ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಎಸ್‌ಯುಸಿಐ ಆಗ್ರಹ

Date:

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಖಾತ್ರಿಪಡಿಸುವಂತೆ ಆಗ್ರಹಿಸಿ ಎಸ್‌ಯುಸಿಐ(ಕಮ್ಯುನಿಸ್ಟ್) ವತಿಯಿಂದ ಆಗ್ರಹಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದು, ಆಸ್ಪತ್ರೆಗಳಿಗೆ ಭೇಟಿ ನೀಡಿ ಸಮಸ್ಯೆ ಸರಿಪಡಿಸಿ, ಬಡಜನರ ಅರೋಗ್ಯ ರಕ್ಷಣೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಪಕ್ಷದ ಮುಖಂಡ ಶರಣು ಗಡ್ಡಿ ಮಾತನಾಡಿ, “ಕೊಪ್ಪಳ ಜಿಲ್ಲಾದ್ಯಂತ ಇರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಪಿಎಚ್‌ಸಿ, ಸಿಎಚ್‌ಸಿ ಮತ್ತು ತಾಲೂಕು ಆಸ್ಪತ್ರೆಗಳಿಂದ ಹಿಡಿದು ಜಿಲ್ಲಾಸ್ಪತ್ರೆವರೆಗೂ ಸಾಕಷ್ಟು ಸಮಸ್ಯೆಗಳಿವೆ. ಅವಶ್ಯಕತೆ ಇರುವಷ್ಟು ತಜ್ಞ ವೈದ್ಯರು, ದಾದಿಯರು ಸೇರಿದಂತೆ ಇತರ ವೈದ್ಯಕೀಯ ಸಿಬ್ಬಂದಿಗಳು ಹಾಗೂ ಆಧುನಿಕ ಯಂತ್ರೋಪಕರಣಗಳ ಕೊರತೆಯಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಬಿಪಿಎಲ್ ಕಾರ್ಡ್‌ದಾರರಿಗೆ ಉಚಿತ ಸ್ಕ್ಯಾನಿಂಗ್, ರಕ್ತ ಪರೀಕ್ಷೆ, ಸರ್ಜರಿ ಸೇರಿದಂತೆ ಇತರೆ ಉಚಿತ ತಪಾಸಣೆಗಳು ಸರಿಯಾದ ಸಮಯಕ್ಕೆ ಲಭ್ಯವಾಗುತ್ತಿಲ್ಲ. ಸಿಟಿ ಸ್ಕ್ಯಾನ್ ಮಾಡಲು ಹಣ ಸಂಗ್ರಹ ಮಾಡಲಾಗುತ್ತಿದೆ. ಎಂಆರ್‌ಐ ಸೌಲಭ್ಯ ಇಲ್ಲವಾಗಿದೆ. ಇನ್ನೊಂದೆಡೆ ಚೀಟಿ, ಔಷಧಿ ಮತ್ತು ಹಣ ಪಾವತಿ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ದಿನವಿಡೀ ನೂರಾರು ರೋಗಿಗಳು ಪಾಳಿಯಲ್ಲಿ ನಿಲ್ಲುವ ಪರಿಸ್ಥಿತಿಯಿದೆ. ಬಡರೋಗಿಗಳು ತಮ್ಮ ದಿನಗೂಲಿ ಬಿಟ್ಟು ಸಣ್ಣಪುಟ್ಟ ಕಾಯಿಲೆಗಳಿಗೂ ವಾರಗಟ್ಟಲೆ ಆಸ್ಪತ್ರೆಗೆ ಆಲೆದಾಡುವಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಎಸ್‌ಯುಸಿಐ ಪ್ರತಿಭಟನೆ ಕೊಪ್ಪಳ

