ಕೊಪ್ಪಳ | ಅಂಬೇಡ್ಕರ್ ಸಮಾಜವೊಂದರ ಸೂರ್ಯ ಅಲ್ಲ; ಎಲ್ಲಾ ಸಮುದಾಯದ ಬೆಳಕು: ರಾಜೂರು

Date:

ಅಂಬೇಡ್ಕರ್ ಕೇವಲ ಒಂದು ಸಮಾಜದ ಸೂರ್ಯ ಅಲ್ಲ, ಪ್ರತಿ ಸಮಾಜ ಬೆಳಕು. ಅವರ ಜ್ಞಾನ ಸಂಪತ್ತು ಗಳಿಸಿಕೊಂಡರೆ ನಮ್ಮ ಆರ್ಥಿಕ, ರಾಜಕೀಯ, ಸಾಮಾಜಿಕ, ರಾಜಕೀಯ ಸಂಪತ್ತು ಸಿಗುತ್ತವೆ. ಎಂದು ಉಪನ್ಯಾಸಕ ಆರ್‌ಪಿ ರಾಜೂರು ಹೇಳಿದರು.

- Advertisement -

ಕುಕನೂರು ತಾಲೂಕು ಮನ್ನಾಪೂರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಗ್ರಾಮ ಘಟಕ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

“ಅಂಬೇಡ್ಕರ್ ಮೂರ್ತಿ ಪೂಜೆ ಮಾಡುವುದನ್ನ ವಿರೋಧಿಸಿದವರು. ಮೂರ್ತಿ ಸ್ಥಾಪನೆಯಲ್ಲಿ ಹೆಚ್ಚು ಆಸಕ್ತಿ ವಹಿಸಿದಷ್ಟು ಅವರ ಚಿಂತನೆಗೆ ಮಹತ್ವ ಕೊಟ್ಟಿಲ್ಲ. ಇಂದಿನ ಮಕ್ಕಳೂ ಅವರಂತೆ ಓದಬೇಕು. ಆದರೆ, ಇಂದಿನ ಯುವ ಪೀಳಿಗೆಯ ಆಲೋಚನೆಗಳು ಭಿನ್ನ ಇರುವುದನ್ನ ನೋಡಿದರೆ ಆತಂಕವಾಗುತ್ತದೆ. ಮೂಢನಂಬಿಕೆ ತೊಲಗಿಸಿ ವೈಚಾರಿಕತೆ ತೊಡಗಿಸಿಕೊಳ್ಳಬೇಕು. ಅಂಬೇಡ್ಕರ್ ಅವರ ಬದುಕಿನ ಕೃತಿಗಳನ್ನ ಓದಿ ಅವರನ್ನು ಅರ್ಥ ಮಾಡಿಕೊಳ್ಳಬೇಕು” ಎಂದರು.

ಕುಕನೂರು ಅನ್ನದಾನೇಶ್ವರ ಶಾಖಾಮಠದ ಮಹದೇವ ಮಹಾಸ್ವಾಮಿ ಮಾತನಾಡಿ, “ದಲಿತರು ಅಂಬೇಡ್ಕರ್ ಬಿಟ್ಟುಕೊಡಬೇಕು, ಲಿಂಗಾಯತರು ಬಸವಣ್ಣನ್ನು ಬಿಟ್ಟುಕೊಡಬೇಕು, ಕುರುಬರು ಕನಕದಾಸರನ್ನು ಬಿಟ್ಟುಕೊಡಬೇಕು. ಹೀಗೆ ಆಯಾ ಜಾತಿಯ ದಾರ್ಶನಿಕರನ್ನ ತಮ್ಮ ಜಾತಿಗೆ ಸೀಮಿತಗೊಳಿಸದೇ ಅವರನ್ನ ಅವರ ಚಿಂತನೆಗಳನ್ನ ಜಗತ್ತಿನಲ್ಲಿ ಪಸರಿಸಬೇಕು. ಆ ಸಮಾಜದಲ್ಲಿ ಮೀಸಲಿಡಲಬಾರದು. ಅಂಬೇಡ್ಕರ್ ಬಿದ್ದವರನ್ನ ಎಬ್ಬಿಸಿದವರು. ಅಂಬೇಡ್ಕರ್ ಅನುಯಾಯಿಗಳು ಎಂದುಕೊಂಡವರು, ಇಂದು ಅವರ ಮಕ್ಕಳು ರಸ್ತೆಯಲ್ಲಿ ಸಾರಾಯಿ ಬಾಟ್ಲಿ ಹಿಡ್ಕೊಂಡು ಕುಳಿತಿರುತ್ತಾರೆ ಇದು ದುರಂತ. ಒಳ್ಳೆಯ ಶಿಕ್ಷಣ ಪಡೆದು ಬಾಬಾ ಸಾಹೇಬ್‌ರಂತೆ ಸಾಧನೆ ಮಾಡುತ್ತಿಲ್ಲ. ದುಶ್ಚಟಗಳಿಗೆ ಅಂಟಿಕೊಳ್ಳುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

