ಕೊಪ್ಪಳ | ಮಾವು ಮೇಳಕ್ಕೆ ತೆರೆ: ₹2.60 ಕೋಟಿಗೂ ಅಧಿಕ ವಹಿವಾಟು

Date:

Advertisements

ಕೊಪ್ಪಳ ʼಮಾವು ಮೇಳʼ ಸಮಾರೋಪ ಸಮಾರಂಭಕ್ಕೆ ತೆರೆ ನೀಡಿದ್ದು, ಸಮಾರೋಪದ ಕಾರ್ಯಕ್ರಮದಲ್ಲಿ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಭಾಗಿಯಾಗಿ ರೈತರಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು.

ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಜಿಲ್ಲಾ ಕೇಂದ್ರದಲ್ಲಿ ಆಯೋಜಿಸಲಾಗಿದ್ದ 14 ದಿನಗಳ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ತೆರೆ ದೊರೆತಿದ್ದು, ಮೇಳದಲ್ಲಿ ₹2.60 ಕೋಟಿಗೂ ಅಧಿಕ ವಹಿವಾಟಾಗಿದೆ.

ಕೊಪ್ಪಳ ಜಿಲ್ಲೆಯ ತೋಟಗಾರಿಕೆ ಇಲಾಖೆಯು ಮಾವು ಬೆಳೆಯುವ ರೈತರಿಗೆ ನೇರ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ 9ನೇ ವರ್ಷದ ಮಾವು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಮೇ 13ರಿಂದ ಮೇ 26ರವರೆಗೆ 14 ದಿನಗಳ ಕಾಲ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಆಯೋಜಿಸಲಾಗಿತ್ತು.

Advertisements

ರೈತರಿಗೆ ಪ್ರಮಾಣ ಪತ್ರ

ಮಾವು ಪ್ರದರ್ಶನ ಮತ್ತು ಮಾರಾಟ ಮೇಳದ ಸಮಾರೋಪ ಸಮಾರಂಭದಲ್ಲಿ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಅವರು ಭಾಗಿಯಾಗಿ, ಮೇಳದಲ್ಲಿ ಭಾಗವಹಿದ್ದ ರೈತರಿಗೆ ಪ್ರಮಾಣ ಪತ್ರಗಳನ್ನು ವಿತರಣೆ ಮಾಡಿದರು.

ಮಾವು ಮೇಳ 1 1

9ನೇ ವರ್ಷದ ಕೊಪ್ಪಳ ಮಾವು ಮೇಳ ವರದಿ

2025ರ ಮಾವು ಮೇಳವು ಹಿಂದೆಂದಿಗಿಂತಲೂ ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿ 280 ಟನ್‌ಗೂ ಹೆಚ್ಚಿನ ವಿವಿಧ ತಳಿಯ ಮಾವುಗಳನ್ನು ರೈತರು ಮಾರಾಟ ಮಾಡಿದ್ದು, ₹2.60 ಕೋಟಿಗೂ ಹೆಚ್ಚಿನ ವಹಿವಾಟು ಈ ಮೇಳದಲ್ಲಿ ದಾಖಲಾಗಿದೆ. ಮಳೆಯ ನಡುವೆಯೇ ಗ್ರಾಹಕರು ಭಾಗವಹಿಸಿ ಅತ್ಯಂತ ಖುಷಿಯಿಂದ, ʼಪ್ರತಿ ವರ್ಷದ ಮೇಳದಲ್ಲಿಯೂ ಗುಣಮಟ್ಟ ಮತ್ತು ಯೋಗ್ಯ ಬೆಲೆಯ ಮಾವು ಖರೀದಿಸಿ ಎಲ್ಲಾ ಹಣ್ಣುಗಳ ರುಚಿ ಸವಿಯುವುದು, ನಮಗೆ ಅತ್ಯಂತ ಖುಷಿ ಮತ್ತು ನೆಮ್ಮದಿಯನ್ನು ತರುತ್ತದೆ. ಇಂತಹ ಮೇಳಗಳು ಪ್ರತಿ ವರ್ಷವೂ ಹೀಗೆ ಮುಂದುವರೆಯಬೇಕುʼ ಎಂದು ಅಭಿಪ್ರಾಯ ವ್ಯಕ್ತಪಡಿಸಿರುತ್ತಾರೆ.

