ಕೊಪ್ಪಳ | ರಸ್ತೆ ದಾಟುವಾಗ ತಲೆ ಮೇಲೆ ಹರಿದ ಗವಿಮಠದ ಟ್ರ್ಯಾಕ್ಟರ್: ಸ್ಥಳದಲ್ಲೇ ಮಹಿಳೆ ಸಾವು

Date:

ಕೊಪ್ಪಳ ನಗರದ ಗಂಜ್ ವೃತ್ತದ ಹತ್ತಿರವಿರುವ ಪವಾರ್ ಹೋಟೆಲ್ ಎದುರಿಗೆ ರಸ್ತೆ ದಾಟುವಾಗ ಚಾಪೆ ಮಾರಲು ಹೋಗುತ್ತಿದ್ದ ಮಹಿಳೆಯ ತಲೆಯ ಮೇಲೆ ಗವಿಮಠಕ್ಕೆ ಸಂಬಂಧಿಸಿದ ಟ್ರ್ಯಾಕ್ಟರ್‌ವೊಂದು ಹರಿದ ಪರಿಣಾಮ, ಆಕೆ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

- Advertisement -

ಉದ್ದನೆಯ ಚಾಪೆಗಳ ಸುರುಳಿಯನ್ನು ಹೊತ್ತು ರಸ್ತೆ ದಾಟುವಾಗ ಚಾಪೆಯ ಒಂದು ಬದಿ ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಬಡಿದಿದ್ದು, ಮಹಿಳೆ ಆಯತಪ್ಪಿ ಟ್ರ್ಯಾಕ್ಟರ್‌ನ ಹಿಂಬದಿ ಚಕ್ರಕ್ಕೆ ಸಿಲುಕಿದ್ದಾರೆ. ಅಪಘಾತದ ತೀವ್ರತೆಗೆ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
mahile 5
ಮೃತ ಮಹಿಳೆ ಗಂಗಮ್ಮ ದೊಡ್ಡಮನಿ

ಕೊಪ್ಪಳದ ಸಿದ್ಧೇಶ್ವರ ನಗರದ ಗಂಗಮ್ಮ ದೊಡ್ಡಮನಿ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಅವರಿಗೆ ಮೂವರು ಮಕ್ಕಳಿದ್ದು, ಒಂದು ಹೆಣ್ಣು, ಒಂದು ಗಂಡು ಮಗು ವಿಶೇಷ ಚೇತನ ಮಕ್ಕಳಾಗಿದ್ದು, ಕಿರಿಯ ಮಗನಿಗೂ ಮಾತು ಬರುವುದಿಲ್ಲ. ಘಟನೆಯ ಮಾಹಿತಿ ತಿಳಿದ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಕೊಪ್ಪಳ | ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಪ್ರಕರಣ; ಅಪರಾಧಿಗೆ 20 ವರ್ಷ ಜೈಲು

ಘಟನಾ ಸ್ಥಳಕ್ಕೆ ನಗರ ಪೊಲೀಸರು ಭೇಟಿ ಕೊಟ್ಟು ಟ್ರ್ಯಾಕ್ಟರ್ ವಶಕ್ಕೆ ಪಡೆದಿದ್ದು, ಅಪಘಾತದ ಬಳಿಕ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಈ ಘಟನೆಯ ಬಗ್ಗೆ ಮಾಹಿತಿ ಅರಿತಿರುವ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯವರು, ಬುಧವಾರ ಮೃತ ಮಹಿಳೆಯ ಕುಟುಂಬ ಸದಸ್ಯರನ್ನು ಭೇಟಿಯಾಗಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...