ಕೊಪ್ಪಳ | ‘ಗೃಹಲಕ್ಷ್ಮಿ’ ಹಣದಲ್ಲಿ ರಸ್ತೆ ದುರಸ್ತಿ ಮಾಡಿಸಿದ ಮಹಿಳೆ; ಗ್ರಾಮಸ್ಥರ ಮೆಚ್ಚುಗೆ

Date:

ಕಾಂಗ್ರೆಸ್‌ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಬಂದ ಹಣವನ್ನು ಕೂಡಿಟ್ಟಿದ್ದ ಮಹಿಳೆಯೊಬ್ಬರು, ಆ ಹಣದಲ್ಲಿ ತಮ್ಮ ಗ್ರಾಮದ ರಸ್ತೆ ದುರಸ್ತಿ ಮಾಡಿಸಿದ್ದಾರೆ. ಗ್ರಾಮಸ್ಥರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಮೂಲಕ ಮಾದರಿಯಾಗಿದ್ದಾರೆ.

- Advertisement -

ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಯರೇಹಂಚಿನಾಳ ಗ್ರಾಮದ ಮಹಿಳೆ ಸವಿತಾ ಉಮೇಶ ನಾಗರೆಡ್ಡಿ ಅವರು ತಮಗೆ ದೊರೆತ ಗೃಹಲಕ್ಷ್ಮಿ ಹಣವನ್ನು ಗ್ರಾಮಕ್ಕಾಗಿ ವ್ಯಯಿಸಿದ್ದಾರೆ. ತಮ್ಮ ಗ್ರಾಮ ಯರೇಹಂಚಿನಾಳ ಮತ್ತು ಪಕ್ಕದ ಗ್ರಾಮ ಕೊಟುಮಚಗಿ ನಡುವಿನ 4 ಕಿ.ಮೀ ರಸ್ತೆಗೆ ಚಾಚಿಕೊಂಡಂತೆ ಬೆಳೆದಿದ್ದ ಮುಳ್ಳುಕಂಟಿ, ಬೇಲಿಗಳನ್ನು ಸ್ವಚ್ಛಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬೇಲಿಗಳು ಬೆಳೆದಿದ್ದರಿಂದ ರಸ್ತೆಯು ಬಹಳ ಕಿರಿದಾಗಿತ್ತು. ರೈತರು, ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಇದನ್ನು ಗಮನಿಸಿದ ಮಹಿಳೆ ಸವಿತಾ ಅವರು ತಮಗೆ ಗೃಹಲಕ್ಷ್ಮಿ ಯೋಜನೆಯಿಂದ ಕಳೆದ 11 ತಿಂಗಳಲ್ಲಿ ದೊರೆತಿದ್ದ 22 ಸಾವಿರ ರೂ.ಗಳನ್ನು ವ್ಯಯಿಸಿ, ಜೆಸಿಬಿ ಕರೆಸಿ, ಮುಳ್ಳುಕಂಟಿಗಳನ್ನು ತೆರವುಗೊಳಿಸಿದ್ದಾರೆ. ರಸ್ತೆಯ ಬದಿಯು ಜನರ ಬಳಕೆಗೆ ದೊರೆಯುವಂತೆ ಮಾಡಿದ್ದಾರೆ.

“ರಸ್ತೆ ಬದಿಯ ಮುಳ್ಳುಕಂಟಿಗಳನ್ನು ತೆರವುಗೊಳಿಸಿ, ರಸ್ತೆಯಲ್ಲಿ ದುರಸ್ತಿ ಮಾಡಿಸಬೇಕೆಂದು ಕ್ಷೆತ್ರದ ಶಾಸಕರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದೆವು. ಆದರೆ, ಯಾವುದೇ ಪ್ರಯೋಜವಾಗಲಿಲ್ಲ. ರಸ್ತೆ ದುರಸ್ತಿಗೆ ಶಾಸಕರು ಆಸಕ್ತಿ ವಹಿಸಲಿಲ್ಲ. ಸವಿತಾ ಅವರು ತಮ್ಮ ಸ್ವಂತ ಹಣ ಬಳಸಿ, ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಂಡಿದ್ದಾರೆ. ಅವರ ಕೆಲಸ ಶ್ಲಾಘನೀಯ” ಎಂದು ರೈತ ಮುಖಂಡ ಅಂದಪ್ಪ ಕೋಳೂರು ಹೇಳಿರುವುದಾಗಿ ‘ಪಿವಿ‘ ವರದಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ...

ಬಾಗಲಕೋಟೆ | ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಗಮನಾರ್ಹ ಸೇವೆ...