ಈ ಮೇಳದಲ್ಲಿ ರೈತರಿಗಾಗಿ ಮಾವಿನ ಕುರಿತು ವಿವಿಧ ತಾಂತ್ರಿಕ ಮಾಹಿತಿಗಳನ್ನು ನೀಡಲಾಯಿತು ಹಾಗೂ ನೈಸರ್ಗಿಕವಾಗಿ ಮಾವು ಮಾಗಿಸುವ ಕುರಿತು “ಎನ್‌ ರೈಪ್” ಎಂಬ ನೈಸರ್ಗಿಕ ಇಥರೆಲ್ ಪಂಚ್ ಹೋಲ್ ಪಾಕೆಟ್‌ಗಳನ್ನು ಪರಿಚಯಿಸಿ ಹಣ್ಣುಗಳನ್ನು ಮಾಗಿಸುವ ವಿಧಾನವನ್ನೂ ಕೂಡ ಇಲಾಖೆಯಿಂದ ರೈತರಿಗೆ ತಿಳಿಸಿಕೊಡಲಾಯಿತು. ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಅಭಿವೃದ್ಧಿಪಡಿಸಿರುವ ಮಾವಿನ ಹಣ್ಣುಗಳನ್ನು ಮಾಗಿಸುವ ಘಟಕವನ್ನು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಹಾಯಧನದಲ್ಲಿ ನೀಡುವ ಕುರಿತು ತಿಳಿಸಲಾಯಿತು. ಜತೆಗೆ ಪ್ರಾತ್ಯಾಕ್ಷಿಕೆಯನ್ನು ಸಹ ರೈತರಿಗೆ ಏರ್ಪಡಿಸಲಾಗಿತ್ತು.

ಮಾವು ಮೇಳ 2

ಈ ಮೇಳವು ಹಿಂದಿನ ಎಲ್ಲಾ ಮೇಳಕ್ಕಿಂತ ಉತ್ತಮ ಯಶಸ್ವಿಯಾಗಿದ್ದು, ಹೆಚ್ಚಿನ ಹಣ್ಣುಗಳ ಮಾರಾಟವಾಗಿದೆ. ಈ ಮೇಳದಲ್ಲಿ ಭಾಗವಹಿಸಲು 100ಕ್ಕೂ ಹೆಚ್ಚಿನ ರೈತರು ತಾವು ಬೆಳೆದ ಹಣ್ಣುಗಳನ್ನು ಮೇಳದಲ್ಲಿ ಮಾರಾಟ ಮಾಡಲು ಪೈಪೋಟಿಯಿಂದ ತಮ್ಮ ಹೆಸರನ್ನು ನೊಂದಾಯಿಸಿ ಮೇಳದಲ್ಲಿ ಭಾಗವಹಿಸಿದ್ದರು. ಮಾವು ಮಾರಾಟ ಮಾಡಲು ರೈತರು ಹಾಗೂ ರೈತ ಉತ್ಪಾದಕ ಸಂಘಗಳು, ಹಾಪ್ ಕಾಮ್ಸ್, ಇಲಾಖಾ ತೋಟಗಾರಿಕೆ ಕ್ಷೇತ್ರಗಳಿಗಳಿಗೆ ತಮ್ಮ ಉತ್ಪನವನ್ನು ಮಾರಾಟ ಮಾಡಲು 30ಕ್ಕೂ ಹೆಚ್ಚಿನ ಮಾರಾಟ ಮಳಿಗೆಳನ್ನು ಉಚಿತವಾಗಿ ತೆರೆಯಲಾಗಿತ್ತು. ಹೆಚ್ಚಿನ ರೈತರಿಗೆ ಆವರಣದಲ್ಲಿ ಮಾರಾಟ ಮಾಡಲು ಅನುಕೂಲ ಮಾಡಿಕೊಡಲಾಯಿತು.

