ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಶೇ 90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಭೋವಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹ ಭೋವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಭೋವಿ ಸಮಾಜದ ಕೊಪ್ಪಳ ಜಿಲ್ಲಾಧ್ಯಕ್ಷ ಎಸ್ ಕೆ ಮಾಲಗತ್ತಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದ ವತಿಯಿಂದ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರವನ್ನು ಜುಲೈ 18 ರಂದು ಚಿತ್ರದುರ್ಗ ಗುರುಪೀಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತ ಭೋವಿ ಸಮಾಜದ ವಿದ್ಯಾರ್ಥಿಗಳು ತಮ್ಮ ಸ್ವವಿವರದ ಅರ್ಜಿಯೊಂದಿಗೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ಪಾಸ್‌ಪೋರ್ಟ್ ಫೋಟೋ, ಬ್ಯಾಂಕ್ ಪಾಸ್ ಬುಕ್, ಅರ್ಜಿಯಲ್ಲಿ ಅಕೌಂಟ್ ನಂಬರ್, ಐಎಫ್‌ಎಸ್ಸಿ ಕೋಡ್‌ನೊಂದಿಗೆ ಜೂನ್ 30ರ ಒಳಗಾಗಿ ಅರ್ಜಿ ಸಲ್ಲಿಸಿ” ಎಂದು ತಿಳಿಸಿದರು.
ಇದನ್ನೂ ಓದಿ: ಕೊಪ್ಪಳ | ಕೊಲೆಗೆ ಯತ್ನಿಸಿದ ಆರೋಪ ಸಾಬೀತು; ಅಪರಾಧಿಗೆ 7 ವರ್ಷ ಜೈಲು
ಪ್ರತಿಭಾ ಪುರಸ್ಕಾರ ವಿಭಾಗ: ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠ, ಶ್ರೀ ಇಮ್ಮಡಿ ನಗರ, ದಾವಣಗೆರೆ ರಸ್ತೆ, ರಾಷ್ಟ್ರೀಯ ಹೆದ್ದಾರಿ-4, ಚಿತ್ರದುರ್ಗ-577502 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ 9481308433, 9900882964, 8880999942 ಸಂಪರ್ಕಿಸಬಹುದು.