ಕೊಪ್ಪಳ | ಹೋರಾಟ ಯಶಸ್ವಿ: ಬಲ್ದೋಟ ಕಾರ್ಖಾನೆ ಕಾಮಗಾರಿಗೆ ಸ್ಥಗಿತ; ಸಿಎಂ ಸೂಚನೆ

Date:

Advertisements

ಕೊಪ್ಪಳ ನಗರದ ಬಳಿ ಬಲ್ಡೋಟ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಸಂಸ್ಥೆಯು ಸ್ಥಾಪಿಸುತ್ತಿದ್ದ ಉಕ್ಕು ಮತ್ತು ವಿದ್ಯುತ್ ಸ್ಥಾವರದ ವಿರುದ್ಧ ಭಾರೀ ಆಕ್ರೋಶ, ಪ್ರತಿಭಟನೆಗಳು ನಡೆದಿವೆ. ಜನರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಕಾರ್ಖಾನೆ ಕಾಮಗಾರಿಯನ್ನು ಸ್ಥಗಿತಗೊಳಿಸಿದೆ. ಕಾಮಗಾರಿಯನ್ನು ಮುಂದುವರೆಸದಂತೆ ಕೊಪ್ಪಳ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಕಳೆದ ತಿಂಗಳು, ಕೊಪ್ಪಳದಲ್ಲಿ ಉಕ್ಕು ಮತ್ತು ವಿದ್ಯುತ್‌ ಸ್ಥಾವರ ಸ್ಥಾಪಿಸಲು ತಿಳುವಳಿಕೆ ಪತ್ರಕ್ಕೆ ಸರ್ಕಾರ ಸಹಿ ಹಾಕಿತ್ತು. ಆದರೆ, ಸ್ಥಾವರ ಕೊಪ್ಪಳದ ಪರಿಸರವನ್ನು ನಾಶ ಮಾಡಲಿದೆ. ಮತ್ತಷ್ಟು ಶಾಖವನ್ನು ಹೆಚ್ಚಿಸಲಿದೆ. ಜನ ಜೀವನವೂ ಸೇರಿದಂತೆ ಇಡೀ ವ್ಯವಸ್ಥೆ ಹಾಳಾಗಲಿದೆ. ಮಾಲಿನ್ಯವು ಇನ್ನೂ ಹೆಚ್ಚಾಗುತ್ತದೆ. ಜನ-ಜಾನುವಾರುಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳು ಎದುರಾಗುತ್ತವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಹಲವು ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.

ಅಲ್ಲದೆ, ಮಂಗಳವಾರ, ಕೊಪ್ಪಳ ಜಿಲ್ಲೆಯ ಎಲ್ಲ ರಾಜಕೀಯ ಮುಖಂಡರು, ನಾಗರಿಕರು ಹಾಗೂ ಪರಿಸರ ಹೋರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ,ಕಾರ್ಖಾನೆ ಕಾಮಗಾರಿಯನ್ನು ಕೈಬಿಡುವಂತೆ ಒತ್ತಾಯಿಸಿದ್ದರು. ಜೊತೆಗೆ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಕೂಡ ಸ್ಥಾವರದ ನಿರ್ಮಾಣದಿಂದಾಗುವ ಅಪಾಯಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದ್ದರು. ಪರಿಣಾಮವಾಗಿ, ಸ್ಥವರ ಸ್ಥಾಪನೆಯ ಕಾಮಗಾರಿಯನ್ನು ಸ್ಥಗಿತಗೊಳಿಸಲು ಸೂಚಿಸಿದ್ದಾರೆ.

Advertisements

ತಮ್ಮ ಆದೇಶದಲ್ಲಿ, “ಕೊಪ್ಪಳದಲ್ಲಿ ಸ್ಥಾವರ ಸ್ಥಾಪನೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಿಲ್ಲ. ಈ ವಿಚಾರ ಕುರಿತು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರೊಂದಿಗೆ ಚರ್ಚಿಸಿ ವರದಿ ಪಡೆಯುತ್ತವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಹ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X