ಕೊಪ್ಪಳ | ಬಸಪ್ಪ, ಚಂದ್ರಶೇಖರ, ದೇವೇಂದ್ರಕುಮಾರ್‌ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Date:

2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಕೊಪ್ಪಳ ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 3 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು, ಚಂದ್ರಶೇಖರ ಮಾಲಿಪಾಟೀಲ್ ‘ಸಹಕಾರ ಕ್ಷೇತ್ರ’ಕ್ಕೆ, ದೇವೇಂದ್ರಕುಮಾರ ಪತ್ತಾರ ‘ಸಂಗೀತ ಕ್ಷೇತ್ರ’ಕ್ಕೆ ಹಾಗೂ ಬಸಪ್ಪ ಭರಮಪ್ಪ ಚೌಡ್ಕಿ ‘ಜಾನಪದ ಕ್ಷೇತ್ರ’ ಸೇವೆಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

- Advertisement -

ಬಸಪ್ಪ ಭರಮಪ್ಪ ಚೌಡ್ಕಿ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ತೆಗ್ಗಿಹಾಳ ಗ್ರಾಮದಲ್ಲಿ ಜನಿಸಿದ್ದಾರೆ. ಬಾಲ್ಯದಿಂದಲೂ ಚೌಡ್ಕಿ ಪದ, ಗೀಗೀ ಪದ, ಶ್ರೀಕೃಷ್ಣ ಪಾರಿಜಾತ, ಮೊಹರಂ ಪದಗಳು, ತತ್ವಪದಗಳು ವಿವಿಧ ಕಲಾಪ್ರಕಾರಗಳಲ್ಲಿ ಗಾಯಕರಾಗಿ, ವಾದಕರಾಗಿ, ನಟ, ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ಈವರೆಗೂ 4500ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಿರುತ್ತಾರೆ. ಅನೆಕ ರಾಜ್ಯ ಹಾಗೂ ಕೇಂದ್ರದ ಸರಕಾರಿ ಆಯೋಜಿತ ಪ್ರತಿಷ್ಟಿತ ಕಾರ್ಯಕ್ರಮಗಳಲ್ಲಿ ತಮ್ಮ ಕಲಾಪ್ರದರ್ಶನ ಮಾಡಿದ್ದಾರೆ. ತತ್ವಪದ ಹಾಗೂ ಚೌಡ್ಕಿ ಜಾನಪದ ಕಲೆ ತಮ್ಮ ಕುಟುಂಬದ ಪಾರಂಪರಿಕ ಕಲೆಯನ್ನು ಇಂದಿಗೂ ಉಳಿಸಿಕೊಂಡು ಬಂದಿದ್ದಾರೆ. ಕುಟುಂಬದ ಮೂಲ ಕಲಾಪ್ರಕಾರವನ್ನು ತಮ್ಮ ಶಿಷ್ಯ ಬಳಗಕ್ಕೆ ಕಲಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಚಂದ್ರಶೇಖರಗೌಡ ಮಾಲಿಪಾಟೀಲ್ ಕೊಪ್ಪಳ ಜಿಲ್ಲೆ, ಕುಷ್ಟಗಿ ತಾಲೂಕಿನ ಗುಮಗೇರ ಗ್ರಾಮದಲ್ಲಿ ಜನಿಸಿದರು. ಸಿಂಧನೂರಲ್ಲಿ ಬಿಎ ಪದವಿ ಮುಗಿಸಿದ್ದಾರೆ. 1978-79 ರಲ್ಲಿ ಪ್ರಥಮ ದರ್ಜೆ ಕಾಲೇಜ್ ಸಿಂಧನೂರಿನಲ್ಲಿ ವಿದ್ಯಾರ್ಥಿ ಸಂಘಕ್ಕೆ ಸಹ-ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಕಾಲೇಜ್ ದಿನಗಳಲ್ಲಿ ‌ಅನೇಕ ವಿದ್ಯಾರ್ಥಿ ಸಂಘಟನೆಯ ಜವಾಬ್ದಾರಿಯನ್ನು ಹೊತ್ತು ಕೆಲಸ ಮಾಡಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಬೆಂಗಳೂರು, ಜಿಲ್ಲಾ ಸಹಕಾರ ಯೂನಿಯನ್ ನಿ., ರಾಯಚೂರು, ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ, ಜಿಲ್ಲಾ ಯುವ ಮಹಾಮಂಡಳ ನಿ., ಕೊಪ್ಪಳ, ಪಿಕಾರ್ಡ ಬ್ಯಾಂಕ್ ನಿ., ಕುಷ್ಟಗಿ, ಶ್ರೀ ಹೇಮರಡ್ಡಿ ಮಲ್ಲಮ್ಮ ಪತ್ತಿನ ಸಹಕಾರ ಸಂಘ ನಿ.. ಕುಷ್ಟಗಿ, ಶ್ರೀ ವಿಜಯಚಂದ್ರಶೇಖರ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ವಿಶ್ವಸ್ಥ ಮಂಡಳಿ ಕುಷ್ಟಗಿ ಅದ್ಯಕ್ಷರಾಗಿ ಕಾರ್ಯನಿರ್ವಿಸಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘ-ಸಂಸ್ಥೆಯ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದಾರೆ.