“ಆಸ್ಪತ್ರೆಯ ಔಷಧಾಲಯಗಳಲ್ಲಿ ಉತ್ತಮ ಗುಣಮಟ್ಟದ ಔಷಧಿ ಪೂರೈಕೆಯಾಗುತ್ತಿಲ್ಲ. ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರು ಜನರ ಸೇವೆಗೆ ಲಭ್ಯವಾಗುತ್ತಿಲ್ಲ. ಸ್ವಚ್ಛತೆ ಇಲ್ಲದೆ ಆಸ್ಪತೆಯಲ್ಲಿ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಇದೆ. ಈ ಕಾರಣಗಳಿಂದ ಬೇಸತ್ತು ಅನೇಕ ಬಾರಿ ಜನರು ಅಸಹಾಯಕರಾಗಿ ದುಬಾರಿ ವೆಚ್ಚದ ಖಾಸಗಿ ಆಸ್ಪತ್ರೆಗಳಿಗೆ ಹೋಗುವಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡ ಶರಣು ಪಾಟೀಲ್ ಮಾತನಾಡಿ, “ಆರೋಗ್ಯ ಒಂದು ಅವಶ್ಯಕ ಸಾರ್ವಜನಿಕ ಸೇವೆಯಾಗಿದೆ. ಆದರೆ ಜಾಗತೀಕರಣ, ಉದಾರೀಕರಣ, ಖಾಸಗೀಕರಣದ(ಎಲ್‌ಪಿಜಿ) ಕಾರಣದಿಂದಾಗಿ ಇಂದು ಆರೋಗ್ಯಕ್ಷೇತ್ರ ಲಾಭದಾಹಿ ಉದ್ದಿಮೆಯಾಗಿ ಮಾರ್ಪಟ್ಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಆರೋಗ್ಯ ಸೇವೆಗಳಿಗೆ ನಿಗದಿಯಾಗಿರುವ ಬಜೆಟ್ ಪ್ರಮಾಣ ಕಡಿಮೆ ಮಾಡಿರುವುದೇ ಇದಕ್ಕೆ ಮುಖ್ಯ ಕಾರಣ. ಆಸ್ಪತ್ರೆ ಸೌಲಭ್ಯಕ್ಕೆ ತಗಲುವ ವೆಚ್ಚವನ್ನು ಭರಿಸಲಾಗದೆ ಅದೆಷ್ಟೋ ಬಡಜೀವಗಳು ಸಾವನ್ನಪ್ಪುತ್ತಿವೆ. ಇವು ಸಹಜ ಸಾವಲ್ಲ; ಬಡವರನ್ನು ಅಸಹಾಯಕ ಸ್ಥಿತಿಗೆ ತಳ್ಳಿ ವ್ಯವಸ್ಥೆ ಮಾಡುತ್ತಿರುವ ಕ್ರೂರ ಕೊಲೆಗಳಾಗಿವೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಧರ್ಮಸ್ಥಳ ಸಂಘ ಸಂಸ್ಥೆಯ ಕಿರುಕುಳಕ್ಕೆ ಬೆಸತ್ತ ಮಹಿಳೆ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

“ಇತ್ತೀಚಿನ ಹಲವು ವರದಿಗಳನ್ವಯ ಬೆಳಗಾವಿ, ಬಳ್ಳಾರಿ, ರಾಯಚೂರು, ಕೊಪ್ಪಳ ಸೇರಿದಂತೆ ರಾಜ್ಯದ ಹಲವಾರು ಕಡೆ ಬಾಣಂತಿಯರು ಮತ್ತು ನೂರಾರು ಹಸುಗೂಸುಗಳು ಸಾವನ್ನಪ್ಪಿವೆ. ಪಶ್ಚಿಮ ಬಂಗಾಳದಿಂದ ಆಮದು ಮಾಡಿಕೊಂಡ ಸೋಂಕಿತ ಹಾಗೂ ಕಳಪೆ ಗುಣಮಟ್ಟದ ಔಷಧಿಗಳೇ ಈ ಬಾಣಂತಿಯರ ಸಾವಿಗೆ ಕಾರಣವೆಂದು ಹೇಳಲಾಗುತ್ತಿದೆ. ಇದು ಸರ್ಕಾರದ ಬೇಜವಾಬ್ದಾರಿತನದ ಮಟ್ಟವನ್ನು ತೋರಿಸುತ್ತದೆ. ಬಡ ಮಹಿಳೆಯರ ಪಾಲಿಗೆ ಸರ್ಕಾರಿ ಆಸ್ಪತ್ರೆಗಳೇ ಸಾವಿನ ಕೂಪಗಳಾಗುತ್ತಿವೆ. ಕೊಪ್ಪಳ ಜಿಲ್ಲೆಯಲ್ಲಿರುವ ಎಲ್ಲ ಹಂತದ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಸಮಸ್ಯೆಗಳನ್ನು ಜಿಲ್ಲಾಧಿಕಾರಿ ಮತ್ತು ಅರೋಗ್ಯ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಕೊಡಲೇ ಸ್ಥಳ ವೀಕ್ಷಣೆ ಮಾಡುವ ಮೂಲಕ ಸಮಸ್ಯೆ ಸರಿಪಡಿಸಿ ಬಡಜನರ ಅರೋಗ್ಯ ರಕ್ಷಣೆ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಸದಸ್ಯ‌ ಗಂಗರಾಜ ಅಳ್ಳಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಕ್ಷದ ಸದಸ್ಯರಾದ ಶಾರದಾ ಗಡ್ಡಿ, ಮಂಜುಳಾ ಎಂ, ಸುಭಾನ್ ನೀರಲಗಿ, ಸಾರ್ವಜನಿಕರಾದ ಮಂಗಳೇಶ್ ರಾಥೋಡ್, ದ್ಯಾಮಣ್ಣ ಡೊಳ್ಳಿನ್, ಈರಮ್ಮ, ಲಲಿತ, ಈರಣ್ಣ ತಾಳಕನಕಾಪುರ ಹಾಗೂ ಕೊಪ್ಪಳದ ವಿವಿಧ ಪ್ರದೇಶ ಮತ್ತು ಹಳ್ಳಿಗಳಿಂದ ಆಗಮಿಸಿದ 30ಕ್ಕೂ ಹೆಚ್ಚು ಜನರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...