ಕೊಪ್ಪಳ ನಗರ ವ್ಯಾಪ್ತಿಯಲ್ಲಿ ವಾಸವಾಗಿರುವ ಸ್ವಂತ ಮನೆ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0) ಅಡಿಯಲ್ಲಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು, ಫಲಾನುಭವಿಗಳ ಸಮೀಕ್ಷೆ ಮತ್ತು ಅರ್ಜಿ ಸಲ್ಲಿಕೆ ಅವಧಿಯನ್ನು ಜೂನ್ 30 2026ರವರೆಗೆ ವಿಸ್ತರಿಸಲಾಗಿದೆ.
ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ, ಬೆಂಗಳೂರು ವತಿಯಿಂದ ಹೊರಡಿಸಿರುವ ಸೂಚನೆಯಂತೆ, ಭಾರತ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0) ಯೋಜನೆಯಡಿ ರಾಜ್ಯದ ನಗರ ಪ್ರದೇಶಗಳಲ್ಲಿರುವ ವಸತಿ ಹಾಗೂ ನಿವೇಶನ ರಹಿತ ಕುಟುಂಬಗಳ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಕೊಪ್ಪಳ ನಗರ ವ್ಯಾಪ್ತಿಯಲ್ಲಿ ಸ್ವಂತ ಮನೆ ಅಥವಾ ನಿವೇಶನ ಹೊಂದಿರದ ಅರ್ಹ ಫಲಾನುಭವಿಗಳು ನಿಗಮದ ಆನ್‌ಲೈನ್ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿ, ಅದರ ಸ್ವೀಕೃತಿ ಪತ್ರದೊಂದಿಗೆ ಅಗತ್ಯ ದಾಖಲಾತಿಗಳನ್ನು ಸಂಬಂಧಿತ ಕಚೇರಿಗೆ ಸಲ್ಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಅರ್ಜಿ ಸಲ್ಲಿಸಲು ಕುಟುಂಬದ ಪಡಿತರ ಚೀಟಿ, ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸ್ವಂತ ಮನೆ ಅಥವಾ ನಿವೇಶನ ಹೊಂದಿಲ್ಲ ಎಂಬುದಕ್ಕೆ ನ್ಯಾಯಾಲಯದ ಅಫಿಡವಿಟ್, ಬಾಡಿಗೆ ಮನೆಯಲ್ಲಿ ವಾಸವಾಗಿರುವುದನ್ನು ದೃಢೀಕರಿಸುವ ವಿದ್ಯುತ್ ಬಿಲ್ ಹಾಗೂ ಇತ್ತೀಚಿನ ಭಾವಚಿತ್ರಗಳನ್ನು ಸಲ್ಲಿಸಬೇಕು. ಅರ್ಹ ಫಲಾನುಭವಿಗಳು ಜೂನ್ 30 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.
ನಿಗದಿತ ಅವಧಿಯ ನಂತರ ಸಲ್ಲಿಸಲಾದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಪ್ಪಳ | ನಿವೇಶನ ರಹಿತರಿಗೆ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ




