ಕೊಪ್ಪಳ | ಜೇನು ದಾಳಿ; ಆಸ್ಪತ್ರೆಯಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು

Date:

  • ಕ್ರೈಸ್ತ ಕಿಂಗ್ ಶಾಲೆಯ ಆವರಣದಲ್ಲಿದ್ದ ಮರದಲ್ಲಿ ಗೂಡು ಕಟ್ಟಿದ್ದ ಜೇನು
  • ಜೇನು ದಾಳಿಗೆ ಒಳಗಾದ ಮೂವರಿಗೆ ಕುಷ್ಟಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ

ಜೇನುನೊಣಗಳ ದಾಳಿಗೆ ಒಳಗಾಗಿದ್ದರೂ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲೇ ಪರೀಕ್ಷೆ ಬರೆದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿಯ ಕ್ರೈಸ್ತ ಕಿಂಗ್‌ ಶಾಲೆಯಲ್ಲಿ ನಡೆದಿದೆ.

ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಟಗಿಯ ಆದರ್ಶ ವಿದ್ಯಾಲಯದ 6ನೇ ತರಗತಿ ದಾಖಲಾತಿಗೆ ಸಂಬಂಧಿಸಿದಂತೆ ಭಾನುವಾರ(26) ನಿಗದಿಯಾಗಿದ್ದ ಪ್ರವೇಶ ಪರೀಕ್ಷೆಗೆ ಹೋಗುವಾಗ ವಿದ್ಯಾರ್ಥಿಗಳ ಮೇಲೆ ಜೇನುನೊಣಗಳು ದಾಳಿ ನಡೆಸಿವೆ. ದಾಳಿಗೆ ಒಳಗಾದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿಯೇ ಪರೀಕ್ಷೆ ಬರೆದಿದ್ದಾರೆ. 

ಜಿಲ್ಲೆಯ ಕುಷ್ಟಗಿ ತಾಲೂಕಿನ ಬುತ್ತಿಬಸವೇಶ್ವರ ಪ್ರೌಢಶಾಲೆ ಹಾಗೂ ಜೂನಿಯರ್‌ ಕಾಲೇಜು, ಗುರುಚನ್ನಬಸವೇಶ್ವರ ಪ್ರೌಢಶಾಲೆ, ಬಾಲಕಿಯರ ಸರ್ಕಾರಿ ಜೂನಿಯರ್‌ ಕಾಲೇಜು (ಪ್ರೌಢಶಾಲೆ ವಿಭಾಗ), ಬಾಲಕರ ಜೂನಿಯರ್‌ ವಿಭಾಗ (ಪ್ರೌಢಶಾಲೆ ವಿಭಾಗ), ಸಂಗೊಳ್ಳಿ ರಾಯಣ್ಣ ಪ್ರೌಢಶಾಲೆ, ಕ್ರೈಸ್ತ ಕಿಂಗ್‌ ಶಾಲೆಗಳು ಪ್ರವೇಶ ಪರೀಕ್ಷಾ ಕೇಂದ್ರಗಳಾಗಿದ್ದವು.

ಕುಷ್ಟಗಿ ತಾಲೂಕಿನ ಹಿರೇಮನ್ನಾಪುರ, ತಳುವಗೇರಾ, ನಿಡಶೇಷಿ ಸೇರಿದಂತೆ ಹಲವು ಗ್ರಾಮಗಳಿಂದ ವಿದ್ಯಾರ್ಥಿಗಳು ಕ್ರೈಸ್ತ ಕಿಂಗ್‌ ಶಾಲೆಯಲ್ಲಿ ಪರೀಕ್ಷೆ ಬರೆಯಲು ಬಂದಾಗ ಈ ಘಟನೆ ನಡೆದಿದೆ. ಶಾಲೆಯ ಆವರಣದಲ್ಲಿ ಬೆಳೆದ ಮರದಲ್ಲಿ ಜೇನುಗೂಡು ಕಟ್ಟಿದ್ದು, ಏಕಾಏಕಿ ವಿದ್ಯಾರ್ಥಿಗಳು, ಪಾಲಕರ ಮೇಲೆ ಜೇನುನೊಣಗಳು ದಾಳಿ ಮಾಡಿವೆ. ಇದರಿಂದಾಗಿ ವಿದ್ಯಾರ್ಥಿಗಳು ಕೆಲ ಹೊತ್ತು ಆತಂಕಕ್ಕೆ ಒಳಗಾಗಿದ್ದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಜೆಎಸ್ಎಸ್ ಮಹಾವಿದ್ಯಾಪೀಠ; 1 ರಿಂದ 8ನೇ ತರಗತಿಗೆ ಅರ್ಜಿ ಆಹ್ವಾನ

“ಜೇನುನೊಣ ದಾಳಿಗೆ ಒಳಗಾದ ಹಲವು ವಿದ್ಯಾರ್ಥಿಗಳ ಪೈಕಿ ಮೂವರಿಗೆ ಕುಷ್ಟಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಒಂದು ಕೈಗೆ ಗ್ಲೂಕೋಸ್‌ ಹಾಕಿಸಿಕೊಂಡೇ ಪರೀಕ್ಷೆ ಬರೆದಿದ್ದಾರೆ. ಜೇನುನೊಣ ದಾಳಿಗೆ ಒಳಗಾದ ಯಾವ ವಿದ್ಯಾರ್ಥಿಯೂ ಪರೀಕ್ಷೆಯಿಂದ ಹೊರಗುಳಿದಿಲ್ಲ. ಆಸ್ಪತ್ರೆಯಲ್ಲಿ ನಮ್ಮ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಿ ಮೂವರು ವಿದ್ಯಾರ್ಥಿಗಳಿಗೆ ಆಸ್ಪತ್ರೆಯಿಂದಲೇ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಂ ಎ ರೆಡ್ಡೇರ್ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್; ಯುವಕನ ಬಂಧನ

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಯುವಕನನ್ನು...

ಚಿತ್ರದುರ್ಗ | ಶೋಷಿತ ಸಮುದಾಯಗಳ ಪ್ರಗತಿಯ ಹರಿಕಾರ ಬಿ ಕೃಷ್ಣಪ್ಪ

ದಲಿತ, ಶೋಷಿತ ಸಮುದಾಯಗಳ ಪ್ರಗತಿಗಾಗಿ ಶ್ರಮಿಸಿದ ಪ್ರೊ.ಬಿ ಕೃಷ್ಣಪ್ಪ ಅವರು ಸ್ಮರಣೀಯ...

ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬುವೆ : ಸಚಿವ ಶಿವರಾಜ್ ತಂಗಡಗಿ

ವಿವಿಧ ಟ್ರಸ್ಟ್‌ಗಳ ಅಧ್ಯಕ್ಷರು, ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ಸಚಿವರು ಕನ್ನಡ ಮತ್ತು ಸಂಸ್ಕೃತಿ...

ಇದು ನನ್ನ ಕೊನೆ ಚುನಾವಣೆ; ಸಕ್ರಿಯ ರಾಜಕಾರಣದಲ್ಲಿದ್ದು ಸೇವೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವರುಣಾ ಕ್ಷೇತ್ರದ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ ರಾಜ್ಯದ ಜನ ಬಿಜೆಪಿಯ...