ಕೆಲವು ಯೋಜನೆಗಳಲ್ಲಿ ಹಣ ದುರ್ಬಳಕೆಯಾಗುತ್ತಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ಡಿ ಕೆ ಶಿವಕುಮಾರ್ ಅವರ ಹೇಳಿಕೆಗೆ ಪ್ರತ್ರಿಕ್ರಿಯಿಸಿ, “ಡಿ ಕೆ ಶಿವಕುಮಾರ್​ಗೆ ರಾಜ್ಯದ ಜನ ನಟ್ಟು ಬೋಲ್ಟ್ ಸರಿ ಮಾಡಲು ಅಧಿಕಾರ ಕೊಟ್ಟಿದ್ದಾರಾ? ಆ ಕೆಲಸ ಮಾಡಲು ಬೇರೆಯವರಿದ್ದಾರೆ. ರಾಜ್ಯದ ಜನ ಅವರಿಗೆ 138 ಸ್ಥಾನ ಕೊಟ್ಟಿದ್ದಾರೆ. ಜನರ ಕಷ್ಟಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕೇ ಹೊರತು ಸಿನೆಮಾ ಮತ್ತು ರಾಜಕಾರಣಕ್ಕೆ ನಮಗೆ ಯಾರು ಬೆಂಬಲ ಕೊಟ್ಟಿದ್ದಾರೋ ಬಿಟ್ಟಿದ್ದಾರೋ ಅನ್ನೋದನ್ನೆಲ್ಲ ಲೆಕ್ಕ ಮಾಡಿಕೊಂಡು ಕೂರುವುದಲ್ಲ” ಎಂದರು.

ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರ್ತಾರೆ ಎಂಬ ಸಚಿವ ಜಮಿರ್ ಹೇಳಿಕೆಗೆ, ಯಾರು ಏನೆಲ್ಲಾ ಆಗುತ್ತಾರೆಂಬುದನ್ನು ಕಾಲ ನಿರ್ಧಾರ ಮಾಡುತ್ತದೆ. ಮೊದಲು ಕಾಂಗ್ರೆಸ್​​ನವರು ತಮ್ಮ ಮನೆಯ ಜಗಳವನ್ನು ಬಗೆಹರಿಸಿಕೊಳ್ಳಲಿ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...