ಜಮೀನೊಂದರ ಕೃಷಿ ಹೊಂಡದಲ್ಲಿ ಸೋಮವಾರ ಆಕಸ್ಮಿಕವಾಗಿ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಕುಷ್ಟಗಿ ತಾಲ್ಲೂಕಿನ ಬಿಜಕಲ್ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಬಿಜಕಲ್ ಗ್ರಾಮದ ಮಲ್ಲಮ್ಮ ನೀಲಪ್ಪ ತೆಗ್ಗಿನಮನಿ (11) ಮತ್ತು ಬಿಜಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಗಪ್ಪ ತೆಗ್ಗಿನಮನಿ ಅವರ ಪುತ್ರ ಶ್ರವಣಕುಮಾರ (8) ಮೃತರು.
ಜಮೀನಿಗೆ ಕುಟುಂಬದವರೊಂದಿಗೆ ತೆರಳಿದ್ದಾಗ ಈ ಘಟನೆ ನಡೆದಿದೆ. ಮಳೆಯಿಂದಾಗಿ ಕೃಷಿಹೊಂಡ ತುಂಬಿಕೊಂಡಿತ್ತು. ಮಕ್ಕಳು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರಬಹುದು ಎನ್ನಲಾಗುತ್ತಿದೆ. ಹೆಚ್ಚಿನ ಮಾಹಿತಿ ಬರಬೇಕಿದೆ.