ಮಾವು ಮಾರಾಟ ಮೇಳದಲ್ಲಿ ಜಿಲ್ಲೆಯ 7 ತಾಲೂಕುಗಳ ಮಾವು ಬೆಳೆಗಾರರು ಭಾಗವಹಿಸಿದ್ದರು. ರೈತರು ನೈಸರ್ಗಿಕವಾಗಿ ಮತ್ತು ವೈಜ್ಞಾನಿಕವಾಗಿ ಮಾಗಿಸಿದ 15ಕ್ಕೂ ಹೆಚ್ಚಿನ ವಿವಿಧ ಮಾವಿನ ತಳಿಯ ಹಣ್ಣುಗಳನ್ನು ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಿರುತ್ತಾರೆ. ಮೇಳದಲ್ಲಿ ಕೇಸರ್ ಮತ್ತು ದಶಹರಿ ತಳಿಯ ಮಾವು ಹಣ್ಣುಗಳಿಗೆ ಹೆಚ್ಚಿನ ಬೇಡಿಕೆ ಬಂದಿದ್ದು, 200 ಟನ್‌ಗೂ ಹೆಚ್ಚು ಮಾರಾಟವಾಗಿದೆ. ಅದೇ ರೀತಿ ಬೆನೆಶಾನ್, ಕೇಸರ್, ದಶಹರಿ, ರಸಪುರಿ, ಸ್ವರ್ಣರೇಖಾ, ಇಮಾಮ ಪಸಂಧ, ಆಪೋಸು, ಮಲ್ಲಿಕಾ, ತೋತಾಪೂರಿ, ಸಕ್ಕರೆ ಗುಟ್ಟಿ, ಖಾದರ್, ಪುನಾಸ್ ಮತ್ತು ಉಪ್ಪಿನಕಾಯಿ ತಳಿ ಸೇರಿದಂತೆ ವಿವಿಧ ತಳಿಯ ಮಾವಿನ ಹಣ್ಣುಗಳು 80 ಟನ್‌ಗೂ ಹೆಚ್ಚು ಮಾರಾಟವಾಗಿದೆ.

ಮಾವು ಮೇಳ 3

ಆಮ್ಲಟ್ ಮತ್ತು ಪುನಾಸ್ ಉಪ್ಪಿನಕಾಯಿ ಮಾವಿನ ಕಾಯಿಗೆ ಸಾರ್ವಜನಿಕರಿಂದ ಹೆಚ್ಚಿನ ಬೇಡಿಕೆ ಬಂದು ಮಾರಾಟವಾಗಿದೆ. ಮಾವಿನ ಹಣ್ಣುಗಳನ್ನು ನೈಸರ್ಗಿಕವಾಗಿ ಮತ್ತು ವೈಜ್ಞಾನಿಕವಾಗಿ ಮಾಗಿಸಿ ಗ್ರಾಹಕರಿಗೆ ಕೈಗೆಟುವ ದರದಲ್ಲಿ ರೈತರು ನೇರವಾಗಿ ಮಾರಾಟ ಮಾಡಿರುತ್ತಾರೆ. ಇದರಿಂದಾಗಿ ಗ್ರಾಹಕರಿಗೂ ಯೋಗ್ಯ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಹಣ್ಣುಗಳು ಲಭಿಸಿದ್ದು, ಅವರೂ ಕೂಡಾ ಈ ಮೇಳದಲ್ಲಿ ಸಕ್ರಿಯವಾಗಿ ಭಾಗವಹಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿದ್ದೀರಾ? ಕೇರಳದ ಹೊಸ ‘ಎನ್‌ಎಚ್‌-66’ರಲ್ಲಿ ಕುಸಿತ; ಮೋದಿ ಸರ್ಕಾರದ ಕಳಪೆ ಕಾಮಗಾರಿಗಳಿಗೆ ಹಿಡಿದ ಕನ್ನಡಿ

ರೈತರು ಜಗತ್ತಿನ ದುಬಾರಿ ಮಾವು ಆದ “ಮಿಯಾಜಾಕಿ” ತಳಿಯ ಮಾವಿನ ಸಸಿಗಳನ್ನು ವಿವಿಧ ನರ್ಸರಿಗಳಿಂದ ತಂದು ಈಗಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಜಗತ್ತಿನ ದುಬಾರಿ ಮಾವು ಆದ ಮಿಯಾಜಾಕಿ ಮುಂದಿನ ವರ್ಷದ ಕೊಪ್ಪಳ ಮಾವುಮೇಳದಲ್ಲಿ ಮಾರಾಟಕ್ಕೆ ಲಭ್ಯವಾಗುವ ಸಾಧ್ಯತೆ ಇರುತ್ತದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿರುತ್ತಾರೆ.

ಕೊಪ್ಪಳ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕೃಷ್ಣ ಸಿ. ಉಕ್ಕುಂದ, ಹಿರಿಯ ಸಹಾಯಕ ನಿರ್ದೇಶಕ ಜೆ ಶಂಕ್ರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X