ಪ್ರಸ್ತುತ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳ ಬೆಂಗಳೂರು, ರಾಯಚೂರು ಜಿಲ್ಲಾ ಕೇಂದ್ರ ಸಹಕಾರಿ ಮಧ್ಯವರ್ತಿ ಬ್ಯಾಂಕ್  ರಾಯಚೂರು ಪಿಕಾರ್ಡ ಬ್ಯಾಂಕ್ ನಿ., ಕುಷ್ಟಗಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗುಮಗೇರಾ, ಶ್ರೀ ಹೇಮರಡ್ಡಿ ಮಲ್ಲಮ್ಮ ಪತ್ತಿನ ಸಹಕಾರ ಸಂಘ ಕುಷ್ಟಗಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಹಾಗೂ ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್, ಸಾಧನಾ ಶಿಕ್ಷಣ ಸಂಸ್ಥೆ ಕುಷ್ಟಗಿ, ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ಕುಷ್ಟಗಿ ಅದ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ದೇವೇಂದ್ರ ಕುಮಾರ್ ಪತ್ತಾರ ದೇವೇಂದ್ರಕುಮಾರ ಪತ್ತಾರ್ ಕೊಪ್ಪಳ ಜಿಲ್ಲೆ, ಯಲಬುರ್ಗಾ ತಾಲೂಕಿನ ಮುದೋಳ ಗ್ರಾಮದಲ್ಲಿ 14ನೇ ಡಿಸೆಂಬರ್ 1955ರಲ್ಲಿ ಜನಿಸಿದ್ದಾರೆ. ಪದ್ಮಭೂಷಣ ಡಾ. ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರಲ್ಲಿ ಹಿಂದುಸ್ಥಾನಿ ಶಾಸ್ತ್ರೀಯ ಗಾಯನ ಹಾಗೂ ಸುಗಮ ಸಂಗೀತವನ್ನು ಗ್ವಾಲಿಯರ್ ಘರಾಣಾ ಪದ್ಧತಿಯಲ್ಲಿ ಹಾಗೂ ಪಂಚಾಕ್ಷರ ಗದಗ ಘರಾಣಾ ಪರಂಪರೆಯಲ್ಲಿ 12 ವರ್ಷಗಳ ಕಾಲ ಗುರುಕುಲ ಪದ್ಧತಿಯಂತೆ ತರಬೇತಿ ಪಡೆಯುತ್ತಾರೆ.

1978 ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ “ವಿದ್ವತ್ ಗ್ರೇಡ್ ಹಾಗೂ ಗಂಧರ್ವ ಮಹಾವಿದ್ಯಾಲಯ ಮಂಡಳಿಯ “ಸಂಗೀತ ವಿಶಾರದ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ 1983 ರಿಂದ ಆಕಾಶವಾಣಿ ಧಾರವಾಡ ಗುಲ್ಬರ್ಗ ಕೇಂದ್ರದ ಬಿ.ಹೈ ಶ್ರೇಣಿಯ ಕಲಾವಿದರಾಗಿ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದ್ದಾರೆ. 1982ರಲ್ಲಿ ಸಂಡೂರಿನ ಎಸ್.ಆ‌ರ್.ಎಸ್‌. ಶಾಲೆಯಲ್ಲಿ ಸಂಗೀತ ಶಿಕ್ಷಕರಾಗಿ ಸೇವೆಯನ್ನು ಆರಂಭಿಸಿ ಇವರು ಗಾನಯೋಗಿ ಪಂ. ಪಂಚಾಕ್ಷರ ಗವಾಯಿಗಳ ಹೆಸರಿನಲ್ಲಿ ಸಂಗೀತ ಶಾಲೆಯನ್ನು ಆರಂಭಿಸಿ ನೂರಾರು ವಿದ್ಯಾರ್ಥಿಗಳಿಗೆ ಉಚಿತವಾಗಿ ಸಂಗೀತ ತರಬೇತಿಯನ್ನು ನೀಡುತ್ತಾ ಬಂದಿದ್ದು, ಇವರ ಶಿಷ್ಯತ್ವದಲ್ಲಿ ಹಲವಾರು ಜನ ಕಲಾವಿದರಾಗಿ-ಸಂಗೀತ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮುಂದುವರೆದು ಇವರ ಸೇವೆಯು ಮುದಗಲ್ ಹಾಗೂ ಸಿಂಧನೂರು ಪಟ್ಟಣದಲ್ಲಿ ತಮ್ಮ ಸಂಗೀತ ಸಂಸ್ಥೆಯಡಿಯಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ಸಂಗೀತ ಪಾಠ ಮಾಡುವುದಲ್ಲದೇ ಪ್ರತಿವರ್ಷ ಸಂಗೀತ ಸಮಾರಂಭಗಳನ್ನು ಏರ್ಪಡಿಸಿ, ಪ್ರತಿಭಾನ್ವಿತ ವಿದ್ಯಾರ್ಥಿಗಳ ಕಲಾ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುತ್ತಾ ಕಲಿಕೆಗೆ ಉತ್ತೇಜನ ನೀಡುತ್ತಾ ಬಂದಿದ್ದಾರೆ. ಹಾಗೂ ನಾಡಿನ ಹಿರಿಯ ಕಲಾವಿದರಿಂದ ಸಂಗೀತ ಕಛೇರಿಯನ್ನು ಏರ್ಪಡಿಸಿ ಜನರಲ್ಲಿ ಸಂಗೀತ ಬೆಳವಣಿಗೆ ಕುರಿತು ಅಭಿರುಚಿಯನ್ನು ಉಂಟು ಮಾಡಿ ಗುರು ಪುಟ್ಟರಾಜ ಗವಾಯಿಗಳ ಅಪ್ಪಣೆಯಂತೆ ಕಲಾ ಸೇವೆಗೈಯ್ಯುತ್ತ ಬಂದಿದ್ದಾರೆ.

ಈ ಸುದ್ಧಿ ಓದಿದ್ದೀರಾ? ಹುಬ್ಬಳ್ಳಿ | ಗಬ್ಬು ನಾರುತ್ತಿದೆ ಕೆಂಪಕೆರೆ ಉದ್ಯಾನವನ; ಎಚ್ಚೆತ್ತುಕೊಳ್ಳುವರೇ ಅಧಿಕಾರಿಗಳು?

“ಕೊಪ್ಪಳ ಜಿಲ್ಲೆಗೆ ಕಳೆದ ಬಾರಿ ಇಬ್ಬರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಈ ಬಾರಿ‌ 3 ಜನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದ್ದು ಜಿಲ್ಲೆಗೆ ಹೆಮ್ಮೆ ತರುವ ಸಂಗತಿಯಾಗಿದೆ” ಎಂದು 2024ರ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಂಡಾಯ ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರು ಅಭಿಪ್ರಾಯ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....