ಕೊಪ್ಪಳ ಜಿಲ್ಲೆಯ ಗಂಗಾವತಿಯ ಸುಮಯಾ ಗೇಟಿನ್ ಅವರು ಸ್ಕೌಟ್ಸ್ ಹಾಗೂ ಗೈಡ್ಸ್‌ನಲ್ಲಿ ತಮ್ಮ ಅತ್ಯುತ್ತಮ ಸೇವೆಗೆ ಮನ್ನಣೆಯಾಗಿ ಪ್ರತಿಷ್ಠಿತ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದು, ಬೆಂಗಳೂರಿನ ‘ರಾಜ್ಯ ಭವನ’ದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್‌ಚಂ ಗೆಹ್ಲೋಟ್ ಈ ಪ್ರಶಸ್ತಿ ಪ್ರದಾನ ಮಾಡುವರು.
ಸುಮಯಾ ಗೇಟಿನ್ ಅವರು ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಕಾಣಿಸಿಕೊಂಡಿದ್ದಾರೆ. ತಮ್ಮ ನಾಯಕತ್ವ ಗುಣಗಳು, ಸೇವಾ ಮನೋಭಾವ ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಾಗಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಯುವಜನರ ಸರ್ವತೋಮುಖ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಈ ಸುದ್ದಿ ಓದಿದ್ದೀರಾ? ಮೈಸೂರು | ಹುಣಸೂರಿನ ಹಾಡಿಗಳಿಗೆ ಭೇಟಿ ನೀಡಿದ ಸಿಇಓ ; ಸಮಸ್ಯೆಗಳ ಆಲಿಕೆ
ಈ ಪ್ರಶಸ್ತಿಯು ಸುಮಯಾ ಅವರ ಪರಿಶ್ರಮ ಮತ್ತು ಬದ್ಧತೆಗೆ ಸಂದ ಗೌರವವಾಗಿದೆ. ರಾಜ್ಯ ಮಟ್ಟದ ಪ್ರಶಸ್ತಿ ಸಮಾರಂಭದಲ್ಲಿ ಅವರ ಸಾಧನೆಯನ್ನು ಗುರುತಿಸಿ ಗೌರವಿಸಲಾಗುತ್ತದೆ. ಈ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್‌ನ ಹಿರಿಯ ಅಧಿಕಾರಿ ಮಖಾಂದರ, ಗಣ್ಯರು ಮತ್ತು ಕುಟುಂಬ ಸದಸ್ಯರಾದ ಜಾಫರ್ ಗೇಟಿನ್, ಇಸ್ಮಾಯಿಲ್ ಗೇಟಿನ್ ಹಿರಿಯ ವಕೀಲರು ಅಭಿನಂದಿಸಿದ್ದಾರೆ.
ಸುಮಯಾ ಅವರ ಈ ಸಾಧನೆಗೆ ಅವರ ಶಾಲೆಯ ಮುಖ್ಯೋಪಾಧ್ಯರು ಹಾಗೂ ಶಿಕ್ಷಕರು, ಸ್ನೇಹಿತರು ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್‌ನ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.