WhatsApp Image 2025 06 08 at 2.54.02 PM

ಪಿಎಸ್ಐ ಪ್ರವೀಣ ಬೀಳಗಿ ಮಾತನಾಡಿ, “ಇವತ್ತು ಮೂರ್ತಿ ಯಾಕೆ ಬೇಕು ಎಂಬ ವಿಚಾರ ಬರುತ್ತದೆ. ಪಠ್ಯಕ್ರಮದಲ್ಲಿ ಓದಿದರೆ ಅದರ ಬಗ್ಗೆ ಆ ವ್ಯಕ್ತಿ ಬಗ್ಗೆ ತಿಳಿಯಲ್ಲ. ಆ ಮೂರ್ತಿ ಪ್ರತಿಷ್ಠಾಪನೆಯಾಗಬೇಕು ಅದನ್ನು ತೋರಿಸಿ ಅವರ ಕೊಡುಗೆ ಬಗ್ಗೆ ತಿಳಿಸಿ ಹೇಳುವಂತದ್ದಾಗಬೇಕು. ಮೂರ್ತಿ ಕೇವಲ ಪೂಜೆಗೆ ಮೀಸಲಾಗದೆ, ಅವರ ಆದರ್ಶಗಳನ್ನು ಜಿವನದಲ್ಲಿ‌ ಅಳವಡಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ನಮ್ಮ ಮಕ್ಕಳು ಅಂಬೇಡ್ಕರ್ ಅವರ ದಾರಿಯಲ್ಲಿ ಸಾಗುವಂತೆ ಪ್ರೇರೇಪಿಸಬೇಕು. ಮಾನವ ಅಂದ ಮೇಲೇ ಮಾನವೀಯತೆ ಇರಬೇಕು. ನಾವು ಯಾವುದೇ ಜಾತಿಗೆ, ದೇವರಿಗೆ, ಧರ್ಮಕ್ಕೆ ಮೀಸಲಾಗಬಾರದು, ಅದನ್ನು ಮೀರಿ ಮಾನವೀಯತೆ ಬೆಳೆಸಿಕೊಳ್ಳಬೇಕು” ಎಂದರು.

ಇದನ್ನೂ ಓದಿ: ಕೊಪ್ಪಳ | ಕತ್ತು ಹಿಸುಕಿ ಪತ್ನಿಯನ್ನು ಕೊಂದ ಪತಿ

ಮಾಂತೇಶ ಬೂದಗುಂಪ ಮಾತನಾಡಿ, “ಜಾತಿ ತಾರತಮ್ಯ ಈ ದೇಶದಿಂದ ಸಂಪೂರ್ಣ ತೊಲಗಿಲ್ಲ. ಸ್ವತಂತ್ರ ಉದ್ಯೋಗ ಸೃಷ್ಟಿಸಿಕೊಳ್ಳಬೇಕು. ಸಮಾಜದಲ್ಲಿ ಆರ್ಥಿಕವಾಗಿ ಸಬಲರಾಗಬೇಕು. ಸ್ವತಂತ್ರ ಆರ್ಥಿಕ ಮೂಲಗಳನ್ನು ನಾವು ಕಟ್ಟಿಕೊಳ್ಳಬೇಕು. ಅಂಬೇಡ್ಕರ್ ವಿಚಾರಗಳನ್ನು, ಆದರ್ಶಗಳನ್ನ ನಮ್ಮ ‌ಮಕ್ಕಳಲ್ಲಿ ಬಿತ್ತುವಂತ ಕೆಲಸವಾಗಬೇಕು” ಎಂದರು.

ಕಾರ್ಯಕ್ರಮದಲ್ಲಿ ಪ್ರಕಾಶ ಹಳ್ಳಿಗುಡಿ, ಕಳಕಪ್ಪ ಹಳ್ಳಿ, ಬಸನಗೌಡ ಪಾಟೀಲ್, ಶಿವಕುಮಾರ್ ಹರಿಜನ, ಹೇಮನಗೌಡ ಬೆನ್ನಳ್ಳಿ, ಶಿವಶರಣ ಗದಿಗೆಪ್ಪ, ಮಹೇಶ ಹಿರೇಮನಿ, ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

ಕೋಲಾರ | ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಎನ್. ಸಂಪಂಗಿ

ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು...