ಕೊಪ್ಪಳ | ‘ಹಬ್ ಅಂಡ್ ಸ್ಪೋಕ್’ ಹೆಸರಲ್ಲಿ ಸರ್ಕಾರಿ ಶಾಲೆ ಮುಚ್ಚಲು ಮುಂದಾದರೆ ಹೋರಾಟ: ಎಐಡಿಎಸ್‌ಒ

Date:

Advertisements

ರಾಜ್ಯ ಕಾಂಗ್ರೆಸ್‌ ಸರ್ಕಾರವು ‘ಹಬ್ ಅಂಡ್ ಸ್ಪೋಕ್’ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಜನರಿಗೆ ಮಾಡುವ ದ್ರೋಹವಾಗಿದೆ. ಇದರ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ ಎಚ್ಚರಿಕೆ ನೀಡಿದೆ.

ಕಡಿಮೆ ಹಾಜರಾತಿ ಇರುವ ಶಾಲೆಗಳನ್ನು ಇತರ ಶಾಲೆಗಳೊಂದಿಗೆ ಸಂಯೋಜನೆಗೊಳಿಸುವುದಾಗಿ ಸರ್ಕಾರವು ತಿಳಿಸಿದೆ.  ಈ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ಬಡಜನರ ಮಕ್ಕಳ ಶಿಕ್ಷಣದ ಆಶಾಕಿರಣವಾಗಿರುವ ಸರ್ಕಾರಿ ಶಾಲೆಗಳನ್ನು ಮುಚ್ಚಲು  ಮುಂದಾಗಿದೆ. 4 ಸಾವಿರಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರದ ಈ ನಡೆಯನ್ನು ಎಐಡಿಎಸ್ಓ ಕರ್ನಾಟಕ ರಾಜ್ಯ ಸಮಿತಿಯು ಅತ್ಯುಗ್ರ ಪದಗಳಲ್ಲಿ ಖಂಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ಕೂಡ ಇದೇ ನೆಪವೊಡ್ಡಿ ಎನ್ಇಪಿ-2020ರ ಅಡಿಯಲ್ಲಿ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿತ್ತು. ಅದರ ವಿರುದ್ಧ ರಾಜ್ಯದ ವಿದ್ಯಾರ್ಥಿಗಳು ಎಐಡಿಎಸ್ಒ ನೇತೃತ್ವದಲ್ಲಿ ಬೃಹತ್ ಆಂದೋಲನ ನಡೆಸಿ 35 ಲಕ್ಷಕ್ಕೂ ಹೆಚ್ಚು ಸಹಿಗಳನ್ನು ಸಂಗ್ರಹಿಸುವುದರ ಮೂಲಕ ಶಾಲೆಗಳನ್ನ ರಕ್ಷಿಸಿದ್ದರು. ಆದರೆ, ಈಗ ಮತ್ತೆ ಸರ್ಕಾರಿ ಶಾಲೆಗಳನ್ನು ಮುಚ್ಚುವುದರ ಮುಖಾಂತರ ಕಾಂಗ್ರೆಸ್‌ ಸರ್ಕಾರ ರಾಜ್ಯದ ರೈತ-ಕಾರ್ಮಿಕರು ಹಾಗೂ ಜನ ಸಾಮಾನ್ಯರಿಗೆ ವಿಶ್ವಾಸದ್ರೋಹವೆಸಗಿದೆ. ಬಡವರ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಿತ್ತುಕೊಳ್ಳುವ ಹುನ್ನಾರ ಇದಾಗಿದೆ ಎಂದು ಅಸಮಾಧಾನ ಹೊರಹಾಕಿತು.

Advertisements

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಈ ಮಣ್ಣಿನ ಮಕ್ಕಳ ಕಾವ್ಯ ಮಾತೃಮೂಲವಾದದ್ದು: ಕವಿ ದೇವೇಂದ್ರಪ್ಪ ಜಾಜಿ

ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚುವುದು, ‘ನೆಗಡಿ ಬಂದರೆ ಮೂಗು ಕತ್ತರಿಸಿದಂತೆ’ ಸರ್ಕಾರವು ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನವಿರೋಧಿ ನಿರ್ಧಾರವನ್ನು ಕೈಬಿಡಬೇಕು ಹಾಗೂ ಕೂಡಲೇ ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಅವಶ್ಯಕ ಸೌಲಭ್ಯಗಳನ್ನು ನೀಡಿ ರಕ್ಷಿಸಬೇಕೆಂದು ಎಐಡಿಎಸ್ಒ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತದೆ ಹಾಗೂ ಇದರ ವಿರುದ್ಧ ಪ್ರಬಲ ಪ್ರತಿರೋಧ ಚಳುವಳಿ ಬೆಳೆಸಬೇಕೆಂದು ರಾಜ್ಯದ ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಣಪ್ರೇಮಿ ಜನತೆಗೆ ಕರೆ ನೀಡಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X