ಕೊಪ್ಪಳ | ಕೈಗಾರಿಕಾ ವಿಸ್ತರಣೆ ವಿರೋಧಿಸಿ ಫೆ.24ರಂದು ʼಬಂದ್ʼ

Date:

ನಗರಕ್ಕೆ ಹೊಂದಿಕೊಂಡಂತೆ ನಿರ್ಮಾಣ ಮಾಡಲಾಗುತ್ತಿರುವ ಬಿಎಸ್‌ಪಿಎಲ್‌ ಕಾರ್ಖಾನೆ ನಿರ್ಮಾಣ ವಿರೋಧಿಸಿ ಎಮ್‌ಎಸ್‌ಪಿ‌ಎಲ್, ಬಿಎಸ್‌ಪಿ‌ಎಲ್ ವಿರೋಧಿ ಹೋರಾಟ ಸಮಿತಿಯು ಫೆ.24ರಂದು ಕೊಪ್ಪಳ ಜಿಲ್ಲಾ ಬಂದ್‌ಗೆ ಕರೆ ನೀಡಿದೆ.

- Advertisement -

ನಿನ್ನೆ ಸಂಜೆ ನಗರದ ಸಾಹಿತ್ಯ ಭವನದಲ್ಲಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಕೊಪ್ಪಳ ತಾಲೂಕಿನಲ್ಲಿ ಈಗಾಗಲೇ 202ಕ್ಕೂ ಹೆಚ್ಚು ಸಣ್ಣ, ಮಧ್ಯಮ ಹಾಗೂ ಬೃಹತ್‌ ಕಾರ್ಖಾನೆಗಳು ಚಾಲ್ತಿಯಲ್ಲಿವೆ. ಅವುಗಳಲ್ಲಿ 20 ಐರನ್‌ ಕಾರ್ಖಾನೆಗಳಿದ್ದು, ಸುತ್ತಲಿನ ಹತ್ತಾರು ಹಳ್ಳಿಗಳಲ್ಲಿ ಪರಿಸರ ನಾಶವಾಗಿದೆ. ಪರಿಸ್ಥಿತಿ ಹೀಗಿರುವಾಗ ಇದೀಗ ಕೊಪ್ಪಳ ನಗರಕ್ಕೆ ಹೊಂದಿಕೊಂಡೇ ಹೊಸ ಕಾರ್ಖಾನೆ ನಿರ್ಮಾಣ ಆಗುತ್ತಿರುವುದು ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.

ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ಮಾತನಾಡಿ, “ಬುಲ್ಡೋಟಾ ಉಕ್ಕು ಕಾರ್ಖಾನೆ, ವಿದ್ಯುತ್ ಅಣುಸ್ಥಾವರ ಜಿಲ್ಲೆಗೆ ಬೇಡವೇ ಬೇಡ. ಗಿಣಿಗೇರಿ, ಅಲ್ಲನಗರ, ಹಾಲವರ್ತಿ, ಸಣ್ಣಕಲ್ಲ ಹಾಗೂ ಮುಂತಾದ ಗ್ರಾಮಗಳ ಜನರು ರೋಗಗಳಿಂದ ನರಳುತ್ತಿದ್ದಾರೆ. ಕೆಮ್ಮು, ದಮ್ಮು, ಕ್ಯಾನ್ಸರ್‌ನಂತ ಮಾರಕ ರೋಗಗಳಿಂದ ಬಳಲುತ್ತಿದ್ದಾರೆ. ರೋಗ ಹರಡುವ ಕೈಗಾರಿಕೆಗಳು ಕೊಪ್ಪಳ ಜಿಲ್ಲೆಗೆ ಬೇಡ. ಕೈಗಾರಿಕಾ ವಿಸ್ತರಣಾ ನೀತಿಯನ್ನು ಒಕ್ಕೊರಲಿನಿಂದ ವಿರೋಧಿಸೋಣ” ಎಂದರು.

ಮಾರಕ ಖಾಯಿಲೆಗೆ ತುತ್ತಾಗಿ ಸಾವನಪ್ಪಿದ ವ್ಯಕ್ತಿಯ ಕುಟುಂಬಸ್ಥ ರಮೇಶಗೌಡ ಮಾತನಾಡಿ, “ನಮ್ಮ ನೆಲ, ಜಲ, ರಕ್ಷಿಸಿಕೊಳ್ಳುವ ಹೊಣೆ ನಮ್ಮದು. ಮಕ್ಕಳ ಉದ್ಯೋಗದ ಆಸೆಗೆ ಬಲಿಯಾಗಿ ನಮ್ಮ ಭೂಮಿಯನ್ನು ಕೈಗಾರಿಕಾ ಕಂಪನಿಗಳಿಗೆ ಕೊಟ್ಟು ಈಗಾಗಲೇ ತಪ್ಪು ಮಾಡಿದ್ದೇವೆ. ನಿತ್ಯವೂ ಒಂದಲ್ಲ ಒಂದು ರೀತಿಯ ಮಾರಕ ಖಾಯಿಲೆಗೆ ನಮ್ಮ ಮಕ್ಕಳು ತುತ್ತಾಗುತ್ತಿವೆ. ನಿತ್ಯ ತಾಯಂದಿರ, ಕುಟುಂಬದ ಗೋಳು ಕೇಳುವವರಿಲ್ಲ. ಇದು ಮುಂದಿನ ಪೀಳಿಗೆಗೆ ಮಾರಕ. ಇಂತಹ ಕೈಗಾರಿಕೆ ಕಾರ್ಖಾನೆಗಳನ್ನ ಧಿಕ್ಕರಿಸೋಣ” ಎಂದು ಕರೆಕೊಟ್ಟರು.

ಸಾಮಾಜಿಕ ಹೋರಾಟಗಾರ ಡಿ.ಎಚ್.ಪೂಜಾರ ಮಾತನಾಡಿ, “ನಾವು ನಮ್ಮ ಮಕ್ಕಳಿಗೆ ಶಿಕ್ಷಣ, ಮೂಲ ಸೌಕರ್ಯ ಒದಗಿಸಿಕೊಡಿ ಎಂದರೆ ಸರ್ಕಾರ ಉದ್ಯೋಗ ಸೃಷ್ಟಿಯ ನೆಪದಲ್ಲಿ ಮಾರಕ ಖಾಯಿಲೆ ತರುವ ಕೈಗಾರಿಕಾ ಕಂಪನಿಗಳನ್ನು ತಂದು ಜಿಲ್ಲೆಯನ್ನು ರೋಗಗ್ರಸ್ತ ಪ್ರದೇಶವನ್ನಾಗಿ ಮಾಡುತ್ತಿದೆ. ‘ಕಾರ್ಖಾನೆ ಮುಚ್ಚಬೇಡಿ ಇದರಿಂದ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಕುಂಠಿತವಾಗುತ್ತದೆ ಅಂತ ಹೋರಾಟ ಮಾಡುವ ಬದಲು, ಸ್ಥಾಪಿಸಬೇಡಿ ಕಾರ್ಖಾನೆಗಳು ಕಲ್ಯಾಣ ಕರ್ನಾಟಕದಲ್ಲಿ ಮಾರಕ ರೋಗ ಹರಡುತ್ತಿವೆ ಅಂತ ಹೋರಾಟ ಮಾಡುವ ಪರಿಸ್ಥಿತಿ ಬಂದಿದೆ. ಹಾಗಾಗಿ ಕಲ್ಯಾಣ ಕರ್ನಾಟಕದ ಯಾವ ಭಾಗದಲ್ಲೂ ನಮಗೆ ಕೈಗಾರಿಕಾ ಕಂಪನಿಗಳು ಬೇಡ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಮಗು ಮನುಕುಲದ ಆಸ್ತಿಯಾಗಬೇಕು: ಮೇಘಾಲಯ ರಾಜ್ಯಪಾಲ ಚಂದ್ರಶೇಖರ

ಇನ್ನು ಕೊಪ್ಪಳ ಬಂದ್‌ಗೆ ಹಲವು ಧಾರ್ಮಿಕ ಗುರುಗಳು, ಮುಖಂಡರು, ಪ್ರಗತಿಪರರು, ಪರಿಸರವಾದಿಗಳು, ಆಕಾಶವಾಣಿ ಮಾಜಿ ಅಧಿಕಾರಿಗಳು, ವಿಜ್ಞಾನಿಗಳು ಬೆಂಬಲ ಸೂಚಿಸಿದ್ದಾರೆ. ಸುಮಾರು 50 ಸಾವಿರಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆ ಇದೆ ಎಂದು ಸಭೆಯ ಮುಖಂಡರು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...