ಕೊಪ್ಪಳ | ದಾಖಲೆ ಇಲ್ಲದೇ ಸಾಗಿಸುತ್ತಿದ್ದ 60 ಲಕ್ಷ ರೂ. ಹಣ ವಶ; ನಾಲ್ವರ ಬಂಧನ

Date:

  • ಖಚಿತ ಮಾಹಿತಿ ಆಧಾರದ ಮೇಲೆ ದಾಳಿ
  • ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನೆ

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಸಾಗಣೆ, ಮದ್ಯ ಮಾರಾಟ ಹಾಗೂ ಇನ್ನಿತರ ಅಕ್ರಮಗಳ‌‌‌ ಮೇಲೆ ಜಿಲ್ಲಾ ಪೊಲೀಸ್ ಇಲಾಖೆಯು ತೀವ್ರ ನಿಗಾ ಇಟ್ಟಿರುವ ಪೊಲೀಸ್‌ ಅಧಿಕಾರಿಗಳು ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಲಕ್ಷಾಮತರ ಹಣ ಜಪ್ತಿ ಮಾಡಿದ್ದಾರೆ.

ಮಾ.24ರ ತಡರಾತ್ರಿ ಕೊಪ್ಪಳದಿಂದ ಗಂಗಾವತಿ ಕಡೆ ತೆರಳುತ್ತಿದ್ದ ಕೆಎ-37/ಎನ್-4323 ಸಂಖ್ಯೆಯ ಕಾರಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬಸಾಪಟ್ಟಣದ ಹತ್ತಿರ ದಾಳಿ ಮಾಡಿ, 500 ರೂ. ಮುಖಬೆಲೆಯ 60 ಲಕ್ಷ ರೂ. ಹಣ ಜಪ್ತಿ ಮಾಡಿದ್ದಾರೆ.

ಕಾರಿನಲ್ಲಿದ್ದ ವೆಂಕಟೇಶ ಸಿಂಗನಾಳ, ವೀರಭದ್ರಪ್ಪ ಪಲ್ಲೇದ, ವಿರುಪಾಕ್ಷಗೌಡ ಪಾಟೀಲ್‌, ಕಾರು ಚಾಲಕ ಅಬ್ದುಲ್ ರಜಾಕ್ ಎಂಬುವವರನ್ನು ವಿಚಾರಣೆ ನಡೆಸಿ, ದಾಖಲೆಗಳನ್ನು ನೀಡದ ಹಿನ್ನಲೆಯಲ್ಲಿ ಗಂಗಾವತಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ಹಣದ ಮೂಲ ಪರಿಶೀಲಿಸಲು ಆದಾಯ ತೆರಿಗೆ ಅಧಿಕಾರಿಗಳಿಗೆ ಪತ್ರ ವ್ಯವಹಾರ ಮಾಡಲಾಗಿದ್ದು, ದಾಖಲೆ ಇಲ್ಲದ 60 ಲಕ್ಷ ರೂಪಾಯಿ ಹಣ ಹಾಗೂ 5 ಲಕ್ಷ ಬೆಲೆಯ 1 ಕಾರು ವಶಪಡಿಸಿಕೊಂಡಿರುವುದಾಗಿ ಎಸ್ಪಿ ಕಚೇರಿಯ ಪ್ರಕಟಣೆ ಹೊರಡಿಸಿದೆ.

ಅಧಿಕಾರಿ ಸಿಬ್ಬಂದಿಗೆ ಅಭಿನಂದನೆ

ಕೊಪ್ಪಳ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಯಶೋಧ ವಂಟಗೋಡಿ ಅವರು ಅಕ್ರಮ ಹಣ ಸಾಗಣೆ ಮೇಲೆ ವಿಶೇಷ ನಿಗಾ ವಹಿಸಿ ದಾಳಿ ನಡೆಸಿದ್ದ ಗಂಗಾವತಿಯ ಡಿವೈಎಸ್ಪಿ ಶೇಖರಪ್ಪ ಹೆಚ್ ಹಾಗೂ ಗಂಗಾವತಿ ಗ್ರಾಮೀಣ ಪೊಲೀಸ್‌ ಠಾಣೆಯ ಸಿಬ್ಬಂದಿಯ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೀತಿ ಆಯೋಗದ ಸಭೆಗೆ ಹಾಜರಾಗದೆ ಕರ್ನಾಟಕಕ್ಕೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ : ಬಿಜೆಪಿ

ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗುವ ಮೂಲಕ ರಾಷ್ಟ್ರಮಟ್ಟದಲ್ಲಿ ಕರ್ನಾಟಕಕ್ಕೆ...

ಪನಿಶ್ಮೆಂಟ್‌ಗೆ ಆಸ್ಪದ ಕೊಡಬೇಡಿ, ಒಳ್ಳೆ ಕೆಲಸ ಮಾಡಿ: ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಎಚ್ಚರಿಕೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ 'ಪನಿಶ್ಮೆಂಟ್ ಮಾಡೋದು ದೊಡ್ಡ...

ಟಿ.ನರಸೀಪುರ ಬಳಿ ಭೀಕರ ಅಪಘಾತ | 10 ಮಂದಿ ಸಾವು; ಹಲವರಿಗೆ ಗಂಭೀರ ಗಾಯ

ಮೈಸೂರು ಜಿಲ್ಲೆ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ- ಟಿ.ನರಸೀಪುರ...

ಧಾರವಾಡ | ರಿಯಲ್‌ ಎಸ್ಟೇಟ್‌ ಉದ್ಯಮಿ ಕೊಲೆ ಪ್ರಕರಣ; ಆರು ಮಂದಿ ಆರೋಪಿಗಳ ಬಂಧನ

ಧಾರವಾಡದ ಕಮಲಾಪುರ ಹೊರವಲಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಕೊಲೆ...