ಕೊಪ್ಪಳ | ಬಸವಣ್ಣನ ವಿರುದ್ಧ ಯತ್ನಾಳ್ ಅವಹೇಳನಕಾರಿ ಹೇಳಿಕೆ; ಶಾಸಕ ಸ್ಥಾನದಿಂದ ವಜಾಗೊಳಿಸಲು ಬಸವದಳ ಆಗ್ರಹ

Date:

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬಗ್ಗೆ ವಿಜಯಪುರದ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್‌ ಅವಹೇಳನಕಾರಿಯಾಗಿ ಮಾತನಾಡಿರುವುದರಿಂದ ಕೂಡಲೇ ಶಾಸಕ ಸ್ಥಾನದಿಂದ ವಜಾಗೊಳಿಸಿ, ಶಿಸ್ತು ಕಾನೂನು ಕ್ರಮ ಜರುಗಿಸಬೇಕು ಎಂದು ಬಸವದಳ ಸಂಘಟನೆಯಿಂದ ಪ್ರತಿಭಟನೆ ನಡೆಸಿದರು.

- Advertisement -

ಗಂಗಾವತಿ ನಗರದ ಬಸ್ ನಿಲ್ದಾಣದ ಸರ್ಕಲ್‌ನಲ್ಲಿ ಯತ್ನಾಳ್‌ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕುವ ಮೂಲಕ ಘೋಷಣೆ ಕೂಗಿ ಖಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ವಿಜಯಪುರದ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ಇತ್ತೀಚೆಗೆ ತಮ್ಮ ಪಕ್ಷದ ವತಿಯಿಂದ ಬೀದರ್‌ನಲ್ಲಿ ವಕ್ಫ್ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡುತ್ತ, ಕನ್ನಡ ನಾಡಿನ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಲಿಂಗೈಕ್ಯದ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿ, ಬಸವಣ್ಣನವರಿಗೆ ಅಪಮಾನವೆಸಗಿದ್ದಾರೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಘೋಷಣೆಯಾಗೇ ಉಳಿದ ನೈಟ್ ಲೈಫ್; ಜಾರಿ ಮಾಡುವುದನ್ನು ಮರೆತ ಸರ್ಕಾರ

“ಬಸನಗೌಡ ಪಾಟೀಲ್ ಯತ್ನಾಳ್‌ ವಕ್ಫ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು, ಎಲ್ಲರೂ ದಂಗೆ ಏಳಬೇಕು. ಇಲ್ಲದಿದ್ದರೆ ಬಸವಣ್ಣ ಹೊಳೆಗೆ ಹಾರಿದಂತೆ ಹಾರಬೇಕಾಗುತ್ತದೆ, ಇಲ್ಲವೇ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಬೇಕಾಗುತ್ತದೆಂದು ವಿವಾದಾತ್ಮಕ ಹೇಳಿಕೆ ನೀಡಿರುವುದು ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಯತ್ನಾಳ್ ಹೇಳಿಕೆಯು ಬಸವಣ್ಣನವರ ಬಗ್ಗೆ ಹಗುರವಾಗಿ ಕೆಳಮಟ್ಟದ ವ್ಯಕ್ತಿತ್ವವನ್ನು ತೋರಿಸಿದ್ದು, ಇವರ ವಿರುದ್ಧ ಶಿಸ್ತು ಕಾನೂನು ಕ್ರಮ ಕೈಗೊಂಡು‌, ಇವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು” ಎಂದು ಆಗ್ರಹಿಸಿದರು.

ಈ ವೇಳೆ ದಿಲೀಪ ಕುಮಾರ್ , ವೀರೇಶ್ ಆಸರೆಡ್ಡಿ , ಕೆ ವೀರೇಶಪ್ಪ , ಹೆಚ್ ಮಲ್ಲಿಕಾರ್ಜುನ ಇನ್ನಿತರರು ಉಪಸ್ಥಿತರಿದ್ದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...