ಕೊಪ್ಪಳ | ಗ್ರಾಮ ಪಂಚಾಯತಿಗೆ ಜಿಪಂ ಸಿಇಒ ಭೇಟಿ; ವಸತಿ ಯೋಜನೆ ಪರಿಶೀಲನೆ

Date:

Advertisements

ವಿವಿಧ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಕೊಪ್ಪಳದ ಗೊಂಡಬಾಳ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಪರಿಶೀಲಿಸಿದರು.

“ಗ್ರಾಮ ಪಂಚಾಯತಿಯಿಂದ ವಿವಿಧ ವಸತಿ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆ ಮಾಡುತ್ತಿದ್ದು, ಹಂತವಾರು ಸಹಾಯಧನ ಫಲಾನುಭವಿಗಳಿಗೆ ದೊರಕುವಂತೆ ಕ್ರಮವಹಿಸಬೇಕು. ಫಲಾನುಭವಿಗಳ ಆಯ್ಕೆ ಸಂದರ್ಭದಲ್ಲಿ ಕಾಯ್ದಿರಿಸಿದ ಪಟ್ಟಿಯಲ್ಲಿರುವವರಿಗೆ ಮನೆ ಮಂಜೂರಾತಿ ಮಾಡಬೇಕು” ಎಂದು ಪಂಚಾತ್ ಅಭಿವೃದ್ದಿ ಅಧಿಕಾರಿಗೆ ಸೂಚಿಸಿದರು.

2018-19 ರಿಂದ 2025-26ನೇ ಸಾಲಿನ ವರೆಗೆ ಮನೆ ಮಂಜೂರಾತಿಯಾಗಿರುವ ಫಲಾನುಭವಿಗಳ ಪಟ್ಟಿಯನ್ನು ಖುದ್ದು ಪರಿಶೀಲಿಸಿ, ಗ್ರಾಮ ಪಂಚಾಯತಿಯಲ್ಲಿ ವಸತಿರಹಿತರು ಮತ್ತು ನಿವೇಶನರಹಿತರ ಒಂದು ಅಂತಿಮ ಪಟ್ಟಿಯನ್ನು ಸಿದ್ದಪಡಿಸಿಕೊಂಡು ಗ್ರಾಮ ಪಂಚಾಯತಿಗೆ ಮನೆ ಮಂಜೂರಾದ ಸಂದರ್ಭದಲ್ಲಿ ಅರ್ಹರಿಗೆ ಮನೆ ಮಂಜೂರಾತಿ ನೀಡಬೇಕೆಂದು ನಿರ್ದೇಶಿಸಿದರು.

Advertisements

ಸಂಜೀವಿನಿ ಒಕ್ಕೂಟದ ಸದಸ್ಯರು ಪ್ರತಿ ಮನೆಗೆ ತೆರಳಿ ತ್ಯಾಜ್ಯ ಸಂಗ್ರಹಣೆ ಶುಲ್ಕವನ್ನು ಪಾವತಿಸುವಂತೆ ಮನವೊಲಿಸುವಂತೆ ಒಕ್ಕೂಟದ ಸದಸ್ಯರಿಗೆ ಸೂಚಿಸಿದರು. ಇದರಿಂದ ಗ್ರಾಮದಲ್ಲಿ ಕಸ ವಿಲೇವಾರಿಯಾಗುವುದರ ಜೊತೆಗೆ ಗ್ರಾಮ ನೈರ್ಮಲ್ಯದಿಂದ ಕೂಡಿರುತ್ತದೆ. ಕಸ ಸಂಗ್ರಹಣೆ ಮತ್ತು ಪ್ರತ್ಯೇಕಿಸುವ ಸಲುವಾಗಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ವೇತನ ಪಾವತಿಗೆ ಅನುಕೂಲವಾಗುತ್ತದೆ ಎಂದರು.

ಪ್ರತಿ ಮನೆಗೆ ತಿಂಗಳಿಗೆ ರೂ.30 ಹಾಗೂ ಹೊಟೆಲ್‌ಗಳಿಗೆ ರೂ.50 ನಿಗದಿಪಡಿಸಲಾಗಿದ್ದು, ಈ ತಿಂಗಳು ಹೆಚ್ಚಿನ ಪ್ರಮಾಣದಲ್ಲಿ ತ್ಯಾಜ್ಯ ಸಂಗ್ರಹಣೆ ಶುಲ್ಕವನ್ನು ವಸೂಲಾತಿ ಮಾಡಬೇಕೆಂದು ಒಕ್ಕೂಟದ ಸದಸ್ಯರಿಗೆ ಸೂಚಿಸಿದರು.

ಇದನ್ನೂ ಓದಿ: ಕೊಪ್ಪಳ | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ

ಗ್ರಾಮದ ಕೂಸಿನ ಮನೆಗೆ ಭೇಟಿ ನೀಡಿ ಮಕ್ಕಳು ದಾಖಲಾಗಿರುವ ಕುರಿತು ಕೇರ್ ಟೇಕರ್ಸ್‌ಗಳ ಬಳಿ ಮಾಹಿತಿ ಪಡೆದರು. ಪ್ರಸ್ತುತ 29 ಮಕ್ಕಳು ಪ್ರತಿ ದಿನ ಕೂಸಿನ ಮನೆಗೆ ಬರುತ್ತಿದ್ದು ಬೆಳಗ್ಗೆ ಹಾಲು, ಬಾಳೆಹಣ್ಣು, ದಾಲ್ ಕಿಚಡಿ, ಹೆಸರುಬೇಳೆ ಪಾಯಸ, ಶಾವಿಗೆ ಪಾಯಸ, ಮೊಟ್ಟೆ ನೀಡುತ್ತಿರುವ ಕುರಿತು ವಿವರಿಸಿದರು. ಕೇರ್ ಟೇಕರ್ಸ್‌ಗಳಿಗೆ ಸರಿಯಾದ ಸಮಯಕ್ಕೆ ವೇತನ ನೀಡವಂತೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಕಾಶ ವಿ, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಮಹೇಶ್, ಪಂಚಾಯ‌ತ್ ಅಭಿವೃದ್ದಿ ಅಧಿಕಾರಿ ಜಯಲಕ್ಷ್ಮೀ, ತಾಲೂಕು ಐಇಸಿ ಸಂಯೋಜಕ ದೇವರಾಜ ಪತ್ತಾರ, ಗ್ರಾಮ ಪಂಚಾಯತಿ ಸದಸ್ಯ ಕೊಟ್ರೇಶ್, ಗ್ರಾಮ ಪಂಚಾಯತ್ ಕಾರ್ಯದರ್ಶಿ ಗವಿಸಿದ್ದಯ್ಯ ಹಾಗೂ ಗ್ರಾಮ ಪಂಚಾಯತ ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X