ಕೊಪ್ಪಳ | ಅಲ್ಪಸಂಖ್ಯಾತರ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

Advertisements

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2025-26ನೇ ಸಾಲಿಗಾಗಿ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಡಾ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶೇ.75 ಮತ್ತು ಇತರೆ ವರ್ಗದವರಿಗೆ ಶೇ.25ರಷ್ಟು ಸೀಟುಗಳನ್ನು ಮೀಸಲಿಡಲಾಗಿದೆ.

ಅಲ್ಪಸಂಖ್ಯಾತರ ವರ್ಗದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಹಾಗೂ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ₹2.50 ಲಕ್ಷ ಮಿತಿಯೊಳಗಿರಬೇಕು. ಹಿಂದುಳಿದ ವರ್ಗಗಳ 2ಎ, 3ಎ ಮತ್ತು 3ಬಿ ಅಭ್ಯರ್ಥಿಗಳು ಹಾಗೂ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ₹2.50ಲಕ್ಷ ಮಿತಿಯಲ್ಲಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ₹2.50 ಲಕ್ಷ ಮಿತಿಯೊಳಗಿರಬೇಕು

Advertisements

ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನವಾಗಿದ್ದು, ಪೋಷಕರು ಅಥವಾ ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಸೇವಾಸಿಂಧು ಪೋರ್ಟಲ್‌ನಲ್ಲಿ ವೆಬ್‌ ಸೈಟ್ https://sevasind-huservices.karnataka.gov. in dom.karnataka. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು 5ನೇ gov.in/koppal/publicನಲ್ಲಿ ಅಥವಾ ನೇರವಾಗಿ ಹತ್ತಿರದ ವಸತಿ ಶಾಲೆ, ಮಾಹಿತಿ ಕೇಂದ್ರ ಕಚೇರಿಗಳಲ್ಲಿ ಎಲ್ಲ ದಾಖಲೆಗಳೊಂದಿಗೆ ಕೊನೆಯ ದಿನಾಂಕದೊಳಗಾಗಿ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಕುಕನೂರು, ತಳಕಲ್, ಕುದರಿಮೋತಿ, ಚಿಕ್ಕ-ಕನಕಲ್, ಹಿರೇಬೆಣ-ಕಲ್-1, ಹಿರೇ-ಬೆಣಕಲ್-2, ಹಿರೇಬನ್ನಿಗೋಳ(ಕುಷ್ಟಗಿ), ಹಿಟ್ನಾಳ, ಮುಧೋಳ, ಹುಲಿಹೈದರ್‌ದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಹಿರೇಸಿಂದೋಗಿಯ ಅಲ್ಪಸಂಖ್ಯಾತ ನವೋದಯ ಮಾದರಿ ವಸತಿ ಶಾಲೆ, ಯಲ್ಬುರ್ಗ, ಕುಷ್ಟಗಿ ಹಾಗೂ ಗಂಗಾವತಿ ತಾಲೂಕು ಅಲ್ಪಸಂಖ್ಯಾತ ಹಾಗೂ ಜಿಲ್ಲಾ ಅಲ್ಪಸಂಖ್ಯಾತ ಮಾಹಿತಿ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು.

ಭರ್ತಿ ಮಾಡಿದ ಅರ್ಜಿಯೊಂದಿಗೆ ಕಂದಾಯ ಇಲಾಖೆಯ ತಹಶೀಲ್ದಾರ್ ನೀಡಿದ ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹಾಗೂ ವಿದ್ಯಾರ್ಥಿಯ ಪಾಸ್ ಪೋರ್ಟ್ ಅಳತೆಯ ಇತ್ತೀಚಿನ 4 ಭಾವಚಿತ್ರಗಳೊಂದಿಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಅಪೂರ್ಣವಾದ ಮತ್ತು ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ : ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತ ಕಚೇರಿ ಹಾಗೂ ತಾಲೂಕು ಅಲ್ಪಸಂಖ್ಯಾತ ಮಾಹಿತಿ ಕೇಂದ್ರದ ದೂ.ಸಂ:-2, 08539-225070, 8088892549, ತಾಲೂಕು ಅಲ್ಪಸಂಖ್ಯಾತ ಮಾಹಿತಿ ಕೇಂದ್ರಗಳಾದ ಗಂಗಾವತಿ ಮೊ.ಸಂ: -9972524670. ಕುಷ್ಟಗಿ ಮೊ.ಸಂ: 8861610578 ಹಾಗೂ ಯಲಬುರ್ಗಾ ಮೊ.ಸಂ: 9620522537ಕ್ಕೆ ನವೋದಯ ಮಾದರಿಯ ವಸತಿ ಶಾಲೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಮೀರ್ ಅಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X