ಕೊಪ್ಪಳ | ಬಸ್ ತಂಗುದಾಣ ನಿರ್ಮಿಸಲು ವಿದ್ಯಾರ್ಥಿಗಳಿಂದ ರಸ್ತೆ ತಡೆ; ಎಐಡಿಎಸ್ಒ ಬೆಂಬಲ

Date:

ಬೂದಗುಂಪ ಗ್ರಾಮಕ್ಕೆ ಬಸ್ ನಿಲುಗಡೆ ಹಾಗೂ ಬಸ್ ತಂಗುದಾಣ ನಿರ್ಮಿಸವಂತೆ ಬಸ್‌ಗಳನ್ನು ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳ ಸ್ವಯಂ ಪ್ರೇರಿತ ಹೋರಾಟಕ್ಕೆ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ಬೆಂಬಲ ನೀಡಿತು.

- Advertisement -

ಕೊಪ್ಪಳ ತಾಲೂಕಿನ ಬೂದಗುಂಪ ಗ್ರಾಮದಿಂದ ನಗರದ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಬಹಳ ಮಂದಿ ಇದ್ದಾರೆ. ಸರಿಯಾದ ಬಸ್ ತಂಗುದಾಣ ಇಲ್ಲದಿರುವುದರಿಂದ ಬಸ್ಸುಗಳು ನಿಲ್ಲಿಸದೇ ಇರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆ ಗ್ರಾಮದ ವಿದ್ಯಾರ್ಥಿಗಳು ಬಸ್ ನಿಲ್ಲಿಸಿ ಸುಮಾರು 3 ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟಿಸಿ ಸಾರಿಗೆ ಸಂಸ್ಥೆಯ ಮೇಲ್ವಿಚಾರಕ ಮಂಜುನಾಥ ಹಾಗೂ ಗ್ರಾಮದ ಪಿಡಿಒಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ವಿದ್ಯಾರ್ಥಿನಿ ಭಾಗ್ಯಶ್ರೀ ಮಾತನಾಡಿ, “ಪ್ರತಿನಿತ್ಯ ಶಾಲಾ-ಕಾಲೇಜುಗಳಿಗೆ ತೆರಳುವ ನಮಗೆ ಸರಿಯಾದ ಸಮಯಕ್ಕೆ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಬಸ್ ನಿಲುಗಡೆ ಆಗದೇ ತಡೆರಹಿತವಾಗಿ ಚಲಿಸುತ್ತವೆ. ಇದರಿಂದ ದಿನನಿತ್ಯ ನಮಗೆ ತೊಂದರೆಯಾಗಿದೆ” ಎಂದು ಆಕ್ರೋಶಗೊಂಡರು.

ಹಿಂದೊಮ್ಮೆ ವಿದ್ಯಾರ್ಥಿನಿ ಬಸ್ಸಿನಿಂದ ಕೆಳಗೆ ಬಿದ್ದರೂ ಬಸ್ ಚಾಲಕನು ಹಾಗೆಯೇ ಬಸ್ ಚಾಲನೆ ಮಾಡಿಕೊಂಡು ಹೋದ ಘಟನೆ ನಡೆದಿದೆ. ವಯೋವೃದ್ಧರು, ಸಣ್ಣ ಮಕ್ಕಳು ಮತ್ತು ವಿದ್ಯಾರ್ಥಿಗಳು ಬಿಸಿಲಿನಲ್ಲಿ ನಿಂತು ಬಸ್ಸಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಈ ಘಟನೆಗಳಿಂದ ಕುಪಿತಗೊಂಡಂತ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಬಸ್ ತಡೆದು ಪ್ರತಿಭಟಿಸುತ್ತಿದ್ದಾರೆ.

ಇದನ್ನೂ ಓದಿ: ಕೊಪ್ಪಳ | 62 ದಿನಗಳ ಕಾಲ 1,550 ಕಿ.ಮೀ. ಏಕಾಂಗಿ ಪಾದಯಾತ್ರೆ ನಡೆಸಿದ ಹನುಮೇಶ

ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಮುಖಂಡ ತುಳಜಾ ರಾಮ್ ಹಾಗೂ ಸಿಂಧು ಕೌದಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಬೆಂಬಲಿಸಿ ಮಾತನಾಡಿ, “ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಇಚಲಕರಂಜಿ, ಹುಬ್ಬಳ್ಳಿ, ಕಾರವಾರ, ಸಿಂಧನೂರು ಮತ್ತು ರಾಯಚೂರು ಸೇರಿದಂತೆ ಬೂದಗುಂಪ ಮಾರ್ಗವಾಗಿ ಚಲಿಸುವ ಬಸ್ಸುಗಳನ್ನು ನಿಲುಗಡೆ ಮಾಡಬೇಕು. ಬೂದುಗುಂಪದಲ್ಲಿ ಎರಡು ಕಡೆ ಬಸ್ ತಂಗುದಾಣವನ್ನು ನಿರ್ಮಿಸಬೇಕು” ಎಂದು ಆಗ್ರಹಿಸಿದರು.

ವಿದ್ಯಾರ್ಥಿಗಳಾದ ಭಾಗ್ಯಶ್ರೀ, ಮಂಜವ್ವ, ಕವಿತಾ, ಕೀರ್ತನ, ಪವಿತ್ರ, ಹನುಮಂತಿ, ಶಶಿಕಲಾ, ಅಕ್ಷತಾ, ಕರಿಯಮ್ಮ, ನಫೀಜ, ಕರಿಯಣ್ಣ, ಮಲ್ಲಿಕಾರ್ಜುನ, ದೀಪಿಕಾ, ಬಸಮ್ಮ, ರೇಣುಕಾ, ಭೀಮಶ್ರೀ, ಸೌಂದರ್ಯ, ಲಕ್ಷ್ಮಿ, ರೈತ ಸಂಘಟನೆಯ ಹನುಮಂತಪ್ಪ, ಫಕೀರಪ್ಪ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...